ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ನಾನು : ಪ್ರಮೋದ್ ಮಧ್ವರಾಜ್

Date:

  • ‘ನಾನು ಬಿಜೆಪಿ ತೊರೆಯುತ್ತೇನೆ ಎಂದು ಹಲವರು ವದಂತಿ ಹಬ್ಬಿಸುತ್ತಿದ್ದಾರೆ’ ಎಂದ ಮಾಜಿ ಸಚಿವ
  • 20 ವರ್ಷ ಕರಾವಳಿಯಲ್ಲಿ ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕ ಗೆದ್ದು ಬರಲು ಸಾಧ್ಯವಿಲ್ಲ

2024ರ ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಟಿಕೆಟ್‌ಗೆ ನಾನು ಪ್ರಬಲ ಆಕಾಂಕ್ಷಿ ಎಂದು ಮಾಜಿ ಶಾಸಕ ಹಾಗೂ ಹಾಲಿ ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

- Advertisement -

ತಮ್ಮ ನಿವಾಸದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಬಿಜೆಪಿ ತೊರೆಯುತ್ತೇನೆ ಎಂದು ಹಲವರು ವದಂತಿ ಹಬ್ಬಿಸುತ್ತಿದ್ದಾರೆ. ಆದರೆ ನಾನು ಸ್ಪಷ್ಟಪಡಿಸಲು ಬಯಸುತ್ತೇನೆ, ನನ್ನ ರಾಜಕೀಯ ನಿವೃತ್ತಿ ಬಿಜೆಪಿಯಿಂದಲೇ ಆಗುತ್ತದೆ. ಕೊನೆಯ ಉಸಿರು ಇರುವವರೆಗೂ ಬಿಜೆಪಿಗಾಗಿ ದುಡಿಯುತ್ತೇನೆ’ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

‘ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯಿಂದ ಲೋಕಸಭೆ ಟಿಕೆಟ್‌ಗೆ ನಾನು ಪ್ರಬಲ ಆಕಾಂಕ್ಷಿ. ಪಕ್ಷದಿಂದ ಯಾರೂ ನನಗೆ ಭರವಸೆ ನೀಡದ ಕಾರಣ ಟಿಕೆಟ್ ಸಿಗುವ ಬಗ್ಗೆ ನನಗೆ ಖಚಿತವಿಲ್ಲ. ನಾನೇ ಅಭ್ಯರ್ಥಿಯಾದರೆ ಎಲ್ಲ ಮುಖಂಡರು, ಪಕ್ಷದ ಕಾರ್ಯಕರ್ತರೊಂದಿಗೆ ಸೇರಿ ಚುನಾವಣೆಯಲ್ಲಿ ಗೆಲುವಿಗೆ ಶ್ರಮಿಸುತ್ತೇನೆ, ಬೇರೆಯವರಿಗೆ ಟಿಕೆಟ್ ನೀಡಿದರೆ ಅವರ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಹಲವು ತಿಂಗಳ ಹಿಂದೆ ಬಿಜೆಪಿಗೆ ಸೇರಿದರೂ, ಚುನಾವಣಾ ಪ್ರಚಾರಕ್ಕೆ ಕಾಲಕಾಲಕ್ಕೆ ನನ್ನ ಸೇವೆಯನ್ನು ಬಳಸಿಕೊಂಡಿದ್ದಾರೆ. ಪಕ್ಷ ನೀಡುವ ಯಾವುದೇ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ’ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಸ್ನಾನದ ವಿಡಿಯೋ ಪ್ರಕರಣ : ಸಂಘಪರಿವಾರದ ಕಾರ್ಯಕರ್ತನ ವಿರುದ್ಧ ಎಫ್‌ಐಆರ್, ನ್ಯಾಯಾಂಗ ಬಂಧನ

ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಬಗ್ಗೆ ಇದೇ ವೇಳೆ ಪ್ರಸ್ತಾಪಿಸಿದ ಮಧ್ವರಾಜ್, ಅವರು ಸದ್ಯ ಕೇಂದ್ರ ಸಚಿವೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಪ್ರತಿನಿಧಿಸುತ್ತಿದ್ದಾರೆ. 2024ರ ಚುನಾವಣೆಯ ಬಗ್ಗೆ ಅವರು ಇನ್ನೂ ಸ್ಪಷ್ಟವಾಗಿ ಹೇಳಿಲ್ಲ. ಒಂದು ವೇಳೆ ಪಕ್ಷ ಅವರಿಗೆ ಟಿಕೆಟ್ ನೀಡಿದರೆ ನಾನು ಪಕ್ಷದ ಕಾರ್ಯಕರ್ತನಾಗಿ ಅವರ ಗೆಲುವಿಗೆ ಶ್ರಮಿಸುತ್ತೇನೆ ಎಂದು ಹೇಳಿದರು.

ವಿಪಕ್ಷಗಳ ಮೈತ್ರಿಕೂಟದ ಬಗ್ಗೆ ಪ್ರತಿಕ್ರಿಯಿಸಿದ ಅವರು “ಬಾಟಲ್ ಮಾತ್ರ ಹೊಸದು, ಆದರೆ ಅದರಲ್ಲಿರುವ ವಿಷಯಗಳು ಇನ್ನೂ ಹಳೆಯದು, ತಮ್ಮ ಪ್ರಧಾನಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಅವರಲ್ಲಿ ಯಾವುದೇ ಪ್ರತಿಕ್ರಿಯೆ ಇಲ್ಲ. ಅವರು ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸಿದರೆ, ಕೆಲವೇ ದಿನದಲ್ಲಿ ಮೈತ್ರಿ ಪತನವಾಗಲಿದೆ. ಎನ್‌ಡಿಎ ಮತ್ತು ನರೇಂದ್ರ ಮೋದಿ ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಾರೆ ಎಂಬ ವಿಶ್ವಾಸವಿದೆ” ಎಂದರು.

ಕಾಂಗ್ರೆಸ್ ತೊರೆದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಧ್ವರಾಜ್, ‘ಬಿಜೆಪಿ ಸೇರಿ ತಪ್ಪು ಮಾಡಿದೆ ಅಂತ ಯಾವತ್ತೂ ಅನಿಸಿಲ್ಲ. ಇನ್ನು 20 ವರ್ಷಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷದ ಒಬ್ಬ ಶಾಸಕರೂ ಗೆಲ್ಲುವುದಿಲ್ಲ. ಯಾವುದೇ ಷರತ್ತುಗಳಿಲ್ಲದೆ ಬಿಜೆಪಿ ಸೇರಿದ್ದೇನೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಮಾಹಿತಿ ನನಗಿಲ್ಲ’ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸ್ವಾತಂತ್ರ್ಯ ಬಂದು 79 ವರ್ಷ ಕಳೆದರೂ ರೈತರ ನೀರಿನ ಹೋರಾಟಕ್ಕೆ ಮುಕ್ತಿ ಇಲ್ಲ: ವೀರಭದ್ರಸ್ವಾಮಿ

ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ ಕಳೆಯುತ್ತಾ ಬಂದರೂ ಬೆಳೆಗಳನ್ನು ಉಳಿಸಿಕೊಳ್ಳಲು...

ಧಾರವಾಡ |ಪ್ರಜಾಪ್ರಭುತ್ವದ ಮೌಲ್ಯಗಳನ್ನು ಯುವಜನರಲ್ಲಿ ಬೆಳೆಸಬೇಕು: ಜಕ್ಕಪ್ಪನವರ

ಪ್ರಜಾಪ್ರಭುತ್ವದ ಆಶಯಗಳು ಭಾರತೀಯರ ಜೀವನದ ಅವಿಭಾಜ್ಯ ಭಾಗವಾಗಿದ್ದು, ಸಮಾನತೆ, ಭ್ರಾತೃತ್ವ ಮತ್ತು...

ಉಡುಪಿ | ಪಡುಬಿದ್ರಿಯಲ್ಲಿ ನ.18ರಂದು 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಾರ್ವಜನಿಕ, ಖಾಸಗಿ ಹಾಗೂ...