ತುಮಕೂರನ್ನು ʼಸ್ಮಾರ್ಟ್ ಸಿಟಿʼಗೆ ಸೇರಿಸಿದ್ದು ನಾನು: ಮುದ್ದಹನುಮೇಗೌಡ

Date:

Advertisements

ತುಮಕೂರು ಜಿಲ್ಲೆಯ ಭೌಗೋಳಿಕ ಚಿತ್ರಣವನ್ನು ಅರಿತಿದ್ದೇನೆ ಹಾಗೂ ಜಿಲ್ಲೆಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಮಗ್ರವಾದ ಅರಿವು ಇದ್ದಿದ್ದರಿಂದ ಐದು ವರ್ಷಗಳ ಕಾಲ ಜನರ ಬಳಿಯೇ ಇದ್ದು ಕೆಲಸ ಮಾಡಲು ಸಾಧ್ಯವಾಯಿತು. ಹಾಗಾಗಿ ಇಲ್ಲಿನ ಜನತೆಯ ನಾಡಿಮಿಡಿತ ಗೊತ್ತಿದೆ ಎಂದು ತುಮಕೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಎಸ್ ಪಿ ಮುದ್ದಹನುಮೇಗೌಡ ಹೇಳಿದರು.

ತುಮಕೂರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, “ತುಮಕೂರನ್ನು ಸ್ಮಾರ್ಟ್ ಸಿಟಿ ಯೋಜನೆ ವ್ಯಾಪ್ತಿಗೆ ಸೇರ್ಪಡೆ ಮಾಡಿರಲಿಲ್ಲ. ಅಂದಿನ ಸೆಂಟ್ರಲ್ ಅರ್ಬನ್ ಮಿನಿಸ್ಟರ್ ವೆಂಕಯ್ಯ ನಾಯ್ಡು ಅವರಿಗೆ, ‘ತುಮಕೂರು, ಬೆಂಗಳೂರಿನ ಪಕ್ಕದಲ್ಲೇ ಇರುವುದರಿಂದ ಒಂದು ಉಪನಗರಕ್ಕೆ ಇರುವ ಸಾಧ್ಯತೆಗಳನ್ನು ಮನವರಿಕೆ ಮಾಡಿದ ನಂತರ ತುಮಕೂರನ್ನು ಸ್ಮಾರ್ಟ್ ಸಿಟಿ ವ್ಯಾಪ್ತಿಗೆ ತರಲಾಯಿತು” ಎಂದು ಹೇಳಿದರು.

“ರಾಷ್ಟ್ರೀಯ ಹೆದ್ದಾರಿ 206 ಹಾಗೂ ದಾವಣಗೆರೆಗೆ ರೈಲು, ತುಮಕೂರು ರಾಯದುರ್ಗ ರೈಲ್ವೆ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕೆಲಸಗಳಿಗೆ ನನ್ನ ಕಾಲದಲ್ಲಿ ಶಂಕು ಸ್ಥಾಪನೆ ಮಾಡಿದ್ದೆ. ಈಗ ಎಲ್ಲವೂ ಸ್ಥಗಿತವಾಗಿವೆ. ಅಪ್ಪರ್ ಭದ್ರಾ ಯೋಜನೆಗೆ ಕೇಂದ್ರ ಸರ್ಕಾರ ₹5,000 ಕೋಟಿ ಹಣ ಮೀಸಲಿಟ್ಟಿತ್ತು. ಇದರಲ್ಲಿ ನಯಾ ಪೈಸೆ ಬಿಡುಗಡೆಯಾಗಿಲ್ಲ. ಈಗಿರುವ ಸ್ಥಳೀಯ ಸಂಸದರಾಗಲಿ, ರಾಜ್ಯ ಸಂಸದರಾಗಲೀ ತುಟಿ ಬಿಚ್ಚುತ್ತಿಲ್ಲ” ಎಂದು ಆರೋಪಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ರಾಜಾ ಅಮರೇಶ್ವರ ನಾಯಕರಿಗೆ ಟಿಕೆಟ್; ಬಿಜೆಪಿ ಕಾರ್ಯಕರ್ತರಲ್ಲಿ ಅಸಮಧಾನ

“ಜಿಲ್ಲೆಯಲ್ಲಿ ಶಾಸಕನಾಗಿ, ಸಂಸದನಾಗಿ ಶಕ್ತಿ ಮೀರಿ ಕೆಲಸ ಮಾಡಿದ್ದೇನೆ. ನನಗೆ ಈ ಬಾರಿ ಅವಕಾಶ ಮಾಡಿಕೊಡಿ” ಎಂದು ಮನವಿ ಮಾಡಿಕೊಂಡರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

"ಪರಿಶಿಷ್ಟ ವರ್ಗದ ಜನಾಂಗದ ಏಳಿಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ...

ಉಡುಪಿ | ಶಾಸಕ ಯಶ್ಪಾಲ್ ಸುವರ್ಣರವರ ಮೇಲೆ ಕಠಿಣ ಸಾಂವಿಧಾನಿಕ ಕ್ರಮ ಜರುಗಿಸಿ – ಕೆ ಫಣಿರಾಜ್

ತಮ್ಮ ಶಾಸಕ ಸ್ಥಾನದ ಸಂವಿಧಾನಿಕ ಮರ್ಯಾದೆಯನ್ನು ಮೀರಿ ವರ್ತಿಸಿರುವ ಉಡುಪಿಯ ಶಾಸಕ...

ಮಂಗಳೂರು | ಬಾಲಕರ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಮೊಹಮ್ಮದ್ ಮಿಕ್ದಾದ್‌ಗೆ ಪ್ರಥಮ ಸ್ಥಾನ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ದ.ಕ. ಶಾಲಾ ಶಿಕ್ಷಣ ಇಲಾಖೆಯು 2025-2026ನೇ...

ಭಾಲ್ಕಿ | ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮ ಅರಿವು ಅಭಿಯಾನ

ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದಲ್ಲಿ ಎನ್‌ಆರ್‌ಎಲ್‌ಎಂ ಇಲಾಖೆ ಹಾಗೂ ಜೈ ಕರ್ನಾಟಕ...

Download Eedina App Android / iOS

X