ಜನರಿಗೆ ನ್ಯಾಯ ಒದಗಿಸಲು ಮನುಷ್ಯನ ಕಷ್ಟಕ್ಕೆ ಸ್ಪಂದಿಸುವ ಗುಣ ಮುಖ್ಯ; ಸಿಎಂ ಸಿದ್ದರಾಮಯ್ಯ

Date:

ʻನಮಗೆ ಉನ್ನತ ಅವಕಾಶಗಳು ಸಿಕ್ಕಾಗ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಂಡಾಗ ಮಾತ್ರ ಬದುಕು ಸಾರ್ಥಕ ಆಗುತ್ತದೆ. ಉತ್ತಮ ನ್ಯಾಯದಾನದ ಮೂಲಕ ನ್ಯಾಯಮೂರ್ತಿ ಬಿ.ವೀರಪ್ಪ ಅವರು ತಮ್ಮ ಬದುಕು ಮತ್ತು ವೃತ್ತಿಯನ್ನು ಸಾರ್ಥಕಗೊಳಿಸಿದ್ದಾರೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು ವಕೀಲರ ಸಂಘ ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ನ್ಯಾಯಮೂರ್ತಿ ಬಿ.ವೀರಪ್ಪ‌ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

ಬಿ.ವೀರಪ್ಪ ಅವರು ಮುಖ್ಯ ನ್ಯಾಯಮೂರ್ತಿ ಆಗುವಾಗಲೂ ನಾನು ಮುಖ್ಯಮಂತ್ರಿ ಆಗಿದ್ದೆ. ಈಗ ಇವರ ನಿವೃತ್ತಿ‌ ಸಂದರ್ಭದಲ್ಲೂ ನಾನು ಮುಖ್ಯಮಂತ್ರಿ ಆಗಿರುವುದು ಸುಸಂದರ್ಭ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನಮಗೆ ಉನ್ನತ ಸ್ಥಾನ ಸಿಕ್ಕಾಗ ಪ್ರಾಮಾಣಿಕವಾಗಿ ಜನಸೇವೆ ಮಾಡಿದರೆ ಆ ಸ್ಥಾನದ ಘನತೆ ಹೆಚ್ಚುತ್ತದೆ. ಸಮಾಜದ ಅರಿವಿದ್ದವರು, ಬದುಕನ್ನು ಅರ್ಥ ಮಾಡಿಕೊಂಡವರು, ಜನರ ಸಂಕಷ್ಟಗಳನ್ನು ಅನುಭವಿಸಿದ್ದವರು, ಆ ಬಗ್ಗೆ ಸಹಾನುಭೂತಿ ಹೊಂದಿದ್ದವರು ಮಾತ್ರ ಸಮಾಜಮುಖಿಯಾಗಿದ್ದು ಉನ್ನತ ಸ್ಥಾನದ ಘನತೆ ಹೆಚ್ಚಿಸಬಲ್ಲರು.

ಬಿ.ವೀರಪ್ಪ ಅವರು ದಕ್ಷತೆ, ಪ್ರಾಮಾಣಿಕತೆ ಜತೆಗೆ ವಕೀಲ ಸಮೂಹದ ಪ್ರೀತಿಯನ್ನೂ ಗಳಿಸಿದ್ದರು ಎನ್ನುವುದಕ್ಕೆ ಇಲ್ಲಿ ಸೇರಿರುವ ಅಪಾರ ವಕೀಲ ಸಮೂಹವೇ ಸಾಕ್ಷಿ.

ದುರ್ಬಲ ವರ್ಗದವರಿಗೆ ಮೇಲಿನ ನ್ಯಾಯಾಲಯಗಳಿಗೆ ಹೋಗಲು ಸಾಧ್ಯವಿಲ್ಲ. ಆದ್ದರಿಂದ ಕೆಳ ಹಂತದಲ್ಲೇ ದುರ್ಬಲ ವರ್ಗಗಳಿಗೆ ನ್ಯಾಯ ಸಿಗುವಂತಾಗಬೇಕು. ಬಿ.ವೀರಪ್ಪ ಅವರು ಈ ದೃಷ್ಟಿಯಲ್ಲಿ ಮೌಲ್ಯಯುತವಾದ ತೀರ್ಪುಗಳನ್ನು ನೀಡಿದ್ದಾರೆ. ಇವು ಕಿರಿಯ ವಕೀಲರಿಗೆ ಮಾದರಿ ಆಗಿವೆ ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...

ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಘರ್ಜಿಸಿದ ಸಿದ್ದರಾಮಯ್ಯ

ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ...

ಸಂಸದ, ಮಾಜಿ ಕೇಂದ್ರ ಸಚಿವ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ

ಚಾಮರಾಜನಗರ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ...