ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನಾಗರಹೊಳೆ ಉದ್ಯಾನವನದ ಕೋಣನಹೊಸಹಳ್ಳಿಯಲ್ಲಿ
ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿ ಮೇಲೆ ಹುಲಿ ಹಠಾತ್ ದಾಳಿ ನಡೆಸಿದ ಘಟನೆ ವರದಿಯಾಗಿದೆ.
ಹುಲಿ ದಾಳಿ ನಡೆಸಿದ ಸಂದರ್ಭದಲ್ಲಿ ಜಾಗೃತರಾದ ಅರಣ್ಯ ಇಲಾಖೆ ಅಧಿಕಾರಿಗಳು ಗಾಳಿಯಲ್ಲಿ ಗುಂಡು ಹಾರಿಸಿ, ಪಟಾಕಿ ಸಿಡಿಸಿ ಹುಲಿಯನ್ನು ಓಡಿಸಿದ್ದು, ಆ ಬಳಿಕ ಸಿಬ್ಬಂದಿಯನ್ನು ರಕ್ಷಿಸಿದ್ದಾರೆ.
ಹನಗೂಡು ಬಳಿಯ ಕೊಳವಿಗೆ ಬಳಿ ಹಸುಗಳ ಮೇಲೆ ದಾಳಿ ನಡೆಸಿದ್ದ ಹುಲಿಯ ಪತ್ತೆಗೆ ಡಿಆರ್‌ಎಫ್‌ಓ ನವೀನ್ ಗೌಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿತ್ತು.
ಜೋಳದ ಹೊಲದಲ್ಲಿದ್ದ ಹುಲಿ ದಿವಾಕರ್ ಮೇಲೆ ದಾಳಿ ಮಾಡಿದೆ. ಈ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ,ಪಟಾಕಿ ಸಿಡಿಸಿದ್ದರಿಂದ ಹುಲಿ ಪರಾರಿಯಾಗಿದೆ. ಬಳಿಕ ಡ್ರೋನ್ ಕ್ಯಾಮರಾ ಮೂಲಕ ಪರಿಶೀಲಿಸಿದಾಗ
ಹುಲಿ ಲಕ್ಷ್ಮಣತೀರ್ಥ ನದಿ ಮೂಲಕ ಕಾಡಿಗೆ ವಾಪಸ್ಸು ಮರಳಿರುವುದು ಕಂಡು ಬಂದಿದೆ.
ಅರಣ್ಯ ಇಲಾಖೆ ಸಿಬ್ಬಂದಿ ದಿವಾಕರ್ ಗಾಯಗೊಂಡಿದ್ದು ಸದ್ಯ ಹನಗೋಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
