ಹುಲಸೂರ, ಕಮಠಾಣ, ಮನ್ನಾಏಖೆಳ್ಳಿ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ

Date:

ಬೀದರ್ ಜಿಲ್ಲೆಯ ಹುಲಸೂರ, ಮನ್ನಾಏಖ್ಖೆಳ್ಳಿ ಹಾಗೂ ಕಮಠಾಣ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೆ ಏರಿಸಲು ಸಚಿವ ಸಂಪುಟವು ಅನುಮೋದನೆ ನೀಡಿದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ತಿಳಿಸಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ʼಪಟ್ಟಣ, ನಗರ ಪ್ರದೇಶಗಳು ಸೇರಿದಂತೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ತಮ್ಮ ಅವಧಿಯಲ್ಲಿ ಬೀದರ್ ಜಿಲ್ಲೆಗೆ ವಿಶೇಷ ಆದ್ಯತೆ ಕೊಡಲಾಗಿದೆ. ಬೀದರ್ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ಹುಮನಾಬಾದ್ ಪುರಸಭೆಗೆ ನಗರಸಭೆ, ಹುಲಸೂರು, ಮನ್ನಾಎಖ್ಖೆಳ್ಳಿ ಹಾಗೂ ಕಮಠಾಣ ಗ್ರಾಮ ಪಂಚಾಯಿತಿಗಳಿಗೆ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆʼ ಎಂದು ತಿಳಿಸಿದ್ದಾರೆ.

ʼಈ ಹಿಂದೆ ಬಸವಕಲ್ಯಾಣ ಶಾಸಕರು ಹುಲಸೂರು ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಲು ಬೇಡಿಕೆ ಮಂಡಿಸಿದ್ದರು. ಆದರೆ, ಹಿಂದಿನ ಅವರದೇ ಬಿಜೆಪಿ ಸರ್ಕಾರ ಪ್ರಸ್ತಾವವನ್ನು ತಿರಸ್ಕರಿಸಿತ್ತು. ಕಾಂಗ್ರೆಸ್ ಸರ್ಕಾರ ಜನರ ಭಾವನೆಗೆ ಸ್ಪಂದಿಸಿ ಹುಲಸೂರು ಗ್ರಾಮ ಪಂಚಾಯಿತಿಗೆ ಪಟ್ಟಣ ಪಂಚಾಯಿತಿ ಸ್ಥಾನಮಾನ ಕೊಡಲು ನಿರ್ಣಯಿಸಿದೆʼ ಎಂದು ಹೇಳಿದ್ದಾರೆ.

ಜಿಲ್ಲೆಯ ಅಭಿವೃದ್ಧಿಗೆ ಬದ್ಧ : ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

ಜಿಲ್ಲೆಯ ಮೂರು ಗ್ರಾಮ ಪಂಚಾಯತಗಳನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ರಾಜ್ಯ ಸಂಪುಟವು ಮಹತ್ವದ ಅನುಮೋದನೆ ನೀಡಿದೆ. ಈ ಮಹತ್ವದ ನಿರ್ಣಯಕ್ಕೆ ಸಹಕಾರ ಮತ್ತು ಅನುಮೋದನೆ ನೀಡಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್ ಹಾಗೂ ಸಂಪುಟ ಸಹೋದ್ಯೋಗಿಗಳಿಗೆ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಧನ್ಯವಾದ ಸಲ್ಲಿಸಿದ್ದಾರೆ.

ಈ ನಿರ್ಣಯದಿಂದಾಗಿ ಜಿಲ್ಲೆಯ ಈ ಮೂರೂ ಸ್ಥಳಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಯಾವುದೇ ಭೇದವಿಲ್ಲದೆ ನಿಷ್ಪಕ್ಷಪಾತವಾಗಿ ಬೀದರ್ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ತಾವು ಬದ್ಧರಾಗಿದ್ದು, ಈ ನಿಟ್ಟಿನಲ್ಲಿ ಶ್ರಮಿಸುತ್ತಿರುವುದಾಗಿಯೂ ಈಶ್ವರ ಖಂಡ್ರೆ ಅವರು ತಿಳಿಸಿದ್ದಾರೆ.

ಕಮಠಾಣಾ, ಮನ್ನಾಏಖೇಳ್ಳಿ ಪಟ್ಟಣ ಪಂಚಾಯಿತಿ ಸ್ವಾಗತಾರ್ಹ : ಶಾಸಕ ಶೈಲೇಂದ್ರ ಬೆಲ್ದಾಳೆ

ಬೀದರ್ ದಕ್ಷಿಣ ಕ್ಷೇತ್ರದ ಕಮಠಾಣಾ ಹಾಗೂ ಮನ್ನಾಏಖೇಳ್ಳಿ ಗ್ರಾಮ ಪಂಚಾಯಿತಿಗಳನ್ನು ರಾಜ್ಯ ಸರ್ಕಾರ ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಿದೆ. ಕಳೆದ ಎರಡೂವರೆ ವರ್ಷಗಳಿಂದ ನಾನು ಇದಕ್ಕಾಗಿ ಮಾಡುತ್ತಿದ್ದ ಸತತ ಪ್ರಯತ್ನಕ್ಕೆ ಫಲ ಸಿಕ್ಕಿದೆ ಎಂದು ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಸಂತಸ ವ್ಯಕ್ತಪಡಿಸಿದ್ದಾರೆ.

