ಉಡುಪಿ | ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಿಂದ ಜಿಲ್ಲಾಸ್ಪತ್ರೆ ಭೇಟಿ

Date:

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಗೌರವಾನ್ವಿತ ಅಧ್ಯಕ್ಷ ಟಿ.ಶ್ಯಾಮ್ ಭಟ್ ಡಾ.ಟಿ.ಶಾಂ ಭಟ್ ಹಾಗೂ ಸದಸ್ಯರಾದ ಎಸ್.ಕೆ ವಂಟಿಗೋಡಿ ಅವರು ಇಂದು ನಗರದ ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ವೀಕ್ಷಣೆ ನಡೆಸಿ, ಕೆಲವೊಂದು ಸಲಹೆ ಸೂಚನೆಗಳನ್ನು ನೀಡಿದರು.

- Advertisement -

ಜಿಲ್ಲಾಸ್ಪತ್ರೆಯ ನೋಂದಣಿ ಕೇಂದ್ರ, ರೋಗಿಗಳ ವಾರ್ಡ್, ತೀವ್ರ ನಿಗಾ ಘಟಕ, ಔಷಧಿ ಉಗ್ರಾಣ, ಆಸ್ಪತ್ರೆಯ ಸ್ವಚ್ಛತೆ ಬಗ್ಗೆ ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ಮಾತನಾಡುತ್ತಾ, ಆಸ್ಪತ್ರೆಯ ಪ್ರವೇಶದ್ವಾರದಲ್ಲಿ ರೋಗಿಗಳು ತಮ್ಮ ಹೆಸರುಗಳನ್ನು ನೋಂದಾಯಿಸಲು ಹೆಚ್ಚು ಜನರು ಸರದಿ ಸಾಲಿನಲ್ಲಿ ನಿಂತಿರುವುದು ಕಂಡು ಬಂದ ಹಿನ್ನೆಲೆ, ಜಿಲ್ಲಾ ಸರ್ಜನ್ ಅವರಿಗೆ ನೋಂದಣಿ ಕೌಂಟರ್‌ಗಳ ಬಗ್ಗೆ ಮಾಹಿತಿ ಪಡೆದು ಮಾತನಾಡಿ, ಇನ್ನೂ ಹೆಚ್ಚು ನೋಂದಣಿ ಕೌಂಟರ್‌ಗಳನ್ನು ಸ್ಥಾಪಿಸಲು ತಿಳಿಸಿದ ಅವರು, ಆಸ್ಪತ್ರೆಯ ಚಿಕಿತ್ಸೆಗೆ ಬಂದಿರುವ ರೋಗಿಗಳಿಂದ ಚಿಕಿತ್ಸೆ ನೀಡುವ ಬಗ್ಗೆ ಮಾಹಿತಿಗಳನ್ನು ಕೇಳಿ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...
1009672937

ಆಸ್ಪತ್ರೆಯ ಸ್ವಚ್ಛತೆ, ಶುಭ್ರತೆ, ಪರಿಶೀಲಿಸಿದ ಅವರು, ಆಸ್ಪತ್ರೆಯ ಒಳ ಕಾರಿಡಾರ್‌ಗಳಲ್ಲಿ ಬೆಳಕಿನ ಅಭಾವ ಕಂಡು ಬಂದ ಹಿನ್ನಲೆ, ಕಾರಿಡಾರ್‌ಗಳಲ್ಲಿ ಲೈಟ್‌ಗಳನ್ನು ಅಳವಡಿಸಲು ಸೂಚನೆ ನೀಡಿದರು.

ರಾಜ್ಯದ ಔಷಧಿ ಕೇಂದ್ರಗಳಿಂದ ಸರಬರಾಜಾದ ಔಷಧಿ ಸೇರಿದಂತೆ ಮತ್ತಿತರ ಪರಿಕರಗಳನ್ನು ಉಗ್ರಾಣದ ಒಳಭಾಗದಲ್ಲಿ ಇಡದೇ ಕಾರಿಡಾರ್ ಗಳಲ್ಲಿ ದಾಸ್ತಾನು ಮಾಡಿರುವ ಬಗ್ಗೆ ಪ್ರಶ್ನಿಸಿದ ಅವರು, ಔಷಧಿಗಳು ಅವಧಿ ಮುನ್ನವೇ ಜನಸಾಮಾನ್ಯರಿಗೆ ಉಪಯೋಗಕ್ಕೆ ಬರುವಂತೆ ಕ್ರಮವಹಿಸಬೇಕೆಂದರು.

ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಜಿಲ್ಲಾಸ್ಪತ್ರೆಯ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದ ಅವರು, ಆಸ್ಪತ್ರೆ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಆಸ್ಪತ್ರೆಗೆ ಅವಶ್ಯವಿರುವ ಸಿಬ್ಬಂದಿಗಳ ಬಗ್ಗೆ ಹಾಗೂ ಹೆಚ್ಚುವರಿ ಬೇಡಿಕೆಗಳಿಗಾಗಿ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸರ್ಜನ್ ಡಾ. ಅಶೋಕ್, ನಿವಾಸಿ ವೈದ್ಯಾಧಿಕಾರಿ ಡಾ. ವಾಸುದೇವ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್, ವಾರ್ತಾಧಿಕಾರಿ ಮಂಜುನಾಥ್ ಬಿ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...

ಕೊಡಗು | ಫಾರಂ-7 ದುರುಪಯೋಗ: ಬಿಜೆಪಿ ಬೂತ್ ಅಧ್ಯಕ್ಷ ಸೇರಿ ಐವರ ವಿರುದ್ಧ ಎಫ್‌ಐಆರ್!

ಕೊಡಗು ಜಿಲ್ಲೆಯ ಬ್ಯಾಡಗೊಟ್ಟ ಗ್ರಾಮದಲ್ಲಿ ಮತದಾರರ ಹೆಸರುಗಳನ್ನು ಅಳಿಸಲು ಫಾರಂ-7 ಅರ್ಜಿಗಳನ್ನು...

ಬಾಗೇಪಲ್ಲಿ | ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ:- ಚೇತನ್ ನಾಯ್ಡು ಫೌಂಡೇಷನ್ ಅಧ್ಯಕ್ಷ ಬಿ.ಆರ್.ನರಸಿಂಹ ನಾಯ್ಡು

ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ ಪ್ರಕೃತಿಯಿಂದ ಹಲವು ರೀತಿಯ ಪ್ರಯೋಜನಗಳನ್ನು...