ಹುಬ್ಬಳ್ಳಿ ನೇಹಾ ಕೊಲೆ ಪ್ರಕರಣ | ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಅಂಜುಮನ್ ಸಂಸ್ಥೆಯಿಂದ ಮನವಿ

Date:

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆಗೈದ ಆರೋಪಿ ಫಯಾಝ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ನಿನ್ನೆ(ಏಪ್ರಿಲ್ 18) ನೇಹಾ ಹಿರೇಮಠ್ ಅವರನ್ನು ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಕ್ಯಾಂಪಸ್‌ನೊಳಗೆ ನುಗ್ಗಿ ಅದೇ ಕಾಲೇಜಿನ ವಿದ್ಯಾರ್ಥಿ ಫಯಾಝ್ ಬರ್ಬರವಾಗಿ ಕೊಲೆಗೈದಿದ್ದ.

ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇತ್ತ ಸಾರ್ವಜನಿಕರು ಆಕ್ರೋಶದ ಕಿಡಿ ಹೊತ್ತಿಸಿದೆ. ಹಿಂದೂಪರ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಆರೋಪಿಯನ್ನು ಎನ್​ಕೌಂಟರ್ ಮಾಡಬೇಕೆಂದು ಆಗ್ರಹಿಸುತ್ತಿವೆ. ಇನ್ನು ಈ ಘಟನೆಯನ್ನು ಹುಬ್ಬಳ್ಳಿಯ ಅಂಜುಮನ್ ಸಂಸ್ಥೆ ಖಂಡಿಸಿದೆ. ಅಲ್ಲದೇ, ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಘಟನೆಯ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಹುಬ್ಬಳ್ಳಿ ಅಂಜುಮನ್ ಸಂಸ್ಥೆ ಮುಖ್ಯಸ್ಥ ಅಲ್ತಾಫ್, “ನೇಹಾ ಹತ್ಯೆಯನ್ನು ನಾವು ಖಂಡಿಸುತ್ತೇವೆ. ಆರೋಪಿ ಫಯಾಝ್‌ನನ್ನು ನಮ್ಮ ಕೈಗೆ ಕೊಡಿ ಅವನ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಹಾಕುತ್ತೇವೆ” ಎಂದು ಹೇಳಿಕೆ ನೀಡಿದ್ದಾರೆ.

“ಫಯಾ‌ಝ್‌ನನ್ನು ಎನ್‌ಕೌಂಟರ್ ಮಾಡುವಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದೇವೆ. ಬಿಜೆಪಿಯವರು ಇದರಲ್ಲಿ ರಾಜಕೀಯ ಮಾಡಬಾರದು. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದೇವೆ” ಎಂದು ಹೇಳಿದರು.

ಅಂಜುಮನ್ ಧಾರವಾಡದ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ನೇತೃತ್ವದ ನಿಯೋಗ ಕೂಡ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದೆ.

“ನಿನ್ನೆ ಬಿ.ವಿ.ಬಿ. ಕಾಲೇಜಿನ ಆವರಣದಲ್ಲಿ ನಡೆದ ನೇಹಾ ನಿರಂಜನ್ ಹಿರೇಮಠರವರ ಭೀಕರ ಕೊಲೆ ಪ್ರಕರಣ ವಿದ್ಯಾಕಾಶಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಧಾರವಾಡ ಜಿಲ್ಲೆಯ ಜನತೆಗೆ ಮತ್ತು ಕರ್ನಾಟಕದ ಎಲ್ಲ ವಿದ್ಯಾರ್ಥಿಗಳಿಗೆ ತುಂಬ ಆಘಾತ ಉಂಟುಮಾಡಿದೆ. ಆದ ಕಾರಣ ನಾವು ಇದನ್ನು ತೀವ್ರವಾಗಿ ಖಂಡಿಸುತ್ತೇವೆ ಮತ್ತು ವಿರೋಧಿಸುತ್ತೇವೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಕೊಲೆ ಖಂಡನೀಯ: ಕರ್ನಾಟಕ ಮುಸ್ಲಿಂ ಯುನಿಟಿ

“ಈ ಘಟನೆಗೆ ಯಾವುದೇ ರೀತಿಯ ರಾಜಕೀಯ ಮತ್ತು ಜಾತಿಯ ಬಣ್ಣ ಬಳಿಯದೇ ನಿಷ್ಪಕ್ಷಪಾತವಾಗಿ ತನಿಖೆ ಕೈಗೊಂಡು ಕೊಲೆಗೈದ ಆರೋಪಿಗೆ ಸೂಕ್ತ ಕಠಿಣ ಶಿಕ್ಷೆ ವಿಧಿಸಿ, ಮಗಳನ್ನು ಕಳೆದುಕೊಂಡ ನಿರಂಜನ ಹಿರೇಮಠರವರ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಹಾಗೂ ಆರೋಪಿಗೆ ಅತೀ ಕಠಿಣವಾದ ಶಿಕ್ಷೆ ನೀಡಬೇಕು” ಎಂದು ಪತ್ರದ ಮೂಲಕ ಸಿಎಂ ಸಿದ್ದರಾಮಯ್ಯನವರಿಗೆ ನಿಯೋಗವು ವಿನಂತಿಸಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ನೀಟ್ ಅವ್ಯವಹಾರ: ನ್ಯಾಯಾಂಗ ತನಿಕೆಗೆ ಡಿವಿಪಿ ಆಗ್ರಹ

ನೀಟ್‌ ಪರೀಕ್ಷೆಯಲ್ಲಿ ನಡೆದಿರುವ ಭ್ರಷ್ಟಾಚಾರ, ಅವ್ಯವಹಾರದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು....

ದರ್ಶನ್ ಪ್ರಕರಣ | ವಿಶೇಷ ಪ್ರಾಸಿಕ್ಯೂಟ‌ರ್ ಆಗಿ ಪಿ ಪ್ರಸನ್ನ ಕುಮಾರ್‌ ನೇಮಕ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 19 ಆರೋಪಿಗಳು...