ಸರಕಾರಿ ಬಸ್’ನಲ್ಲಿ ಟಿಕೆಟ್ ವಿಚಾರಕ್ಕೆ ಸಂಬಂಧಿಸಿ ಬಸ್ ಕಂಡಕ್ಟರ್ ಮೇಲೆ ಪ್ರಯಾಣಿಕರೊಬ್ಬರು ಹಿಗ್ಗಾಮುಗ್ಗಾ ತಳಿಸಿ ದೈಹಿಕ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಟಿಕೆಟ್ ವಿಚಾರಕ್ಕೆ ಜಗಳವಾಗಿ ಸರ್ಕಾರಿ ಬಸ್ ಕಂಡಕ್ಟರ್ ತಲೆಗೆ ಹೊಡೆದು, ತನ್ನ ಕಾಲಿದು ಒದ್ದು ಹಲ್ಲೆ ಮಾಡಿದ್ದು, ಸಾರ್ವಜನಿಕರು ಬಿಡಿಸಲು ಹೋದರೂ ಕೇಳದೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಕಂಡಕ್ಟರ್ ಅನ್ನು ಎಳೆದಾಡಿ ಹಲ್ಲೆ ಮಾಡಿದ್ದಾರೆ. ಈ ಕುರಿತು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.