ಹುಬ್ಬಳ್ಳಿ | ಸಾಲ ಪಾವತಿಸದ ರೈತ ಮಹಾದೇವಪ್ಪಗೆ ಬ್ಯಾಂಕ್​ ಸಿಬ್ಬಂದಿ ಕಿರುಕುಳ, ಸಾವು

Date:

Advertisements

ಬೆಳೆ ಸಾಲ ಪಾವತಿಸುವಂತೆ ಬ್ಯಾಂಕ್​ ಸಿಬ್ಬಂದಿಯ ದೌರ್ಜನ್ಯಕ್ಕೆ ಹೆದರಿ ಆಸ್ಪತ್ರೆಗೆ ದಾಖಲಾಗಿದ್ದ ರೈತ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮದ ಮಹಾದೇವಪ್ಪ (75) ಜಾವೂರ ಮೃತ ರೈತ.

ಒಂದು ವಾರದ ಹಿಂದೆ ಹುಬ್ಬಳ್ಳಿ ಕಿಮ್ಸ್‌ಗೆ ಮಹಾದೇವಪ್ಪ ಜಾವೂರ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ನ. 2ರಂದು ಮೃತಪಟ್ಟಿದ್ದಾರೆ. ಸದ್ಯ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಮೃತ ರೈತನ ಕುಟುಂಬಸ್ಥರು ದೂರು‌ ನೀಡಿದ್ದು, ಕೆವಿಜಿ ಬ್ಯಾಂಕ್‌ ಮ್ಯಾನೇಜರ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.

Advertisements

ರೈತ ಮಹಾದೇವಪ್ಪ 2015ರಲ್ಲಿ ಕೆವಿಜಿ ಬ್ಯಾಂಕ್‌ನಿಂದ 14.5ಲಕ್ಷ ರೂ. ಬೆಳೆ ಸಾಲ ಪಡೆದಿದ್ದರು. ಆದರೆ, ಸಕಾಲದಲ್ಲಿ ಸಾಲ ಮರುಪಾವತಿ ಮಾಡಿರಲಿಲ್ಲ. ಬೆಳೆ ಸಾಲದಡಿ ಅನುಮತಿ ಇಲ್ಲದೆ ಮತ್ತೊಂದು ಖಾತೆಯಲ್ಲಿದ್ದ 1.4 ಲಕ್ಷ ರೂ.ಗಳನ್ನು ಬ್ಯಾಂಕ್​ ಮುಟ್ಟುಗೋಲು ಹಾಕಿಕೊಂಡಿದ್ದ ಬ್ಯಾಂಕ್‌ ಸಿಬ್ಬಂದಿ, ಪ್ರತಿನಿತ್ಯ ಜಾವೂರ ಮನೆಗೆ ತೆರಳಿ ಸಾಲ ಕಟ್ಟುವಂತೆ ಕಿರುಕುಳ ನೀಡುತ್ತಿದ್ದರು. ಹೀಗೆ ಅಕ್ಟೋಬರ್‌ 28ರಂದು ಬ್ಯಾಂಕ್ ಸಿಬ್ಬಂದಿ ಜತೆ ಮಾತನಾಡುತ್ತಿರುವಾಗಲೇ ಮಹಾದೇವಪ್ಪ ಮೂರ್ಛೆ ಹೋಗಿ ಬಿದ್ದಿದ್ದರು. ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನ. 2ರಂದು ರೈತ ಮಹಾದೇವಪ್ಪ ಮೃತಪಟ್ಟಿದ್ದು, ಧಾರವಾಡದ ಕೆವಿಜಿ ಬ್ಯಾಂಕ್‌ಗೆ ರೈತರು ಮುತ್ತಿಗೆ ಹಾಕಲು ಯತ್ನಿಸಿದರು. ರೈತರನ್ನು ಗೇಟ್ ಬಳಿ ಪೊಲೀಸರು ತಡೆದಿದ್ದಾರೆ. ನಂತರ ರೈತರು ಕೆವಿಜಿ ಬ್ಯಾಂಕ್ ಪ್ರಧಾನ ಕಚೇರಿ ಎದುರು ಪ್ರತಿಭಟನೆ ಮಾಡಿದ್ದಾರೆ. ಸಾಲ ಮರುಪಾವತಿಗೆ ಕೆವಿಜಿ ಬ್ಯಾಂಕ್ ಮೊರಬ ಶಾಖೆಯ ಮ್ಯಾನೇಜರ್‌ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆ ಬ್ಯಾಂಕ್ ಮ್ಯಾನೇಜರ್ ಭೇಟಿಗೆ ಮಹಾದೇವಪ್ಪ ತೆರಳಿದ್ದರು. ಈ ವೇಳೆ ಮಹಾದೇವಪ್ಪ ಜೊತೆ ಮ್ಯಾನೇಜರ್ ಅನುಚಿತ ವರ್ತನೆ ಮಾಡಿದ್ದಾರೆಂದು ಆರೋಪಿಸಲಾಗಿದೆ.

ಕಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಮಹಾದೇವಪ್ಪ ಕುಟುಂಬಸ್ಥರು ಸೂಕ್ತ ಪರಿಹಾರ ಮತ್ತು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X