ಹುಬ್ಬಳ್ಳಿ | ಒಳಚರಂಡಿ ಕಾರ್ಮಿಕರಿಗೆ ಕಾರ್ಮಿಕ ಕಾಯ್ದೆ ಸೌಲಭ್ಯ ಒದಗಿಸಲು ಪೌರಕಾರ್ಮಿಕರ ಸಂಘದಿಂದ ಮನವಿ

Date:

ಕನಿಷ್ಠ ವೇತನ ಕಾಯ್ದೆ ಅನ್ವಯ ಮಾಸಿಕ ವೇತನ ಪಾವತಿ ಹಾಗೂ ಗುತ್ತಿಗೆ ಕಾರ್ಮಿಕ ಕಾಯ್ದೆ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡ, ಹಾಗೂ ಪೌರಕಾರ್ಮಿಕರ ಸಂಘದ ವತಿಯಿಂದ ಹುಬ್ಬಳ್ಳಿ-ಧಾರವಾಡ ಕಾರ್ಮಿಕ ಆಯುಕ್ತರಿಗೆ ಮನವಿ ಸಲ್ಲಿಸಿದರು.

- Advertisement -

ಈ ವೇಳೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ನೇರವೇತನ ಹಾಗೂ ಗುತ್ತಿಗೆ ಪೌರಕಾರ್ಮಿಕರಿಗೆ ಕನಿಷ್ಠ ವೇತನ ಕಾಯ್ದೆ 1948ರ ಅನ್ವಯ ಪ್ರತಿ ತಿಂಗಳು 7ನೇ ತಾರೀಖಿನ ಒಳಗಾಗಿ ಮಾಸಿಕ ವೇತನ ಕಡ್ಡಾಯವಾಗಿ ಪಾವತಿಸಬೇಕು. ಪಾಲಿಕೆ ಗುತ್ತಿಗೆ ಪೌರ ಕಾರ್ಮಿಕರಿಗೆ 3 ತಿಂಗಳಿಗೊಮ್ಮೆ ವೇತನ ಹಾಗೂ ನೇರವೇತನ ಪೌರಕಾರ್ಮಿಕರಿಗೆ 2 ತಿಂಗಳಿಗೊಮ್ಮೆ ವೇತನ ಪಾವತಿಸುವ ಮೂಲಕ ಶಾಸನಬದ್ಧ ಸೌಲಭ್ಯಗಳಿಂದ ಬಡ ದಲಿತ ಪೌರಕಾರ್ಮಿಕರಿಗೆ ಶೋಷಣೆ ಹಾಗೂ ವಂಚನೆ ಮಾಡಲಾಗುತ್ತಿದೆ ಎಂದು ಅರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಹೊರಗುತ್ತಿಗೆ ಮೂಲಕ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಪಾಲಿಕೆಯ ಗುತ್ತಿಗೆ ಕರಾರಿನಂತೆ ಗುತ್ತಿಗೆದಾರರು ಪ್ರತಿ ತಿಂಗಳು ತಪ್ಪದೇ ನಿಗಧಿತ ಸಮಯಕ್ಕೆ ವೇತನ ಪಾವತಿಸಿ ಪಾಲಿಕೆಗೆ ದಾಖಲೆಗಳನ್ನು ಸಲ್ಲಿಸಬೇಕು. ಈ ಹಿನ್ನೆಲೆಯಲ್ಲಿ ಗುತ್ತಿಗೆದಾರರು ಪ್ರತಿ ತಿಂಗಳು 7ನೇ ತಿಂಗಳಿನ ಒಳಗಾಗಿ ಪೌರಕಾರ್ಮಿಕರ ಮಾಸಿಕ ವೇತನ, ಇಎಸ್ಐ, ಪಿಎಫ್. ಮೊತ್ತಗಳನ್ನು ಪಾವತಿಸಿದ ನಂತರ ಅವರು ಸಲ್ಲಿಸಿದ ಗುತ್ತಿಗೆ ಬಿಲ್‌ಗಳನ್ನು ಸಂದಾಯ ಮಾಡಬೇಕು ಎಂದು ಒತ್ತಾಯಿಸಿದರು.

ಕಾರ್ಮಿಕ ಇಲಾಖೆಯಿಂದ ಗುತ್ತಿಗೆ ಲೈಸೆನ್ಸ್ ನೋಂದಣಿ ಮೂಲ ಮಾಲಿಕರಿಂದ ನೋಂದಣಿ ಪ್ರಮಾಣ ಪತ್ರ, ಗುತ್ತಿಗೆ ಕಾರ್ಮಿಕ ಕಲ್ಯಾಣ ಮತ್ತು ಆರೋಗ್ಯ ಸೌಲಭ್ಯಗಳ ಅನುಷ್ಠಾನ, ಕ್ಯಾಂಟೀನ್, ವಿಶ್ರಾಂತಿ ಕೊಠಡಿಗಳು, ನಾಮಫಲಕ ಪ್ರಕಟಣೆ, ಪ್ರಥಮ ಚಿಕಿತ್ಸೆ ಸೌಲಭ್ಯಗಳು ಒದಗಿಸುವುದು ನಡೆಯಬೇಕು. ಶಾಸನಬದ್ಧ ಕಾರ್ಮಿಕ ಕಾಯ್ದೆ ಸೌಲಭ್ಯಗಳನ್ನು ಪೌರಕಾರ್ಮಿಕರಿಗೆ ದೊರಕಿಸಿಕೊಡುವಲ್ಲಿ ನಿರ್ಲಕ್ಷ್ಯ ವಹಿಸುವ ಪಾಲಿಕೆ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಆಧುನಿಕ ಯುಗದಲ್ಲಿ ಗ್ರಂಥಾಲಯ ಶಿಕ್ಷಣ ಅವಶ್ಯಕ: ಮೇಯರ್ ರಾಮಪ್ಪ ಬಡಿಗೇರ

ಸಂಘದ ಧಾರವಾಡ ಜಿಲ್ಲಾ ಅಧ್ಯಕ್ಷ ಡಾ. ವಿಜಯ ಗುಂಟ್ರಾಳ, ಶರಣಪ್ಪ ಅಮರಾವತಿ, ಪ್ರಕಾಶ ಕಡಕೋಳ, ಸತೀಶ ಹೂಗಾರ, ಆನಂದ ಸವಣೂರ ದೇವಪ್ಪ ಮುದಿಘಾಟ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...