ಪೋಷಕರು ಮೊಬೈಲ್ ಬಳಕೆ ಮಾಡಬೇಡ ಅಂದಿದ್ದಕ್ಕೆ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಬೈರಿದೇವರಕೊಪ್ಪ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನು ಸಮೃದ್ಧ ಎಂದು ಗುರುತಿಸಲಾಗಿದ್ದು, ಬಾಲಕ 13 ವರ್ಷದವನಾಗಿದ್ದ ಎಂದು ಹೇಳಲಾಗುತ್ತಿದೆ. ಓದಿನ ಕಡೆಗೆ ಗಮನ ಕೊಟ್ಟು ಚೆನ್ನಾಗಿ ವಿದ್ಯಾಭ್ಯಾಸ ಮಾಡುವಂತೆ ಪಾಲಕರು ಬುದ್ಧಿ ಹೇಳಿದ್ದಕ್ಕೆ ಮನನೊಂದ ಬಾಲಕ ಸೆಪ್ಟೆಂಬರ್ 3ರಂದು ನೇಣಿಗೆ ಶರಣಾಗಿದ್ದಾನೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಂಜಾರ ಸಂಸ್ಕೃತಿ, ಕಲೆಗೆ ರಾಷ್ಟ್ರೀಯ ಮಹತ್ವವಿದೆ: ಡಾ. ಎ ಆರ್ ಗೋವಿಂದಸ್ವಾಮಿ
ಮಗನ ಸಾವಿನಿಂದಾಗಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಎಪಿಎಂಸಿ ನವನಗರ ಪೊಲೀಸ್ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ.
