ಹುಬ್ಬಳ್ಳಿ | ಸ್ಮಶಾನ ಭೂಮಿಯಲ್ಲಿ ಇಂದಿರಾ ಕ್ಯಾಂಟೀನ್ ಕಾಮಗಾರಿ: ಸ್ಥಗಿತಗೊಳಿಸಲು ರುದ್ರಭೂಮಿ ಸಮಿತಿ ಒತ್ತಾಯ

Date:

ಹುಬ್ಬಳ್ಳಿ ನಗರದ ಮಂಟೂರ ರಸ್ತೆಯಲ್ಲಿರುವ ಸತ್ಯಹರಿಶ್ಚಂದ್ರ ರುದ್ರಭೂಮಿಯಲ್ಲಿ ಅಕ್ರಮವಾಗಿ ಇಂದಿರಾ ಕ್ಯಾಂಟೀನ್ ನಿರ್ಮಿಸಲಾಗುತ್ತಿದೆ ಎಂದು ರುದ್ರಭೂಮಿ ಅಭಿವೃದ್ಧಿ ಹಾಗೂ ರಕ್ಷಣಾ ಸಮಿತಿ ಆರೋಪಿಸಿದೆ.

- Advertisement -

ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದ್ರಭೂಮಿ ಅಭಿವೃದ್ಧಿ ಹಾಗೂ ರಕ್ಷಣಾ ಸಮಿತಿಯ ಮುಖಂಡ ವಿಜಯ ಗುಂಟ್ರಾಳ, ನಗರದ ಮಂಟೂರ ರಸ್ತೆಯ ಸತ್ಯಹರಿಶ್ಚಂದ್ರ ಸ್ಮಶಾನ ಭೂಮಿಯಲ್ಲಿ ಕಳೆದ ನೂರಾರು ವರ್ಷಗಳಿಂದ 30ಕ್ಕೂ ಹೆಚ್ಚು ಬಡಾವಣೆಗಳ ಜನರು ಮೃತರ ಅಂತ್ಯಸಂಸ್ಕಾರ ನೆರವೇರಿಸಲು ಉಪಯೋಗಿಸುತ್ತಾ ಬಂದಿದ್ದಾರೆ. ಸದರಿ ಪ್ರದೇಶಲ್ಲಿ ಶೇ. 80% ದಲಿತ ಸಮುದಾಯ, ಹಾಗೂ ಹಿಂದುಳಿದ ಸಮುದಾಯದವರು ವಾಸವಿದ್ದಾರೆ. ಇಂತಹ ಪವಿತ್ರ ಸ್ಮಶಾನದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಿ, ಹಿಂದೂಗಳ ಭಾವನೆಗೆ ಧಕ್ಕೆ ತರುವಂತಹ ಹೀನ ಕೆಲಸ ಮಾಡುತ್ತಿರುವುದು ಖಂಡನೀಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

2019ರಲ್ಲಿ ಸ್ಮಶಾನ ಭೂಮಿಯಲ್ಲಿ ಇಂದಿರಾ ಕ್ಯಾಂಟೀನ್ ಕಟ್ಟಡ ನಿರ್ಮಿಸುವ ಹುನ್ನಾರವನ್ನು ತಡೆಗಟ್ಟಲು ನಾವೆಲ್ಲ ಒಗ್ಗಟ್ಟಿನಿಂದ ವಿಫಲಗೊಳಿಸಿದ್ದೇವೆ. ಆದರೆ, 2022ರಲ್ಲಿ ಸ್ಮಶಾನ ಭೂಮಿ ಕಾಂಪೌಂಡ್ ಗೋಡೆಯನ್ನು ಒಡೆದು ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು, 100 ಅಡಿ ಜಾಗದಲ್ಲಿ ರಸ್ತೆಯನ್ನು ಕಾನೂನು ಬಾಹಿರವಾಗಿ ನಿರ್ಮಿಸಿದ್ದಾರೆ. ಅಲ್ಲದೆ, ಎಸ್‌ಸಿಪಿ/ಟಿಎಸ್‌ಪಿ ಅನುದಾನ ದುರ್ಬಳಕೆ ಮಾಡಿಕೊಂಡು ನಮ್ಮ ಪೂರ್ವಜರ ಸಮಾಧಿಗಳ ಮೇಲೆ ರಸ್ತೆ ನಿರ್ಮಿಸಿದ್ದಾರೆ‌ ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ? ಹುಬ್ಬಳ್ಳಿ | ಸ್ಮಶಾನ ಭೂಮಿಯಲ್ಲಿ ‘ಇಂದಿರಾ ಕ್ಯಾಂಟೀನ್’ ನಿರ್ಮಾಣ : ತೆರವುಗೊಳಿಸಲು ಬಿಜೆಪಿ ಹರಸಾಹಸ?

ಶಾಸಕರ ಕಾರ್ಯವೈಖರಿ ಟೀಕಿಸಬೇಕೆಂದರೆ ಚುನಾವಣೆಯಲ್ಲಿ ಅವರಿಗೆ ಮತ ಹಾಕಿರಬೇಕೆಂಬ ನಿಯಮ ಇದೆಯೇ? ಮತ ಹಾಕಿದರೆ ಮಾತ್ರ ಪ್ರಶ್ನೆ ಕೇಳಬೇಕು ಎಂದರೆ, ಇದು ಪ್ರಜಾಪ್ರಭುತ್ವಕ್ಕೆ ಮಾಡುವ ಅವಮಾನ. ಈ ಹಿನ್ನೆಲೆಯಲ್ಲಿ ಶಾಸಕರ ಸರ್ವಾಧಿಕಾರಿ ಧೋರಣೆ ಖಂಡನೀಯ ಎಂದು ಕಿಡಿಕಾರಿದರು.

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಭಾವಚಿತ್ರ ಸ್ಮಶಾನದಲ್ಲಿ ಹಾಕುವುದು ಅವರಿಗೆ ಮಾಡುವ ಅವಮಾನವಾಗಿದೆ. ಸ್ಥಳೀಯರ ವಿರೋಧ ಇದ್ದರೆ ಬೇರೆಡೆ ಸ್ಥಳಾಂತರ ಮಾಡುತ್ತೇನೆಂದು ಶಾಸಕ ಪ್ರಸಾದ್ ಅಬ್ಬಯ್ಯನವರು ಹೇಳುತ್ತಾರೆ. ಆದರೆ, ಇದೀಗ ವಿರೋಧ ವ್ಯಕ್ತಪಡಿಸುತ್ತಿರುವವರು ನೆರೆ ರಾಜ್ಯ ಅನ್ಯ ದೇಶಗಳಿಂದ ಬಂದವರಾಗಿದ್ದೇವೆಯೇ ಎಂದು ವಿಜಯ ಗುಂಟ್ರಾಳ ಪ್ರಶ್ನಿಸಿದರು.

ಸುದ್ದಿಗೋಷ್ಠಿಯಲ್ಲಿ ರುದ್ರಭೂಮಿ ಅಭಿವೃದ್ಧಿ ಹಾಗೂ ರಕ್ಷಣಾ ಸಮಿತಿ ಮುಖಂಡರು ಕೂಡ ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...