ಹುಣಸೂರು | ಲೋಕಾಯುಕ್ತ ಕುಂದು ಕೊರತೆ ಸಭೆಯಲ್ಲಿ ಸಾರ್ವಜನಿಕರಿಂದ ದೂರುಗಳ ಸರಮಾಲೆ

Date:

ಮೈಸೂರು ಜಿಲ್ಲೆ ಹುಣಸೂರಿನ ನಗರಸಭೆ ಸಭಾಂಗಣದಲ್ಲಿ ಲೋಕಾಯುಕ್ತ ಡಿವೈಎಸ್‌ಪಿ ಮಾಲತೀಶ್ ನೇತೃತ್ವದಲ್ಲಿ ಕುಂದು ಕೊರತೆ ಸಭೆ ನಡೆಯಿತು.

- Advertisement -

ಪರಿಶಿಷ್ಟ ಜಾತಿಗೆ ಸೇರಿದ ಸಾಗುವಳಿ ಭೂಮಿ ಸರ್ವೇ ನಂಬರ್ 47, 60, 61 ರಲ್ಲಿ ಬಿಳಿಕೆರೆ ಕ್ಷೇತ್ರ ವ್ಯಾಪ್ತಿಯ ಕಂದಾಯ ಇಲಾಖೆ ನಿರೀಕ್ಷಕ ಮಂಜುನಾಥ್, ಬಂಡವಾಳ ಶಾಹಿ ವ್ಯಕ್ತಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ನಕಲಿ ದಾಖಲೆ ಸೃಷ್ಟಿ ಮಾಡಿದ್ದಾರೆ ಎಂದು ಆರೋಪಿಸಿ ದಾಖಲೆ ಸಮೇತ ದೂರು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ರೈತ ಸಂಘ ಹಾಗೂ ದಸಂಸ ಮುಖಂಡರ ಮನವಿ ಅನುಸಾರ ಲೋಕಾಯುಕ್ತ ಡಿವೈಎಸ್‌ಪಿ ಮಾಲತೀಶ್ ಹುಣಸೂರು ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರರಿಗೆ ಪತ್ರ ಬರೆದು ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಸಭೆಗೆ ಗೈರಾಗಿದ್ದ ಮಂಜುನಾಥ್ ವಿರುದ್ಧ ತನಿಖೆಗೆ ಆದೇಶ ನೀಡಿದರು.

ಹುಣಸೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ, ಕಟ್ಟೆಮಳಲವಾಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಸತಿ, ನಿವೇಶನ ಕುರಿತಾದ ಅರ್ಜಿಗಳು, ಫಲಾನುಭವಿಗಳಿಗೆ ಮಂಜೂರಾಗದೆ ಇರುವುದು, ಆಜಾದ್ ನಗರದ ಸರ್ಕಾರಿ ಶಾಲೆಗೆ ನಿವೇಶನ ಕೋರಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ದಸಂಸ ಹಿರಿಯ ಮುಖಂಡ ನಿಂಗರಾಜ್ ಮಲ್ಲಾಡಿ ಮನವಿ ಸಲ್ಲಿಸಿದರು.

ಹುಣಸೂರು ತಾಲೂಕಿನಲ್ಲಿರುವ ಪ್ರಮುಖ ಸಮಸ್ಯೆಗಳನ್ನು ಹೊತ್ತು ತಂದಿದ್ದ ಸಾರ್ವಜನಿಕರ ಅಹವಾಲನ್ನು ಲೋಕಾಯುಕ್ತ ಅಧಿಕಾರಿಗಳು ಆಲಿಸಿದರು. ಸಭೆಯಲ್ಲಿನ ದೂರುಗಳ ಮಹಾಪೂರಕ್ಕೆ ಸೂಕ್ತ ಕ್ರಮವಹಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದರು.

ಇದನ್ನು ಓದಿದ್ದೀರಾ? ಮಂಡ್ಯ | ಯುವಜನತೆಯ ಒಲವು ಸ್ಪರ್ಧಾತ್ಮಕ ಪರೀಕ್ಷೆಗಳ ಕಡೆ ಇರಲಿ: ಜಿಲ್ಲಾಧಿಕಾರಿ ಡಾ. ಕುಮಾರ್

ಸಭೆಯಲ್ಲಿ ನಗರಸಭೆ ಆಯುಕ್ತೆ ಮಾನಸ, ಲೋಕಾಯುಕ್ತ ವೃತ್ತ ನಿರಕ್ಷಕಿ ರೂಪಶ್ರೀ, ಮಾನಸ, ನಗರ ಸಭೆ ಸದಸ್ಯರುಗಳು,
ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...