ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣ ಪಂಚಾಯತಿ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಚುನಾವಣೆ ನಡೆದಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದ್ದು, ಅಧಿಕಾರಿದ ಗದ್ದುಗೆ ಹಿಡಿದಿದೆ.
ಪಟ್ಟಣ ಪಂಚಾಯತಿಯ ಒಟ್ಟು 16 ಸ್ಥಾನಗಳಲ್ಲಿ 14 ಸ್ಥಾಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಎರಡು ವಾರ್ಡ್ಗಳಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಿದೆ.
ಗೆಲುವಿನ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಕಾಂಗ್ರೆಸ್ ಮುಖಂಡ ರಾಜಾ ವೇಣುಗೋಪಾಲನಾಯಕ, “ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಫಲವಾಗಿ ಮತ್ತು ಶಾಸಕ ರಾಜಾ ವೆಂಕಟಪ್ಪನಾಯಕ ಅವರ ಪರಿಶ್ರಮದಿಂದ ಕಾಂಗ್ರೆಸ್ ಗೆಲುವು ಸಾಧಿಸಿದೆ” ಎಂದು ಹೇಳಿದ್ದಾರೆ.
“ನಾವು 13 ಸ್ಥಾನಗಳನ್ನು ಗೆಲ್ಲುತ್ತೇವೆಂದು ಭಾವಿಸಿದ್ದೇವು. ಆದರೆ, ಹೆಚ್ಚುವರಿಯಾಗಿ ಇನ್ನೂ ಒಂದು ಸ್ಥಾನ ಗೆದ್ದಿದ್ದೇವೆ. ಜನರು ಹೆಚ್ಚು ಮತಗಳನ್ನು ನೀಡಿ, ಕಾಂಗ್ರೆಸ್ ಗೆಲ್ಲಿಸಿದ್ದಾರೆ” ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ದಂಡಿನ್ ಹೇಳಿದ್ದಾರೆ.
ಡಿಸೆಂಬರ್ 27ರಂದು ಪಟ್ಟಣ ಪಂಚಾಯತಿಗೆ ಮತದಾನ ನಡೆದಿತ್ತು.