ವಸತಿ ಇಲಾಖೆಯಲ್ಲಿ ಲಂಚ ಪಡೆದವರನ್ನು ಪತ್ತೆ ಹಚ್ಚಿ: ಲೋಕಾಯುಕ್ತಕ್ಕೆ ನೈಜ ಹೋರಾಟಗಾರರ ವೇದಿಕೆ ದೂರು

Date:

ಕೆಲವು ದಿನಗಳ ಹಿಂದೆ ವಸತಿ ಯೋಜನೆಯಡಿ ಮನೆ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಅವರ ಆರೋಪದ ಬಗ್ಗೆ ಸೂಕ್ತವಾದ ತನಿಖೆ ನಡೆಸಬೇಕು ಹಾಗೂ ಸರ್ಕಾರದ ಸೇವೆಯನ್ನು ಪಡೆಯಲು ಲಂಚ ಪಡೆಯುವ ಜನಪ್ರತಿನಿಧಿಗಳು ಅಥವಾ ಅಧಿಕಾರಿಗಳು ಯಾರೆಂದು ಗುರುತಿಸಿ ಅವರಿಗೆ ಕಾನೂನಿನ ಚೌಕಟ್ಟಿನೊಳಗಡೆ ಶಿಕ್ಷೆಗೆ ಒಳಪಡಿಸ ಬೇಕು ಎಂದು ನೈಜ ಹೋರಾಟಗಾರರ ವೇದಿಕೆ ಆಗ್ರಹಿಸಿದೆ.

- Advertisement -

ಈ ಬಗ್ಗೆ ಕರ್ನಾಟಕ ಲೋಕಾಯುಕ್ತ ಪೊಲೀಸರಿಗೆ ದೂರನ್ನು ಸಲ್ಲಿಸಿರುವ ವೇದಿಕೆಯ ಮುಖಂಡರಾದ ಹೆಚ್ ಎಂ ವೆಂಕಟೇಶ್ ನೇತೃತ್ವದ ನಿಯೋಗವು, ನಮ್ಮ ದೂರನ್ನು ಆಧರಿಸಿ ಪ್ರಥಮ ವರ್ತಮಾನ ವರದಿಯನ್ನು ದಾಖಲಿಸಿ ತನಿಖೆಯನ್ನು ನಡೆಸಬೇಕು ಎಂದು ಒತ್ತಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಸರ್ಕಾರದ ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆಳಂದ ಕ್ಷೇತ್ರದ ಶಾಸಕರಾದ ಬಿ. ಆರ್ ಪಾಟೀಲ್ ಅವರು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಕಾರ್ಯದರ್ಶಿ ಸರ್ಫರಾಜ್ ಜೊತೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ್ದಾರೆನ್ನಲಾದ ಆಡಿಯೋ ರಾಜ್ಯದಾದ್ಯಂತ ಸಂಚಲನವನ್ನುಂಟುಮಾಡಿ ಈಗ ಸುದ್ದಿಯಲ್ಲಿದೆ. ಇದರಲ್ಲಿ ಬಹಳ ಪ್ರಮುಖವಾಗಿ ರಾಜೀವ್ ಗಾಂಧಿ ವಸತಿ ನಿಗಮದಿಂದ ದೀನ ದುರ್ಬಲರಿಗೆ ವಸತಿ ಹೀನರಿಗೆ ಸರ್ಕಾರ ಹಂಚಿಕೆ ಮಾಡುವ ಮನೆಗಳನ್ನು ಪಡೆದುಕೊಳ್ಳಲು ಹಣ ಕೊಟ್ಟರೆ ಮಾತ್ರ ಹಂಚಿಕೆಯಾಗುತ್ತದೆ ಎಂಬ ಸಂಭಾಷಣೆ ನಡೆದಿರುವುದು ಅತ್ಯಂತ ಆಘಾತಕಾರಿಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Screenshot 2024 09 19 103603
ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್

