20 ವರ್ಷದ ವಿದ್ಯಾರ್ಥಿಯೋರ್ವಳು ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ಹುಬ್ಬಳ್ಳಿಯಲ್ಲಿ ನಡೆದಿದ್ದು, ಯುವತಿಯ ಖಾಸಗಿ ಫೋಟೋ ಬಳಸಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇಲೆ ಯುವಕನನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಪ್ಯಾರಾಮೆಡಿಕಲ್ ಓದುತ್ತಿದ್ದ ಯುವತಿಯ ಜೊತೆ ಈ ಹಿಂದೆ ಪ್ರೇಮದಲ್ಲಿದ್ದ 23 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಓದಿದ್ದೀರ? ಧಾರವಾಡ | ಮೂರನೇ ಮಹಡಿಯಿಂದ ಬಿದ್ದು ವೃದ್ಧ ಸಾವು
ಯುವತಿಯು ತನ್ನ ಮಾಜಿ ಪ್ರಿಯಕರನಿಂದ ನಿರಂತರ ಕಿರುಕುಳ ಮತ್ತು ಬ್ಲ್ಯಾಕ್‌ಮೇಲ್’ನಿಂದ ಬೇಸತ್ತು ಮಹಿಳಾ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ, ಮಹಿಳೆ ಮತ್ತು ಆರೋಪಿ ಈ ಹಿಂದೆ ಸಂಬಂಧದಲ್ಲಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.