ಸಾರ್ವಜನಿಕರು ಬೆಂಗಳೂರುವರೆಗೆ ಬರುವುದು ತಪ್ಪಿಸಲು ನಾನೇ ಜನರ ಬಳಿ ಹೋಗುವೆ: ಸಚಿವ ಜಮೀರ್ ಅಹ್ಮದ್

Date:

  • ಆಗಸ್ಟ್ 1ರಿಂದ ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ಎರಡು ದಿನ ಜನತಾ ದರ್ಶನ ನಡೆಸುವೆ
  • ಜನತಾ ದರ್ಶನದ ವೇಳೆ ಸಮಸ್ಯೆ ಕಂಡುಬಂದರೆ ಸ್ಥಳದಲ್ಲೇ ಅಧಿಕಾರಿಗಳ ಮೇಲೆ ಕ್ರಮ

ರಾಜ್ಯಾದ್ಯಂತ ಜಿಲ್ಲಾ ಮಟ್ಟದಲ್ಲಿ ಆಗಸ್ಟ್ ಒಂದರಿಂದ ಜನತಾ ದರ್ಶನ ಆರಂಭಿಸುವೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.

- Advertisement -

ಗುರುವಾರ ಕೊಳಗೇರಿ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, “ಪ್ರತಿ ತಿಂಗಳು ಒಂದೊಂದು ಜಿಲ್ಲೆಯಲ್ಲಿ ಎರಡು ದಿನ ಜನತಾ ದರ್ಶನ ನಡೆಸಲಿದ್ದೇನೆ. ಜಿಲ್ಲೆ ವ್ಯಾಪ್ತಿಯ ಎರಡೂ ಇಲಾಖೆಗಳ ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳು ನನ್ನ ಜೊತೆ ಇರಲಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ವಸತಿ ಹಾಗೂ ಅಲ್ಪಸಂಖ್ಯಾತರ ಇಲಾಖೆ ವ್ಯಾಪ್ತಿಯ ಸವಲತ್ತು ಮತ್ತು ಸೌಲಭ್ಯಗಳಿಗಾಗಿ ಸಾರ್ವಜನಿಕರು ಬೆಂಗಳೂರುವರೆಗೆ ಬರುವುದನ್ನು ತಪ್ಪಿಸಲು ಜನರ ಬಳಿಗೆ ನಾನೇ ಹೋಗಲು ನಿರ್ಧರಿಸಿದ್ದೇನೆ. ಆಗಸ್ಟ್ ಒಳಗೆ ಎರಡೂ ಇಲಾಖೆಗಳಿಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೆ ಪರಿಹರಿಸಲು ಅಧಿಕಾರಿಗಳಿಗೆ ಎರಡು ತಿಂಗಳ ಗಡುವು ನೀಡುತ್ತಿದ್ದೇನೆ” ಎಂದು ಸೂಚಿಸಿದರು.

“ಜನತಾ ದರ್ಶನ ಸಂದರ್ಭದಲ್ಲಿ ಏನಾದರೂ ಸಮಸ್ಯೆ ಕಂಡುಬಂದರೆ ಅಥವಾ ಅಧಿಕಾರಿಗಳ ಮಟ್ಟದಲ್ಲಿ ತಪ್ಪು ನಡೆದಿದ್ದರೆ ದೂರುಗಳು ಬಂದರೆ ಅಂತಹವರ ವಿರುದ್ಧ ಸ್ಥಳದಲ್ಲೇ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಬಿಎಂಪಿ ಚುನಾವಣೆ; ಸಿದ್ದರಾಮಯ್ಯ ಸರ್ಕಾರದ ಮುಂದಿವೆ ಹಲವು ಸವಾಲು

ಅಮಾನತಿಗೆ ಆದೇಶ

ಪ್ರಗತಿ ಪರಿಶೀಲನಾ ಸಭೆಗೆ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ವಸತಿ ಸಚಿವ ಜಮೀರ್‌ ಅಹ್ಮದ್‌ ಆಕ್ರೋಶಗೊಂಡರು. ಮೇಲಧಿಕಾರಿಗಳ ಅನುಮತಿ ಪಡೆಯದೇ, ಗೈರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.

ಇದೇ ಸಂದರ್ಭದಲ್ಲಿ ಅನುಮತಿ ಪಡೆಯದೇ ಗೈರಾಗಿದ್ದ ಮಂಡ್ಯದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ದರ್ಶನ್‌ ಜೈನ್‌ ಅವರನ್ನು ಸಚಿವರು ಸ್ಥಳದಲ್ಲೇ ಅಮಾನತು ಮಾಡುವಂತೆ ಆದೇಶಿಸಿದರು.

ಕೊಳೆಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ಬಿ. ವೆಂಕಟೇಶ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...