ಮಂಗಳೂರು ಜೆರೋಸಾ ಶಾಲೆ ವಿವಾದ: ತನಿಖೆ ಆರಂಭಿಸಿದ ಐಎಎಸ್ ಅಧಿಕಾರಿ ಆಕಾಶ್ ಶಂಕರ್

Date:

Advertisements

ಮಂಗಳೂರು ಜೆರೋಸಾ ಶಾಲೆಯಲ್ಲಿ ಹಿಂದೂ ದೇವರನ್ನು ಅವಹೇಳನ ಮಾಡಿದ್ದಾರೆಂಬ ಆರೋಪದ ಬಗ್ಗೆ ತನಿಖೆಗೆ ನೇಮಕಗೊಂಡಿರುವ ಐಎಎಸ್ ಅಧಿಕಾರಿ ಡಾ. ಆಕಾಶ್ ಶಂಕರ್ ಮಂಗಳೂರಿಗೆ ಸೋಮವಾರ ಆಗಮಿಸಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಡಿಡಿಪಿಐ, ಬಿಇಓ ಮತ್ತು ಇಲಾಖೆಯ ಇತರ ಅಧಿಕಾರಿಗಳು ಈವರೆಗೆ ಆಗಿರುವ ಬೆಳವಣಿಗೆಯ ಬಗ್ಗೆ ತನಿಖಾಧಿಕಾರಿ ಮುಂದೆ ಮಾಹಿತಿ ನೀಡಿದ್ದಾರೆ. ಮಂಗಳೂರಿನ ಜಿಲ್ಲಾ ಪಂಚಾಯತ್ ಬಳಿಯ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಅಧಿಕಾರಿಗಳನ್ನು ಒಬ್ಬೊಬ್ಬರನ್ನೇ ಕರೆದು ಮಾಹಿತಿ ಸಂಗ್ರಹಿಸಿದ್ದಾರೆ.

ಆ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಡಾ. ಆಕಾಶ್ ಶಂಕರ್, “ತನಿಖೆಯ ಹಂತದಲ್ಲಿ ಯಾವುದನ್ನೂ ಹೇಳಲಾಗದು. ಯಾವ ರೀತಿ ತನಿಖೆ ನಡೆಸಬೇಕು ಎಂಬುದರ ಬಗ್ಗೆ ನಾನು ಯೋಜನೆ ಹಾಕಿಕೊಂಡಿದ್ದೇನೆ. ಎರಡು ದಿನ ಇಲ್ಲೇ ಇರುತ್ತೇನೆ. ಯಾವ ರೀತಿಯ ತನಿಖೆ ಎನ್ನುವುದನ್ನು ಬಹಿರಂಗವಾಗಿ ಹೇಳುವುದಕ್ಕಾಗುವುದಿಲ್ಲ” ಎಂದರು.

Advertisements

ಶಾಲೆಯ ಶಿಕ್ಷಕರು, ಮಕ್ಕಳನ್ನು ಮಾತನಾಡಿಸುತ್ತೀರಾ ಎಂದು ಪತ್ರಕರ್ತರು ಕೇಳಿದ್ದಕ್ಕೆ, “ಅದನ್ನು ಯಾವುದನ್ನೂ ಹೇಳುವುದಿಲ್ಲ. ಸತ್ಯಾನ್ವೇಷಣೆಗೆ ಬಂದಿದ್ದೇನೆ. ಆದಷ್ಟು ವೇಗ ತನಿಖೆ ಪೂರ್ಣಗೊಳಿಸಿ, ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ. ಎಲ್ಲರೂ ತನಿಖೆಗೆ ಸಹಕರಿಸಬೇಕು” ಎಂದಿದ್ದಾರೆ.

ಇದನ್ನು ಓದಿದ್ದೀರಾ? ಮಂಗಳೂರು ಪ್ರಕರಣ | ಬಿಜೆಪಿ ಶಾಸಕರ ಮೇಲಿನ ಎಫ್‌ಐಆರ್ ಖಂಡಿಸಿ ರಸ್ತೆ ತಡೆ: ಸಂಘಪರಿವಾರದ ಕಾರ್ಯಕರ್ತರ ಬಂಧನ

ಜೆರೋಸಾ ಶಾಲೆಯ ವಿಚಾರದಲ್ಲಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಪ್ರತಿಭಟನೆ ನಡೆಸಿರುವುದು, ಶಾಲೆಯಲ್ಲಿ ಹಿಂದೂ ದೇವರ ಅವಹೇಳನ ಮಾಡಿದ್ದಾರೆಂದು ಶಿಕ್ಷಕಿ ವಿರುದ್ಧ ಕೇಳಿಬಂದ ಆರೋಪದ ಬಗ್ಗೆ ಹಾಗೂ ಒಟ್ಟು ಬೆಳವಣಿಗೆ ತನಿಖೆಗೆ ಗುಲ್ಬರ್ಗ ವಿಭಾಗದ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಆಕಾಶ್ ಶಂಕರ್ ಅವರನ್ನು ಸರ್ಕಾರ ನೇಮಿಕಗೊಳಿಸಿ, ಆದೇಶಿಸಿತ್ತು.

ಎಫ್‌ಐಆರ್ ಖಂಡಿಸಿ ರಸ್ತೆ ತಡೆ ನಡೆಸಿದ ಸಂಘಪರಿವಾರದ ಕಾರ್ಯಕರ್ತರು

ಈ ವಿವಾದಕ್ಕೆ ಸಂಬಂಧಿಸಿದಂತೆ ಮಧ್ಯ ಪ್ರವೇಶ ಮಾಡಿ ವಿದ್ಯಾರ್ಥಿಗಳನ್ನು ಪ್ರಚೋದಿಸಿದ್ದ ಬಿಜೆಪಿ ಶಾಸಕರು, ಹಿಂದೂ ಸಂಘಟನೆಯ ಪ್ರಮುಖರ ಮೇಲೆ ಎಫ್‌ಐಆರ್ ದಾಖಲು ಮಾಡಿರುವುದನ್ನು ಖಂಡಿಸಿ ಸಂಘಪರಿವಾರದ ಕಾರ್ಯಕರ್ತರು ಮಂಗಳೂರಿನಲ್ಲಿ ದಿಡೀರ್ ರಸ್ತೆ ತಡೆ ನಡೆಸಲು ಯತ್ನಿಸಿದ ಘಟನೆ ನಡೆದಿತ್ತು. ಎಲ್ಲರನ್ನೂ ಪೊಲೀಸರು ಬಂಧಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X