‘ನನ್ನ ಕಿಡ್ನಿ ಮಾರಿದ್ದೇನೆ, ಮಕ್ಕಳ ಕಿಡ್ನಿಯನ್ನೂ ಮಾರುವಂತೆ ಒತ್ತಾಯಿಸುತ್ತಿದ್ದಾರೆ’; ಮೈಕ್ರೋಫೈನಾನ್ಸ್‌ ಕಿರುಕುಳ ಬಿಚ್ಚಿಟ್ಟ ಮಹಿಳೆ

Date:

ಮೈಕ್ರೋಫೈನಾನ್ಸ್‌ನಿಂದ ಪಡೆದಿದ್ದ ಸಾಲ ತೀರಿಸಲು ನಾನು ನನ್ನ ಕಿಡ್ನಿ ಮಾರಿದ್ದೇನೆ. ಆದರೂ, ಸಾಲದಾತರು ಸಾಲ ಮುಗಿದಿಲ್ಲ ಎನ್ನುತ್ತಿದ್ದಾರೆ. ನನ್ನ ಇಬ್ಬರು ಹೆಣ್ಣುಮಕ್ಕಳ ಕಿಡ್ನಿಗಳನ್ನೂ ಮಾರಾಟ ಮಾಡಿ, ಹಣ ಪಾವತಿಸುವಂತೆ ಮೈಕ್ರೋಫೈನಾನ್ಸ್‌ ಏಜೆಂಟರು ಒತ್ತಾಯಿಸುತ್ತಿದ್ದಾರೆ ಎಂದು ರಾಮನಗರ ಜಿಲ್ಲೆಯ ಮಹಿಳೆಯೊಬ್ಬರು ಆರೋಪಿಸಿದ್ದಾರೆ.

- Advertisement -

ಜಿಲ್ಲೆಯ ಮಾಗಡಿ ಪಟ್ಟದ ನಿವಾಸಿ, ಕೃಷಿ ಕಾರ್ಮಿಕ ಮಹಿಳೆ ಗೀತಾ ಅವರು ಮೈಕ್ರೋಫೈನಾನ್ಸ್‌ ನೀಡುತ್ತಿರುವ ಕಿರುಕುಳದ ಬಗ್ಗೆ ಅಳಲು ತೋಡಿಕೊಂಡಿದ್ದಾರೆ. “2013ರಲ್ಲಿ ತನ್ನ ಪತಿ ಅನಾರೋಗ್ಯಕ್ಕೆ ತುತ್ತಾಗಿದ್ದರು. ಆಗ, ಮೈಕ್ರೋಫೈನಾನ್ಸ್‌ ನಡೆಸುತ್ತಿದ್ದ ಮಂಜುನಾಥ್ ಎಂಬಾತ ತಮಗೆ 2.5 ಲಕ್ಷ ರೂ. ಸಾಲ ನೀಡಿದ್ದರು. ಆದರೆ, ಚಿಕಿತ್ಸೆ ಫಲಿಸದೆ ತಮ್ಮ ಪತಿ ಸಾವನ್ನಪ್ಪಿದರು. ಜೀವನ ನಡೆಸುವುದೇ ಕಷ್ಟವಾಗಿತ್ತು. ಹೀಗಿದ್ದರೂ, ಕಷ್ಟದಿಂದ ದುಡಿತು ಇಬ್ಬರು ಹೆಣ್ಣುಮಕ್ಕಳಿಗೆ ಶಿಕ್ಷಣ ಕೊಡಿಸಿ, ಮದುವೆ ಮಾಡಿದ್ದೇನೆ” ಎಂದು ಮಹಿಳೆ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಸಾಲ ನೀಡಿದ್ದ ಮಂಜುನಾಥ್ ಸಾಲ ಮರುಪಾವತಿ ಮಾಡುವಂತಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು. ಸಾಲ ತೀರಿಸಲು ಕಿಡ್ನಿ ಮಾರುವಂತೆ ಒತ್ತಾಯಿಸಿದರು. ಅವರೇ ಆಸ್ಪತ್ರೆಗೆ ಕರೆದೊಯ್ದು ಕಡ್ನಿ ಮಾರಿಸಿದರು. ಮೂರು ವರ್ಷಗಳ ಹಿಂದೆ, ನನ್ನ ಒಂದು ಕಿಡ್ನಿಯನ್ನು 2.5 ಲಕ್ಷ ರೂ.ಗೆ ಮಾರಾಟ ಮಾಡಿ, ಸಾಲ ಮರುಪಾವತಿ ಮಾಡಿದ್ದೇನೆ. ಆದರೆ, ಈಗ ಕೆಲವು ವಾರಗಳಿಂದ ಮಂಜುನಾಥ್ ಮತ್ತೆ ಹಣ ಪಾವತಿ ಮಾಡಬೇಕೆಂದು ಕೇಳುತ್ತಿದ್ದಾರೆ” ಎಂದು ಮಹಿಳೆ ಆರೋಪಿಸಿದ್ದಾರೆ.

“ನಾನು ಇನ್ನಾವುದೇ ಹಣವನ್ನು ನೀಡುವುದಿಲ್ಲ ಎಂದು ಪ್ರತಿಭಟಿಸಿದೆ. ಆದರೆ, ಅವರು ನನ್ನ ಇಬ್ಬರು ವಿವಾಹಿತ ಹೆಣ್ಣುಮಕ್ಕಳಿಗೆ ಅವರ ಕಿಡ್ನಿಯನ್ನು ಮಾರಾಟ ಮಾಡಲು ಮನವೊಲಿಸುವಂತೆ ಒತ್ತಡ ಹಾಕುತ್ತಿದ್ದಾರೆ. ಆದರೆ, ನಾನು ಅವರೊಂದಿಗೆ ಜಗಳ ಮಾಡಿದ್ಧೇನೆ. ಇನ್ನಾವುದೇ ಸಾಲವೂ ಉಳಿದಿಲ್ಲವೆಂದು ನಿರಕಾರಿಸಿದ್ದೇನೆ” ಎಂದು ಮಹಿಳೆ ಹೇಳಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...