ಇದ್ರೀಸ್‌ ಕುಟುಂಬಕ್ಕೆ ₹25 ಲಕ್ಷ ಪರಿಹಾರ: ಸಿಎಂ ವಿರುದ್ಧ ಪುನೀತ್‌ ಕೆರೆಹಳ್ಳಿ ವಾಗ್ದಾಳಿ, ವಿಡಿಯೋ ವೈರಲ್

Date:

ಇದ್ರೀಸ್‌ ಪಾಷಾ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರವನ್ನು ಸರಕಾರದಿಂದ ನೀಡಿರುವುದಕ್ಕೆ, ಇದ್ರೀಸ್‌ ಪಾಷಾ ಹತ್ಯೆಯ ಪ್ರಮುಖ ಆರೋಪಿ ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಾಲಿಗೆ ಹರಿಯಬಿಟ್ಟಿರುವ ವಿಡಿಯೋ ವೈರಲ್ ಆಗಿದೆ.

- Advertisement -

ಆರು ನಿಮಿಷ ಮಾತನಾಡಿರುವ ವಿಡಿಯೋವನ್ನು ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿರುವ ಆರೋಪಿ ಪುನೀತ್‌ ಕೆರೆಹಳ್ಳಿ “ನಮ್ಮ ತೆರಿಗೆ ಹಣವನ್ನು ಯಾವ ಆಧಾರದಲ್ಲಿ, ಯಾವ ಕಾರಣಕ್ಕೆ ಇದ್ರೀಸ್‌ ಕುಟುಂಬಕ್ಕೆ ಕೊಟ್ರಿ? ನ್ಯಾಯಾಲಯ ಕೊಲೆ ಎಂದು ತೀರ್ಮಾನಿಸುವ ಮುನ್ನ ನೀವೇಕೆ 25 ಲಕ್ಷ ಕೊಟ್ರಿ? ನೀವು ಪ್ರಚೋದನೆ ಮಾಡುತ್ತಿದ್ದೀರಾ?” ಎಂದು ಸಿಎಂಗೆ ಪ್ರಶ್ನಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಅಕ್ರಮವಾಗಿ 17 ಜಾನುವಾರು ಸಾಗಾಟ ಮಾಡಿದ್ದು ಅಕ್ರಮ ಅಲ್ವ? ಸಿದ್ದರಾಮಯ್ಯನವರೇ ರಾಜ್ಯದ ಮುಖ್ಯಮಂತ್ರಿಯಾಗಿ ಏನು ಮಾಡ್ತಿದ್ದೀರಾ? ಯಾಕೆ ಗೋರಕ್ಷಕರ ಹೊಟ್ಟೆ ಉರಿಸ್ತಿದ್ದೀರಾ? ಯಾಕೆ ಹಿಂದುಗಳ ಮೇಲೆ ದಬ್ಬಾಳಿಕೆ ಮಾಡುತ್ತಿದ್ದೀರಿ? ಯಾವ ಅಧಿಕಾರ ಇದೆ ಎಂದು ನಮ್ಮ‌ ಮೇಲೆ ನೀವು ಈ ರೀತಿ‌ ಮಾಡ್ತಿದ್ದೀರಾ?” ಎಂದು ಕಿಡಿಕಾರಿದ್ದಾರೆ.

“ನಮ್ಮನ್ನು ಜೈಲಿಗೆ ಹಾಕಿದ್ದೀರಾ, ನಾಳೆ ನಿರಪರಾಧಿ ಎಂದು ಸಾಬೀತಾದರೆ 25 ಲಕ್ಷ ರೂಪಾಯಿ ನಮಗೆ ಕೊಡ್ತೀರಾ? ಯಾವ ಆಧಾರದಲ್ಲಿ ಅವರಿಗೆ ಹಣ ಕೊಟ್ರಿ? ಯಾರ ಅಪ್ಪನ ಮನೆಯಿಂದ ಹಣ ಕೊಟ್ರಿ? ರಾಜ್ಯದ ಮುಖ್ಯಮಂತ್ರಿಯಾಗಿ ನೀವು ಗೋ ಹತ್ಯೆಗೆ ಪ್ರಚೋದನೆ ಕೊಡ್ತಿದ್ದೀರಾ?” ಎಂದು ವಾಗ್ದಾಳಿ ನಡೆಸಿದ್ದಾನೆ.

“ಕಾನೂನು ಮೀರಿದವರಿಗೆ ಹಣ ಕೊಡ್ತಿದ್ದೀರಿ, ನಿಮಗೆ ಗೋಮಾತೆ ಕ್ಷಮಿಸುವುದಿಲ್ಲ, ಗೋ ಮಾತೆ ನಿಮಗೆ ಶಿಕ್ಷೆ ಕೊಡ್ತಾಳೆ” ಎನ್ನವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಗೃಹಜ್ಯೋತಿ ಯೋಜನೆ; ರಾತ್ರಿ ವೇಳೆ ಸರ್ವರ್ ಸಕ್ರಿಯ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...