ಹುಬ್ಬಳ್ಳಿ | ಅಪ್ರಾಪ್ತ ಬಾಲಕಿಯನ್ನು ಚುಡಾಯಿಸಿದ್ದ ಐವರು ಆರೋಪಿಗಳ ಬಂಧನ

Date:

Advertisements

ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಚುಡಾಯಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಹಳೇಹುಬ್ಬಳ್ಳಿ ಪೊಲೀಸ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಹಳೇ ಹುಬ್ಬಳ್ಳಿಯ ಅಯೋಧ್ಯಾ ನಗರದ ನಿವಾಸಿಗಳಾದ ಶುಭಂ ತಡಸ, ಮೆಹಬೂಬ್ ಹಿತ್ತಲಮನಿ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದರು. ಬಾಲಕಿಯನ್ನು ಚುಡಾಯಿಸಲು ಈ ಇಬ್ಬರು ಆರೋಪಿಗಳೊಂದಿಗೆ ಸಹಕರಿಸಿದ ಆರೋಪದ ಮೇಲೆ ಸಾಗರ್ ಸಾತಪುತೆ, ಶ್ರೀವತ್ಸ ಬೆಂಡಿಗೇರಿ, ಸಚಿನ್ ನರೇಂದ್ರ ಎಂಬವರನ್ನೂ ಕೂಡ ಬಂಧಿಸುವಲ್ಲಿ ಪೊಲೀಸರು ಸಫಲರಾಗಿದ್ದಾರೆ.

ಇತ್ತೀಚೆಗೆ ಹಳೇಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳನ್ನು ಚುಡಾಯಿಸಿದ್ದರ ಘಟನೆ ಮಾಧ್ಯಮಗಳಲ್ಲಿ ವರದಿಯಾಗಿದ್ದವು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸಹ ಈ ಕುರಿತು ವಿಡಿಯೋಗಳು ಹರಿದಾಡಿದ್ದವು. ಈ ಘಟನೆಗೆ ಸಂಬಂಧಪಟ್ಟಂತೆ ಬಾಲಕಿಯ ಪೋಷಕರು ನೀಡಿದ ದೂರಿನ ಅನ್ವಯ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಆರೋಪಿಗಳ ಪತ್ತೆಗೆ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಎಸ್‌ ಎಚ್ ಯಳ್ಳೂರ ಮತ್ತವರ ಸಿಬ್ಬಂದಿಯನ್ನೊಳಗೊಂಡ ನೇತೃತ್ವದ ತಂಡವನ್ನು ರಚಿಸಲಾಗಿತ್ತು.

Advertisements

ಪ್ರಕರಣ ದಾಖಲಾದ ಕೇವಲ ಎರಡು ಗಂಟೆಗಳ ಒಳಗೇ ಹಳೇ ಹುಬ್ಬಳ್ಳಿಯ ಅಯೋಧ್ಯಾ ನಗರ ನಿವಾಸಿಗಳಾದ ಶುಭಂ ತಡಸ ಮತ್ತು ಮೆಹಬೂಬ್ ಹಿತ್ತಲಮನಿ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದು, ಸದರಿ ಬಾಲಕಿಯನ್ನು ಚುಡಾಯಿಸಲು ಈ ಇಬ್ಬರು ಆರೋಪಿಗಳೊಂದಿಗೆ ಸಹಕರಿಸಿದ ಸಾಗರ್ ಸಾತಪುತೆ, ಶ್ರೀವತ್ಸ ಬೆಂಡಿಗೇರಿ, ಸಚಿನ್ ನರೇಂದ್ರ ಎಂಬ ಮೂವರು ಆರೋಪಿಗಳನ್ನು ಸಹ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಬಂಧಿತರಿಂದ ಆರು ಮೊಬೈಲ್ ಫೋನ್ ಮತ್ತು ಕೃತ್ಯಕ್ಕೆ ಬಳಸಿದ್ದ ಒಂದು ದ್ವಿಚಕ್ರ ವಾಹನವನ್ನು ಪಶಪಡಿಸಿಕೊಳ್ಳಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಉಡುಪಿ | ನಟನೆಯ ಕಡೆಗೆ ಇಂದಿನ ಯುವಜನತೆ ಹೆಚ್ಚಿನ ಒಲವು: ರಂಗ ನಿರ್ದೇಶಕ ಪ್ರಸನ್ನ

ಈ ಪ್ರಕರಣದ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾದ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಎಸ್‌ ಎಚ್ ಯಳ್ಳೂರ, ಪಿಎಸ್ಐ ರುದ್ರಪ್ಪ ಗುಡುದರಿ, ಎಎಸ್ಐ ಪಿ.ಬಿ ಕಾಳೆ, ಮತ್ತು ಸಿಬ್ಬಂದಿಗಳಾ ಫಕ್ಕೀರೇಶ ಗೊಬ್ಬರಗುಂಪಿ, ಅಭಯ್ ಕನ್ನಳ್ಳಿ, ನಾಗರಾಜ್ ಕೆಂಚಣ್ಣವರ್, ಕೃಷ್ಣ ಮೋಟೆಬೆನ್ನೂರ್, ಸಂತೋಷ್ ವಲ್ಯಾಪುರ್, ರಮೇಶ್ ಹಲ್ಲೆ ಕಲ್ಲನಗೌಡ ಗುರನಗೌಡ, ವಿಟ್ಟಲ್ ಹೊಸಳ್ಳಿ, ಜಗದೀಶ್ ಗೌಂಡಿ ಯವರ ಕಾರ್ಯವೈಖರಿಯನ್ನು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಶ್ಲಾಘಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X