ಜಾತಿ ವ್ಯವಸ್ಥೆ ಎಲ್ಲಿಯವರೆಗೂ ಇರುತ್ತದೆಯೋ ಅಲ್ಲಿಯವರೆಗೂ ಮೀಸಲಾತಿ ಇರುತ್ತದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಹುಬ್ಬಳ್ಳಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಸರ್ವ ಸಮಾನತೆ ಬರುವವರೆಗೆ ಮೀಸಲಾತಿ ಇರುತ್ತದೆ. ತದನಂತರ ಅದನ್ನು ತೆಗೆಯವುದಾಗಿ ರಾಹುಲ್ ಗಾಂಧಿ ಹೇಳಿರಬಹುದು ಎಂದರು.
ಅಮೇರಿಕಾದಲ್ಲಿ ನಡೆದ ಸಂವಾದವೊಂದರಲ್ಲಿ ರಾಹುಲ್ ಗಾಂಧಿ ಅವರು ಮೀಸಲಾತಿ ಹಿಂಪಡಿಯುವ ಕುರಿತು ಮಾತನಾಡಿರಬಹುದು. ಆದರೆ ಜಾತಿ ವ್ಯವಸ್ಥೆ ಎಲ್ಲಿಯವರೆಗೂ ಚಾಲ್ತಿಯಲ್ಲಿ ಇರುತ್ತದೆಯೋ ಅಲ್ಲಿಯವರೆಗೂ ಮೀಸಲಾತಿ ಇರುತ್ತದೆ ಎಂದು ಹೇಳಿದರು.
ಇದನ್ನು ಓದಿದ್ದೀರಾ? ಧಾರವಾಡ | ಕುಸುಗಲ್ ಸರ್ಕಾರಿ ಶಾಲೆಯೆಂದರೆ ಅಧಿಕಾರಿಗಳಿಗೆ ತಾತ್ಸಾರ: ಗ್ರಾಮಸ್ಥರ ಆಕ್ರೋಶ
ಪತ್ರಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸಿದ ಅವರು, ಭ್ರಷ್ಟಾಚಾರದ ವಿಷಯದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿಲ್ಲ. ಬಿಜೆಪಿ ಅವಧಿಯಲ್ಲಿ ಕೆಲವು ಭ್ರಷ್ಟಾಚಾರ ನಡೆದಿರುವ ಬಗ್ಗೆ ಆರೋಪ ಕೇಳಿ ಬರುತ್ತಿದ್ದು ತನಿಖೆಗೆ ಸಚಿವರ ಸಮೀತಿ ರಚಿಸಲಾಗಿದೆ ಮತ್ತು ತನಿಖೆ ನಡೆಯುವುದರಲ್ಲಿ ತಪ್ಪಿಲ್ಲ ಎಂದರು.