ಕಮಠಾಣಾ ಹಾಗೂ ಮನ್ನಾಏಖೆಳ್ಳಿ ಗ್ರಾಪಂಗಳನ್ನು  ಪಟ್ಟಣ ಪಂಚಾಯಿತಿಗೆ ಮೇಲ್ದರ್ಜೆಗೇರಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿರುವುದು ಸ್ವಾಗತಾರ್ಹ. ದಕ್ಷಿಣ ಕ್ಷೇತ್ರವು ಸಂಪೂರ್ಣ ಹಳ್ಳಿಗಳಿಂದಲೇ ಕೂಡಿದೆ. ಮೊದಲ ಬಾರಿಗೆ ಇಲ್ಲಿ ಎರಡು ಹೋಬಳಿ ಕೇಂದ್ರಗಳಿಗೆ ಪಟ್ಟಣ ಪಂಚಾಯಿತಿ ಭಾಗ್ಯ ದೊರಕಿದೆ. ಹೆಚ್ಚು ಜನಸಂಖ್ಯೆ ಇರುವ ಎರಡೂ ಗ್ರಾಮಗಳ ಜನತೆಗೆ ಉತ್ತಮ ಮೂಲಸೌಕರ್ಯ ಒದಗಿಸಿ ಹೆಚ್ಚಿನ ಅಭಿವೃದ್ಧಿಪಡಿಸಲು ಇದರಿಂದ ಬಲ ತುಂಬಿದಂತಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಕಮಠಾಣಾ, ಮನ್ನಾಏಖ್ಖೆಳ್ಳಿಗೆ ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಲು ನಾನು ಶಾಸಕನಾದಾಗಿನಿಂದ ಸರ್ಕಾರದ ಮಟ್ಟದಲ್ಲಿ ಪ್ರಯತ್ನ ಮಾಡುತ್ತಿದ್ದೇನೆ. ಹಿಂದಿನ ವಿಧಾನಸಭೆ ಅಧಿವೇಶನಗಳಲ್ಲಿ ಸಹ ಕ್ಷೇತ್ರದ ಜನರ ಹಿತದ ಈ ವಿಷಯ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದಿದ್ದೇನೆ. ಸ್ಥಳೀಯ ಗ್ರಾಪಂ ಪ್ರತಿನಿಧಿಗಳು, ಪ್ರಮುಖರ ನಿಯೋಗದೊಂದಿಗೆ ಪೌರಾಡಳಿತ ಸಚಿವರಿಗೆ ಭೇಟಿ ಮಾಡಿ ಮನವಿ ಮಾಡಲಾಗಿತ್ತು. ಸಚಿವ ಸಂಪುಟದಲ್ಲಿ ಇದಕ್ಕೆ ಸಮ್ಮತಿ ನೀಡಿದ್ದಕ್ಕಾಗಿ ಕ್ಷೇತ್ರದ ಜನರ ಪರವಾಗಿ ಸರ್ಕಾರಕ್ಕೆ, ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಮ್ ಖಾನ್ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಬೆಲ್ದಾಳೆ ಹೇಳಿದ್ದಾರೆ.

ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರುವ ಎರಡೂ ಕೇಂದ್ರಕ್ಕೆ ಬರುವ ದಿನಗಳಲ್ಲಿ ಮೂಲಸೌಕರ್ಯ ಕಾಮಗಾರಿಗೆ ಹೆಚ್ಚಿನ ಅನುದಾನ ಬಂದು ಅಭಿವೃದ್ಧಿಗೆ ವೇಗ ಸಿಗಲು  ಅನುಕೂಲವಾಗುತ್ತದೆ. ಈ ಹಿಂದೆ ಬೊಮ್ಮಾಯಿ ಸರ್ಕಾರದಲ್ಲಿ ಬೀದರ್ ನಗರಸಭೆಗೆ ಮಹಾನಗರ ಪಾಲಿಕೆ ಮಾಡುವ ಘೋಷಣೆ ಮಾಡಿದ್ದು, ಅದು ಸಹ ಈಗ ಕಾರ್ಯರೂಪಕ್ಕೆ ಬಂದಿದೆ. ಬೀದರ್ ಪಾಲಿಕೆಗೆ ದಕ್ಷಿಣ ಕ್ಷೇತ್ರದ ಮೂರು ಗ್ರಾಪಂಗಳ ಎಂಟು ಹಳ್ಳಿಗಳು ಸೇರಿವೆ. ಇವುಗಳಿಗೂ ಸಹ ಹೆಚ್ಚಿನ ಅನುದಾನದ ಬರುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.