ಬಿ ಆರ್ ಪಾಟೀಲ್ ಅವರು ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಹಾಗೂ ಸರ್ಕಾರದ ಅಂಗವಾದ ನೀತಿ ಆಯೋಗದ (ಯೋಜನಾ ಆಯೋಗ) ಉಪಾಧ್ಯಕ್ಷರಾಗಿಯು ಸೇವೆ ಸಲ್ಲಿಸುತ್ತಿದ್ದಾರೆ. ಇವರ ಈ ಹೇಳಿಕೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭ್ರಷ್ಟಾ ಆಡಳಿತದ ಅಂಶ ಚರ್ಚೆಯಾಗಿರುವುದು ಅಘಾತಕಾರಿಯಾಗಿದೆ. ಲಂಚ ಕೊಟ್ಟವರಿಗೆ ಮಾತ್ರ ಮನೆ ಹಂಚಿಕೆಯಾಗುತ್ತದೆ ಎಂದು ಬಿ ಆರ್ ಪಾಟೀಲ್ ಅವರು ಹೇಳಿರುವುದು ವಸತಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಈ ಹೇಳಿಕೆ ಯಾವುದೇ ಜನಸಾಮಾನ್ಯ ವ್ಯಕ್ತಿ ಹೇಳಿಕೆಯಲ್ಲ. ಇದು ಜವಾಬ್ದಾರಿಯುತಾ ಸ್ನಾನದಲ್ಲಿರುವ ಕಾನೂನುಗಳನ್ನು ರೂಪಿಸುವ ಮತ್ತು ಯೋಜನೆಗಳನ್ನು ರೂಪಿಸಿ ಜಾರಿಗೆ ತರುವ ನೀತಿ ಆಯೋಗದ ಉಪಾಧ್ಯಕ್ಷರಾಗಿರುವ ಬಿಆರ್ ಪಾಟೀಲ್ ಅವರು ಹೇಳಿರುವುದನ್ನು ನಾವೆಲ್ಲರೂ ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.

ಭ್ರಷ್ಟಾಚಾರದ ಆಡಿಯೋ ಸಂಭಾಷಣೆ ಮತ್ತು ಮಾಧ್ಯಮಗಳ ವರದಿಯು ಜನರ ನಡುವೆ ಚರ್ಚೆಗೆ ಗ್ರಾಸವಾಗುತ್ತಿದ್ದರೂ ಸಹ ಸಂಭಾಷಣೆಯಲ್ಲಿ ಭಾಗಿಯಾಗಿರುವವರನ್ನು ಪತ್ತೆ ಮಾಡಲು ಸರ್ಕಾರದ ಅಧಿಕಾರಿ ಸರ್ಫ್ ರಾಜ್ ಖಾನ್ ಅಥವಾ ಜನಪ್ರತಿನಿಧಿಗಳಾದ ಬಿ ಆರ್ ಪಾಟೀಲ್ ಈವರೆಗೂ ದೂರು ದೂರು ನೀಡಿಲ್ಲ. ಭ್ರಷ್ಟಾಚಾರದ ಈ ಸಂಭಾಷಣೆ ವಸತಿ ಇಲಾಖೆಯಲ್ಲಿನ ಇಡೀ ರಾಜ್ಯದಾದ್ಯಂತ ಪ್ರಸಾರವಾದರೂ ಸಹ ಸರ್ಕಾರವು ಕೂಡ ಈ ಬಗ್ಗೆ ತನಿಖೆಗೆ ಮುಂದಾಗಿಲ್ಲ. ಮುಖ್ಯವಾಗಿ ಭ್ರಷ್ಟಾಚಾರವನ್ನು ತಡೆಗಟ್ಟಬೇಕಾದ ಲೋಕಾಯುಕ್ತ ಸಂಸ್ಥೆಯು ಸ್ವಯಂ ಪ್ರೇರಿತವಾಗಿ ದೂರನ್ನು ದಾಖಲಿಸಿ ತನಿಖೆಗೆ ಮುಂದಾಗದೆ ಇರುವುದು ದುರದೃಷ್ಟಕರ ಸಂಗತಿಯಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಕರ್ನಾಟಕ ಲೋಕಾಯುಕ್ತವು ಜನಪ್ರತಿನಿಧಿಗಳು ಮತ್ತು ಸರ್ಕಾರದ ಅಧಿಕಾರಿಗಳು ಕರ್ತವ್ಯ ಲೋಪ ಮತ್ತು ಲಂಚ ಪ್ರಕರಣದಲ್ಲಿ ಭಾಗಿಯಾದಾಗ ಅವರನ್ನು ತನಿಖೆಗೆ ಒಳಪಡಿಸಿ ಸತ್ಯಾಸತ್ಯತೆಯನ್ನು ಹೊರಗೆ ತಂದು ತಪ್ಪಿತಸ್ಥರಿಗೆ ಶಿಕ್ಷೆ ಕೊಡಲು ಈ ಸಂಸ್ಥೆಯನ್ನು 1984ರಲ್ಲಿ ರಾಜ್ಯ ಸರ್ಕಾರವು ಹುಟ್ಟು ಹಾಕಿದೆ. ಆದುದರಿಂದ ಸರ್ಕಾರದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ನಡೆದ ಈ ಸಂಭಾಷಣೆಯ ಬಗ್ಗೆ ಲೋಕಾಯುಕ್ತ ಸಂಸ್ಥೆಯು ತಕ್ಷಣ ಮಧ್ಯ ಪ್ರವೇಶಿಸಿ ಕಾನೂನು ಕ್ರಮಗಳನ್ನು ಜರುಗಿಸಬೇಕೆಂದು ನೈಜ ಹೋರಾಟಗಾರರ ವೇದಿಕೆಯಿಂದ ಒತ್ತಾಯಿಸಿದೆ.

