ಹುಮನಾಬಾದ್‌ | ನೀರಿನ ಸಮಸ್ಯೆ : ಖಾಲಿ ಕೊಡ ಹಿಡಿದು ಪುರಸಭೆ ಕಚೇರಿ ಎದುರು ಪ್ರತಿಭಟನೆ

Date:

ಹುಮನಾಬಾದ್‌ ಪಟ್ಟಣದ ಶಿವಪುರ, ಜರಪೇಟ್, ಇಂದಿರಾನಗರ, ಧನಗರ ಗಡ್ಡದ ಜನರು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಪುರಸಭೆ ಎದುರು ಪ್ರತಿಭಟನೆ ನಡೆಸಿದರು.

- Advertisement -

ಬಡಾವಣೆಯ ನಿವಾಸಿಗಳು ಕೈಯಲ್ಲಿ ಖಾಲಿ ಕೊಡ ಹಿಡಿದು, ಬಾಜಾ ಭಜಂತ್ರಿದೊಂದಿಗೆ ಮೆರವಣಿಗೆ ಮೂಲಕ ಪುರಸಭೆ ಕಚೇರಿವರೆಗೆ ಮೆರವಣಿಗೆ ನಡೆಸಿದರು. ಕೆಲ ಹೊತ್ತು ಪುರಸಭೆ ಎದುರಗಡೆ ಕುಳಿತು ʼನೀರು ಕೊಡಿʼ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ʼಶಿವಪುರ ಬಡಾವಣೆಯಲ್ಲಿ ಕಳೆದ ಎರಡು ವಾರದಿಂದ ನೀರಿನ ಸಮಸ್ಯೆ ಉಲ್ವಣಗೊಂಡಿದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ. ಕೂಡಲೇ ನೀರಿನ ಸಮಸ್ಯೆ ಬಗೆಹರಿಸಬೇಕೆಂದು ಪ್ರತಿಭಟನಾ ಮುಖಂಡರು ಆಗ್ರಹಿಸಿದರು.

ಪ್ರತಿಭಟನೆ ಸುದ್ದಿ ತಿಳಿದು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ಭೇಟಿ ನೀಡಿ, ʼಈಗಾಗಲೇ ಅಮೃತ ಯೋಜನೆ ಕಾಮಗಾರಿ ಆರಂಭವಾಗಿದೆ. ಈ ಯೋಜನೆಯಿಂದ 30 ವರ್ಷಗಳವರೆಗೆ ನೀರಿನ ಸಮಸ್ಯೆ ಉಂಟಾಗುವುದಿಲ್ಲ. ಹೀಗಾಗಿ ಸ್ವಲ್ಪ ದಿನ ಕಾಯಬೇಕು. ಸದ್ಯ ನೀರಿನ ಸಮಸ್ಯೆ ಇರುವ ಬಡಾವಣೆಗಳಿಗೆ ಟ್ಯಾಂಕರ್ ಮೂಲಕ ಪೂರೈಸಲಾಗುವುದುʼ ಎಂದು ಭರವಸೆ ನೀಡಿದರು.

ʼಪುರಸಭೆಯವರು ವಾರಕ್ಕೊಮ್ಮೆ ನೀರು ಸರಬರಾಜು ಮಾಡುತ್ತಿದ್ದಾರೆ. ಹೀಗಾಗಿ ಇಲ್ಲಿನ ನಿವಾಸಿಗಳು ಹಣ ಕೊಟ್ಟು ಖಾಸಗಿಯವರಿಂದ ನೀರು ಖರೀದಿಸುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುವುದುʼ ಎಂದು ಭಾರತೀಯ ದಲಿತ ಪ್ಯಾಂಥರ್‌ ತಾಲ್ಲೂಕಾಧ್ಯಕ್ಷ ಗಣಪತಿ ಅಷ್ಟೂರೆ ಒತ್ತಾಯಿಸಿದರು.\

ಇದನ್ನೂ ಓದಿ : ಬಿಜೆಪಿಯವರು ಕಲಬುರಗಿಗೆ ಮಣಿಕಂಠ, ಛಲವಾದಿ ನಾರಾಯಣಸ್ವಾಮಿ ಎಂಬ ಎರಡು ವೈರಸ್ ಬಿಟ್ಟಿದ್ದಾರೆ

ಪ್ರತಿಭಟನೆಯಲ್ಲಿ ಗೌತಮ್ ಮೇಟಿ, ಮಾಣಿಕ್ ಮೇಟಿ , ಮನೋಜ್ ಜಾನವೀರ್, ಗೌತಮ್ ಜಾನವೀರ್, ಲಕ್ಷ್ಮಣ್ ಜಾನವೀರ್, ಲಕ್ಷ್ಮಿಪುತ್ರ, ರಾಹುಲ್ ಬೋಧೆ , ವಿಶಾಲ್ ಸಿಂಧನಕೇರಾ ಸೇರಿದಂತೆ ಬಡಾವಣೆಯ ನಿವಾಸಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಬಸವಕಲ್ಯಾಣ | ಬೌದ್ಧ ಧರ್ಮ ಚಾರಿಕಾ ಕಾರ್ಯಕ್ರಮ

ಮಾತಾ ರಮಾಬಾಯಿ ಅಂಬೇಡ್ಕರ್ ಮಹಿಳಾ ಟ್ರಸ್ಟ್ ಹಾಗೂ ಸರ್ವೋದಯ ಸಿದ್ಧಾರ್ಥ ಕ್ಲಬ್...