ದ.ಕ.ಜಿಲ್ಲೆಯ ಎಲ್ಲ ‘ಟಾರ್ಗೆಟೆಡ್ ಮರ್ಡರ್‌’ಗಳ ಬಗ್ಗೆ ಎಸ್‌ಐಟಿ ರಚಿಸಿದರೆ ವಾಸ್ತವ ಬಯಲು: ರಮಾನಾಥ ರೈ

Date:

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕುಡುಪು ಮೈದಾನದಲ್ಲಿ ಕೇರಳದ ಮುಸ್ಲಿಂ ಯುವಕನನ್ನು ಸುಮಾರು ಐವತ್ತರಷ್ಟಿದ್ದ ಕೋಮುವಾದಿ ಗುಂಪು ಹೊಡೆದು ಹತ್ಯೆಗೈದಿದ್ದ ಘಟನೆಗೆ ಸಂಬಂಧಿಸಿದಂತೆ ಗುರುವಾರ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ, “ದ.ಕ. ಜಿಲ್ಲೆಯ ಎಲ್ಲ ‘ಟಾರ್ಗೆಟೆಡ್ ಮರ್ಡರ್‌’ಗಳ ಬಗ್ಗೆ ಸರ್ಕಾರ ಎಸ್‌ಐಟಿ ರಚಿಸಿದರೆ ವಾಸ್ತವಾಂಶ ಬಯಲಾಗಲಿದೆ” ಎಂದು ತಿಳಿಸಿದ್ದಾರೆ.

- Advertisement -

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಅಶ್ರಫ್ ಹತ್ಯೆಗೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು ಕಾರಣ ಎಂದು ಗುಲ್ಲೆಬ್ಬಿಸಲಾಗಿದೆ. ಪಾಕಿಸ್ತಾನ್ ಜಿಂದಾಬಾದ್ ಹೇಳಿದ್ದನ್ನು ಕೇಳಿದವರು ಯಾರು? ಒಂದೋ ಹತ್ಯೆ ಮಾಡಿದವರು ಅಥವಾ ಅಲ್ಲಿದ್ದ ಸಾಕ್ಷಿದಾರರು. ಹಾಗಾಗಿ, ಈ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು. ಹಾಗಾದಲ್ಲಿ ಮಾತ್ರ ತಪ್ಪಿತಸ್ಥರಿಗೆ ಶಿಕ್ಷೆಯಾಗಬಹುದು” ಎಂದು ಅಭಿಪ್ರಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಕುಡುಪುವಿನಲ್ಲಿ ಗುಂಪಿನಿಂದ ಹಲ್ಲೆಗೊಳಗಾಗಿ ಯುವಕ ಮೃತಪಟ್ಟಿರುವ ಪ್ರಕರಣದ ತನಿಖೆಗೆ ವಿಶೇಷ ತನಿಖಾ ಸಂಸ್ಥೆ (ಎಸ್‌ಐಟಿ) ರಚಿಸಬೇಕು. ಹತ್ಯೆಯ ಹಿಂದೆ ಯಾರಿದ್ದಾರೆ ಎಂದು ಪತ್ತೆ ಹಚ್ಚಿ ಕ್ರಮ ಕೊಂಡರೆ ಅದು ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಶಾಶ್ವತ ಶಾಂತಿ ನೆಲೆಸಲು ನೆರವಾಗಲಿದೆ” ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕಕ್ಕೂ ಕಾಲಿಟ್ಟ ಮಾಬ್ ಲಿಂಚಿಂಗ್; ಇಲ್ಲಿ ಸರ್ಕಾರ ಜೀವಂತವಿದೆಯೇ?

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಬ್‌ದಾಳಿ, ಚರ್ಚ್‌ದಾಳಿಗಳ ಫಲಿತಾಂಶ, ಪರಿಣಾಮ ಏನಾಗಿದೆ ಎಂದು ಎಲ್ಲರಿಗೂ ಗೊತ್ತಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಧರ್ಮಾಧಾರಿತ ರಾಜಕೀಯ ಹತ್ಯೆಗಳಿಗೆ ಎರಡೂ ಧರ್ಮಗಳ ಮತೀಯವಾದಿ ಶಕ್ತಿಗಳು ಕಾರಣ. ಕುಡುಪುವಿನಲ್ಲಿ ನಡೆದಿರುವುದು ಕೋಮು ಘರ್ಷಣೆ ಅಲ್ಲ. ‘ಟಾರ್ಗೆಟೆಡ್ ಕಿಲ್ಲಿಂಗ್’. ಇದು ಅತ್ಯಂತ ಅಪಾಯಕಾರಿಯಾಗಿದ್ದು, ಗುಂಪು ಹಲ್ಲೆ ಪ್ರಕರಣದ ಮೂಲಕ ಅದರ ಪ್ರಾರಂಭವಾಗಿದೆ. ಇದನ್ನು ಮೊಳಕೆಯಲ್ಲೇ ಚಿವುಟಬೇಕಾದ ಅನಿವಾರ್ಯತೆ ಇದೆ. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಶೀಘ್ರದಲ್ಲೇ ಸಿಎಂ ಬಳಿಗೆ ನಿಯೋಗ ಹೋಗಿ ಒತ್ತಾಯಿಸುತ್ತೇವೆ ಎಂದು ರಮಾನಾಥ ರೈ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...