ಕುರ್ತಾ ಅಲಿಯಾಸ್ ಭರತ್ ಕುಮಾರ್ ಹಾಗೂ ಫಾರೂಕ್ ಅಲಿಯಾಸ್ ಟೊಮೆಟೊ ಫಾರೂಕ್ ಈ ಇಬ್ಬರು ಕಾರು ದರೋಡೆ ಮಾಡಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ ಕಾರಣ ಸಿಸಿಬಿ ಪೊಲೀಸರು ಗುಂಡಿನ ದಾಳಿ ನಡೆಸಿದ ಘಟನೆ ಭಾನುವಾರ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಕಳೆದ ನವೆಂಬರ್ 8ರಂದು ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಹತ್ತಿರ ಮಂಗಳೂರು ಮೂಲದ ಭರತ್, ಫಾರುಕ್ ಮಹಾರಾಷ್ಟ್ರದ ಸಾಂಗ್ಲಿ ಮೂಲದ ರಾಹುಲ್ ಸುರ್ವೆ ಅವರ ಕಾರು ಅಡ್ಡಗಟ್ಟಿ, ಕಾರು ಚಾಲಕನಿಗೆ ಬೆದರಿಕೆ ಹಾಕಿ ದರೋಡೆ ಮಾಡಿದ್ದು, ಈ ಗ್ಯಾಂಗ್‌ನಲ್ಲಿ 15 ಜನರಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.