ಹುಬ್ಬಳ್ಳಿ | ವೋಟ್ ಚೋರಿ; ಆಧಾರ ಸಹಿತವಾಗಿ ಬಹಿರಂಗ ಮಾಡುತ್ತೇವೆ: ಮಯೂರ್ ಜಯಕುಮಾರ್

Date:

ಪ್ರಜಾಪ್ರಭುತ್ವದ ಉಳಿಗಾಗಿ ಆಧಾರ ಸಹಿತವಾಗಿ ಮತಗಳ್ಳತನವನ್ನು ಬಹಿರಂಗ ಮಾಡುತ್ತಿದ್ದೇವೆ ಎಂದು, ‘ವೋಟ್ ಚೋರ್ ಗದ್ದಿ ಛೋಡ್’ (ಮತಗಳ್ಳತನ ಮಾಡಿದವರು ಅಧಿಕಾರ ಬಿಟ್ಟು ಹೋಗಲಿ) ಎಂಬ ಹೆಸರಿನ ಸಹಿ ಸಂಗ್ರಹ ಅಭಿಯಾನಕ್ಕೆ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಪಕ್ಷವು ಚಾಲನೆ ನೀಡಿದ್ದು, ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್ ಹಳೇ ಹುಬ್ಬಳ್ಳಿಯ ಬೀರಬಂದ್ ಓಣಿಯ ಮುಖ್ಯ ಸರ್ಕಲ್‌ನಲ್ಲಿ ಅಭಿಯಾನವನ್ನು ಉದ್ಘಾಟಿಸಿ, ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಮುಂದುವರೆದು, ದೇಶದ ವಿವಿಧೆಡೆ ಈ ಅಭಿಯಾನವನ್ನು ನಡೆಸಲಾಗುತ್ತಿದ್ದು, ಚುನಾವಣಾ ಆಯೋಗದ ಕುತಂತ್ರವನ್ನು ಜನರ ಮುಂದಿಡಲು ನಾವು ಪ್ರಯತ್ನಿಸುತ್ತಿದ್ದೇವೆ. ಕರ್ನಾಟಕದಲ್ಲಿ ಈಗಾಗಲೇ ಒಂದು ಕೋಟಿ ಸಹಿ ಸಂಗ್ರಹ ಮಾಡಲಾಗಿದೆ. ನಮ್ಮ ಈ ಅಭಿಯಾನವು ಆದಷ್ಟು ಬೇಗ ದೆಹಲಿ ತಲುಪಲಿದೆ. ಇದರ ಮೂಲಕ ಚುನಾವಣಾ ಆಯೋಗದ ಕುತಂತ್ರವನ್ನು ಬಯಲಿಗೆ ಎಳೆಯುತ್ತೇವೆ. “ಈ ಅಭಿಯಾನವನ್ನು ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಮಾಡುತ್ತಿಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಶಾಸಕ ಪ್ರಸಾದ್ ಅಬ್ಬಯ್ಯ ಮಾತನಾಡಿ, ನನ್ನ ಕ್ಷೇತ್ರದಲ್ಲಿಯೂ ಮತಗಳ್ಳತನವಾಗಿದೆ. ದೇಶದ ವಿವಿಧ ಕ್ಷೇತ್ರಗಳಲ್ಲಿಯೂ ಇದೇ ಪರಿಸ್ಥಿತಿ ಇದೆ. ಪ್ರಜಾಪ್ರಭುತ್ವದ ವಿರೋಧಿ ಕೃತ್ಯವಾದ ಇದರ ವಿರುದ್ಧ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಚುನಾವಣಾ ಆಯೋಗದ ವಿರುದ್ಧ ಕಿಡಿ ಕಾರಿದರು.

ಈ ವೇಳೆ ಮಾಜಿ ಸಚಿವ ಎ.ಎಂ. ಹಿಂಡಸಗೇರಿ, ಕಾಂಗ್ರೆಸ್ ಮುಖಂಡ ಆನಂದ ಗಡ್ಡದೇವರಮಠ, ವಾಕರಸಾ ಸಂಸ್ಥೆ ಮಾಜಿ ಅಧ್ಯಕ್ಷ ಸದಾನಂದ ವಿ. ಡಂಗನವರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹುಸೇನ್ ಹಳ್ಳೂರ, ಕಾಂಗ್ರೆಸ್ ಪಾಲಿಕೆ ಸದಸ್ಯರು, ವಾರ್ಡ್ ಕಾಂಗ್ರೆಸ್ ಅಧ್ಯಕ್ಷರು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಸೇರಿದಂತೆ ಗಣ್ಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...