ಹುಬ್ಬಳ್ಳಿ | ತಮ್ನಾರ್ ಯೋಜನೆಯಲ್ಲಿರುವ ಪ್ರಧಾನಿ ಮೋದಿ, ಮಹದಾಯಿ ವಿಚಾರದಲ್ಲಿ ಯಾಕೆ ಮೌನ: ಸಿದ್ದಣ್ಣ ತೇಜಿ

Date:

ತಮ್ನಾರ್ ಯೋಜನೆ ಮಧ್ಯದಲ್ಲಿ ಅರಣ್ಯವಿದೆ. ಕಾಡು ಪ್ರಾಣಿಗಳಿರುವ ಅಭಿಯಾರಣ್ಯ ಮಧ್ಯದಲ್ಲಿ ಈ ಯೋಜನೆ ಪ್ರಾರಂಭಿಸಬೇಕೆಂದು ಪ್ರಧಾನಿ ಮೋದಿ ಹೇಳುತ್ತಾರೆ. ಜನಪರ ಸಂಘಟನೆಗಳು ಸಾಕಷ್ಟು ಹೋರಾಟ ಮಾಡಿದರೂ ಪ್ರಧಾನಿಗಳು ಮಹದಾಯಿ ಬಗ್ಗೆ ಯಾಕೆ ಮೌನಿಯಾಗಿದ್ದಾರೆ ಎಂದು ರೈತ ಹೋರಾಟಗಾರ ಸಿದ್ದಣ್ಣ ತೇಜಿ ಪ್ರಶ್ನಿಸಿದರು.

- Advertisement -

ಹುಬ್ಬಳ್ಳಿಯ ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ವತಿಯಿಂದ ಕಳಸಾ ಬಂಡೂರಿ ಯೋಜನೆ ಜಾರಿಯಾಗದ ಹಿನ್ನೆಲೆಯಲ್ಲಿ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಈ ವೇಳೆ ಮಾತನಾಡಿದ ರೈತ ಹೋರಾಟಗಾರ ಸಿದ್ದಣ್ಣ ತೇಜಿ, ಕಳೆದ 40 ವರ್ಷಗಳಿಂದ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರು, ವ್ಯವಸಾಯಕ್ಕೆ ಹಾಗೂ ಕಾರ್ಖಾನೆಗಳಿಗೆ ನೀರು ಬೇಕೆಂದು ನಿರಂತರ ಹೋರಾಟ ನಡೆಯುತ್ತಾ ಬಂದಿದೆ. ತಾರತಮ್ಯ ಇರುವುದರಿಂದ ಯೋಜನೆ ಪರಿಪೂರ್ಣಗೊಂಡಿಲ್ಲ. ಪ್ರಧಾನಿ ಮೋದಿಯವರು ಗೋವಾ ಮತ್ತು ತಮ್ನಾರ್ 400 ಕೆ ವಿ ವೈರ್‌ನ ಟವರ್ ಕೂಡಿಸುವ ಮೂಲಕ ಯೋಜನೆ ಪ್ರಾರಂಭಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ರೈತ, ಕಾರ್ಮಿಕ, ಕನ್ನಡ, ದಲಿತ, ಜನಪರ ಸಂಘಟನೆಗಳು ಸಾಕಷ್ಟು ಹೋರಾಟ ಮಾಡಿದರೂ ಪ್ರಧಾನಿಗಳು ಮಹದಾಯಿ ಬಗ್ಗೆ ಮೌನಿಯಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಮ್ನಾರ್ ಯೋಜನೆ ಮಧ್ಯದಲ್ಲಿ ಅರಣ್ಯವಿದೆ. ಕಾಡು ಪ್ರಾಣಿಗಳಿರುವ ಅಭಿಯಾರಣ್ಯ ಮಧ್ಯದಲ್ಲಿ ಈ ಯೋಜನೆ ಪ್ರಾರಂಭಿಸಬೇಕೆಂದು ಪ್ರಧಾನಿ ಹೇಳುತ್ತಾರೆ. ಕಾಡಿನ ಮಧ್ಯದಲ್ಲಿ ಸರಿಸುಮಾರು ಒಂದು ಲಕ್ಷ ಮರಗಳು ಕಟಾವು ಆಗುತ್ತವೆ. ಕಾಡು ಪ್ರಾಣಿಗಳಿವೆ. ತಮ್ನಾರ್ ಯೋಜನೆಯಲ್ಲಿರುವ ಪ್ರಧಾನಿಗಳಿಗೆ ಏಕೀಕರಣದಲ್ಲಿ ಕರ್ನಾಟಕ ರಾಜ್ಯ ಇರುವುದು ಗೊತ್ತಾಗಿಲ್ಲ‌ ಅನಿಸುತ್ತದೆ. ಮಹದಾಯಿ ವಿಚಾರದಲ್ಲಿ ವನ್ಯಜೀವಿಗಳ ರಾಷ್ಟ್ರೀಯ ಸಮಿತಿ ಮಾಡುವ ‘ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ’ ಎಂಬ ತಾರತಮ್ಯವನ್ನು ಉತ್ತರ ಕರ್ನಾಟಕ‌ ಖಂಡಿಸುತ್ತದೆ ಎಂದು ಗುಡುಗಿದರು.

ಇದನ್ನು ಓದಿದ್ದೀರಾ? ಧಾರವಾಡ | ವಕ್ಫ್‌ ಆಸ್ತಿ ಪ್ರಕರಣಗಳನ್ನು ಒಂದು ತಿಂಗಳಲ್ಲಿ ಪರಿಹರಿಸಬೇಕು: ಸಚಿವ ಜಮೀರ್ ಅಹ್ಮದ್ ಸೂಚನೆ

ರಾಜ್ಯ ಸರ್ಕಾರ ಕಳಸಾ ಬಂಡೂರಿ ವಿಚಾರದಲ್ಲಿ ರಾಜಕಾರಣ ಮಾಡುವುದು ಬೇಡ. ಮತ್ತು ಒಬ್ಬರ ಮೇಲೆ ಮತ್ತೊಬ್ಬರು ಆಪಾದನೆ ಮಾಡದೆ ಬಹಿರಂಗ ಚರ್ಚೆಗೆ ಬಂದು ಮಹದಾಯಿ ಸಮಸ್ಯೆಗೆ ಇತ್ಯರ್ಥಗೊಳಿಸಲು ಹುಬ್ಬಳ್ಳಿಯಲ್ಲಿ ವೇದಿಕೆ ಕಲ್ಪಿಸಲಾಗುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರತಿನಿಧಿಗಳು ಆ ವೇದಿಕೆಗೆ ಬಂದು ಮಹದಾಯಿ ಸಮಸ್ಯೆಗಳ ಬಗ್ಗೆ ಸವಿಸ್ತಾರವಾಗಿ ಚರ್ಚಿಸಲು ಕರೆಕೊಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....