ಹುಲಸೂರ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ : ಬಿಜೆಪಿ ಸಂಭ್ರಮ

WhatsApp Image 2025 11 27 at 6.39.53 PM

ರಾಜ್ಯ ಸಚಿವ ಸಂಪುಟದಲ್ಲಿ ಬಸವಕಲ್ಯಾಣ ಮತಕ್ಷೇತ್ರ ವ್ಯಾಪ್ತಿಯ ಹುಲಸೂರ ಗ್ರಾಮ ಪಂಚಾಯತ್ ಅನ್ನು ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೆ ಏರಿಸಿದ ಹುಲಸೂರ ಪಟ್ಟಣದಲ್ಲಿ ಶಾಸಕ ಶರಣು ಸಲಗರ ಅವರು ಗ್ರಾಮಸ್ಥರೊಂದಿಗೆ ಸೇರಿ ಪಟಾಕಿ ಸಿಡಿಸಿ, ಸಿಹಿ ತಿನಿಸಿ ಸಂಭ್ರಮಾಚರಣೆ ಮಾಡಿದರು.

ಹುಲಸೂರ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಿದ್ದು ಸಂತಸ : ವಿಜಯಸಿಂಗ್‌

ನೂತನ ಹುಲಸೂರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಿ ರಾಜ್ಯ ಸಂಪುಟ ಅನುಮೋದನೆ ನೀಡಿದ್ದು, ಅತ್ಯಂತ ಸಂತಸ ಸುದ್ದಿಯಾಗಿದೆ ಎಂದು ಮಾಜಿ ವಿಧಾನ ಪರಿಷತ್‌ ಸದಸ್ಯ ವಿಜಯಸಿಂಗ್‌ ಹೇಳಿದ್ದಾರೆ.

ಹುಲಸೂರ ಪಟ್ಟಣ ಪಂಚಾಯಿತಿಯನ್ನಾಗಿ ಮಾಡಬೇಕೆಂಬ ಕುರಿತು ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಹೋಗಿತ್ತು. ಆದರೆ ಅಂದಿನ ಸರ್ಕಾರ ಅದನ್ನು ತಿರಸ್ಕರಿಸಿತು, ಇದೀಗ ನಾವು ಸರ್ಕಾರಕ್ಕೆ ಮತ್ತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದೀಗ ಅನುಮೋದನೆ ಸಿಕ್ಕಿದೆ.

ಈ ಮಹತ್ವದ ನಿರ್ಣಯಕ್ಕೆ ಸಹಕಾರ ಮತ್ತು ಅನುಮೋದನೆ ನೀಡಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ವಿಜಯಸಿಂಗ್‌ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಜನಪ್ರತಿನಿಧಿಗಳ ನಿರಾಸಕ್ತಿ : ಕನಸಾಗಿಯೇ ಉಳಿದ ಮನ್ನಾಏಖೇಳ್ಳಿ ‘ಪಟ್ಟಣ ಪಂಚಾಯಿತಿ’ ರಚನೆ

ಬೀದರ್‌ ದಕ್ಷಿಣ ವಿಧಾನಸಭಾ ಕ್ಷೇತ್ರದ ಮನ್ನಾಖೆಳ್ಳಿ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೆ ಏರಿಸಬೇಕೆಂಬ ಕುರಿತು ʼಈದಿನʼನಲ್ಲಿ 2024 ಡಿ.10ರಂದು ವಿಶೇಷ ವರದಿ ಪ್ರಕಟಿಸಿ ಸರ್ಕಾರದ ಗಮನ ಸೆಳೆದಿರುವುದು ಇಲ್ಲಿ ಸ್ಮರಿಸಬಹುದು.

WhatsApp Image 2025 11 24 at 4.19.22 PM 4
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭೀಕರ ಅಪಘಾತ: ಇಬ್ಬರಿಗೆ ಗಂಭೀರ 

ವಾಹನ ಅಪಘಾತ,ಜೆಸಿಬಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು...

ಬೀದರ್ | ಜಿಪಂ, ತಾಪಂ ಮೀಸಲಾತಿ ಹಂಚಿಕೆಯಲ್ಲಿ ಒಬಿಸಿಗೆ ಅನ್ಯಾಯ: ಶ್ರೀಕಾಂತ ಸ್ವಾಮಿ ಆರೋಪ

ಬೀದರ್ ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲೆಯ ಎಂಟು ತಾಲೂಕು ಪಂಚಾಯಿತಿಗಳ ಚುನಾವಣೆಗೆ...

ಬಾಗೇಪಲ್ಲಿ: ಅಂತರರಾಜ್ಯ ಮಟ್ಟದ ಬಹುಭಾಷಾ ದಸರಾ ಕವಿಗೋಷ್ಠಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಪಟ್ಟಣಕ್ಕೆ ಸಮೀಪದ ಗಡಿದಂ ರಾಜರಾಜೇಶ್ವರಿ...