ಇದನ್ನು ಓದಿದ್ದೀರಾ? ಸಾಬರ ಹೆಸ್ರಿಗೆ ಜಮೀನು ಮಾಡಿದ್ರೆ ನೇಣಿಗೆ ಹಾಕೋದು ಗ್ಯಾರಂಟಿ: ದ್ವೇಷ ಹರಡಿದ ಶ್ರೀರಂಗಪಟ್ಟಣ ಕಾಂಗ್ರೆಸ್ ಶಾಸಕ!

ಆಡಿಯೋ ಸಂಭಾಷಣೆಯಲ್ಲಿ ಬಿ ಆರ್ ಪಾಟೀಲ್ ಅವರು ನಾನು ಸಂಪೂರ್ಣವಾಗಿ ಬಾಯಿಬಿಟ್ಟರೆ ಸರ್ಕಾರವೇ ಅಲುಗಾಡುತ್ತದೆ ಎಂದು ಹೇಳಿದ್ದಾರೆ. ಆದುದರಿಂದ ಈ ಸಂಭಾಷಣೆಯನ್ನು ಅತ್ಯಂತ ಆಳವಾಗಿ ತನಿಖೆಗೆ ಒಳಪಡಿಸಬೇಕಾದ ಅಗತ್ಯತೆ ಇದೆ. ಪಂಚಾಯಿತಿಯ ಅಧ್ಯಕ್ಷರು ಪತ್ರ ತೆಗೆದುಕೊಂಡು ಹೋಗಿ ಲಂಚ (ಹಣ) ಕೊಟ್ಟರೆ ಅವರು ಹೇಳಿದ ವ್ಯಕ್ತಿಗಳಿಗೆ ಮನೆಗಳು ಮಂಜೂರಾಗುತ್ತವೆ. ನನ್ನ ಪತ್ರಕ್ಕೆ ಕವಡೆ ಕಾಸಿನ ಕಿಮ್ಮತ್ತು ಇಲ್ಲ ಎಂಬ ಅರ್ಥದಲ್ಲಿ ಹೇಳಿರುತ್ತಾರೆ. ಲಂಚ ಪಡೆಯುವ ಅಧಿಕಾರಿ ಯಾರು? ಲಂಚ ಕೊಡುವವರು ಯಾರು? ಎಂಬುದನ್ನು ಆಳವಾಗಿ ತನಿಖೆ ನಡೆಸಿ, ಸರ್ಕಾರದ ಸೇವೆಯನ್ನು ಪಡೆಯಲು ಲಂಚ ಪಡೆಯುವ ಜನಪ್ರತಿನಿಧಿಗಳು ಅಥವಾ ಅಧಿಕಾರಿಗಳು ಯಾರೆಂದು ಗುರುತಿಸಬೇಕು. ಅವರನ್ನು ಕಾನೂನಿನ ಚೌಕಟ್ಟಿನೊಳಗಡೆ ಶಿಕ್ಷೆಗೆ ಒಳಪಡಿಸಬೇಕು ಮತ್ತು ಈ ದೂರನ್ನು ಆಧರಿಸಿ ಎಫ್‌ಐಆರ್ ಅನ್ನು ದಾಖಲಿಸಿ ತನಿಖೆ ನಡೆಸಬೇಕೆಂದು ನೈಜ ಹೋರಾಟಗಾರರ ವೇದಿಕೆಯು ಕರ್ನಾಟಕ ಲೋಕಾಯುಕ್ತ ಪೊಲೀಸರನ್ನು ಆಗ್ರಹಿಸಿದೆ.

ಮನವಿ ಸಲ್ಲಿಸುವ ಸಂದರ್ಭದಲ್ಲಿ ನೈಜ ಹೋರಾಟಗಾರರ ವೇದಿಕೆಯ ಮುಖಂಡರಾದ ಬಿ ಎಸ್ ಲೋಕೇಶ್ ಹಾಗೂ ಎಂ ಜಗದೀಶ್ ಅವರು ನಿಯೋಗದಲ್ಲಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...