ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 500ಕ್ಕೂ ಹೆಚ್ಚು ಬಸ್ಸುಗಳು ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ವಿಶೇಷವಾಗಿ ಓಡಾಡಲಿವೆ.
ನವೆಂಬರ್ 10 ರಿಂದ ನವೆಂಬರ್ 19ರವರೆಗೆ ಹೆಚ್ಚುವರಿ ಬಸ್ ಸಂಚರಿಸಲಿವೆ. ನವೆಂಬರ್ 10 ಮತ್ತು 11ರಂದು ಬೆಂಗಳೂರು, ಮಂಗಳೂರು, ಪುಣೆ, ಗೋವಾಗಳಿಂದ, ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ ಸೇರಿದಂತೆ ಪ್ರಮುಖ ಸ್ಥಳಗಳಿಗೆ ಬಸ್ ತೆರಳಿವೆ.
ಮಲ್ಟಿ ಆಕ್ಸೆಲ್ ವೋಲ್ವೊ, ಸ್ಲೀಪರ್, ರಾಜಹಂಸ 50ಬಸ್‌ಗಳು, 200ವೇಗದೂತ ಸೇರಿ 250ಕ್ಕೂ ಹೆಚ್ಚು ಬಸಗಳು ಕಾರ್ಯಾಚರಣೆ ನಡೆಸಲಿವೆ.
ಸ್ಥಳೀಯ ಬಸ್ ನಿಲ್ದಾಣಗಳಿಂದ ಜಿಲ್ಲೆಯೊಳಗೆ ಮತ್ತು ನೆರೆಯ ಜಿಲ್ಲೆಗಳಿಗೆ ಪ್ರಯಾಣಿಕರ ದಟ್ಟಣೆಗೆ ತಕ್ಕಂತೆ ಹೆಚ್ಚುವರಿ ಬಸ್ ಓಡಿಸಲಾಗುವುದು ಹಾಗೂ ನವೆಂಬರ್ 15ರಿಂದ 19ರವರೆಗೆ ಸಂಸ್ಥೆಯ ವ್ಯಾಪ್ತಿಯ ಪ್ರಮುಖ ಬಸ್ ನಿಲ್ದಾಣಗಳಿಂದ ಬೆಂಗಳೂರು, ಮಂಗಳೂರು, ಗೋವಾ, ಮಹಾರಾಷ್ಟ್ರ, ಪುಣೆ ಸೇರಿದಂತೆ ರಾಜ್ಯ ಮತ್ತು ನೆರೆಯ ರಾಜ್ಯಗಳ ಪ್ರಮುಖ ಸ್ಥಳಗಳಿಗೆ 250ಕ್ಕೂ ಹೆಚ್ಚು ಬಸ್‌ಗಳು ಸಂಚರಿಸಲಿವೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.