ಕಾವೇರಿ ಪ್ರತಿಭಟನೆ | ಅಹಿತಕರ ಘಟನೆ ನಡೆದರೆ ಕಾನೂನು ಕ್ರಮ: ಸಚಿವ ಪರಮೇಶ್ವರ್‌ ಎಚ್ಚರಿಕೆ

Date:

  • ಆರ್‌ಎಎಫ್‌ ನಿಯೋಜನೆ ಸೇರಿ, ಬಿಗಿ ಬಂದೋಬಸ್ತ್‌ ವ್ಯವಸ್ಥೆ ಮಾಡಿದ್ದೇವೆ
  • ಪ್ರತಿಭಟನೆ ಮಾಡಲು ನಮ್ಮ ತಕರಾರು ಇಲ್ಲ. ಆದರೆ ರಾಜಕೀಯ ಬೇಡ

ರಾಜ್ಯದ ನೆಲ ಜಲದ ವಿಚಾರದಲ್ಲಿ ಸಂಘ ಸಂಸ್ಥೆಗಳು ಪ್ರತಿಭಟನೆ ಮಾಡಬಹುದು. ಆದರೆ, ಸಾರ್ವಜನಿಕ ಆಸ್ತಿಗಳಿಗೆ ನಷ್ಟ ಮಾಡಬಾರದು. ಮಂಡ್ಯ ಬಂದ್‌ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್‌ಎಎಫ್‌) ನಿಯೋಜನೆ ಸೇರಿ, ಬಿಗಿ ಬಂದೋಬಸ್ತ್‌ ವ್ಯವಸ್ಥೆ ಮಾಡಿದ್ದೇವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ತಿಳಿಸಿದರು.

ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, “ಪ್ರತಿಭಟನಾಕಾರರು ಜನ ಸಾಮಾನ್ಯರಿಗೆ ತೊಂದರೆ ಮಾಡಬಾರದು ಮತ್ತು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಬಾರದು ಎಂದು ಮನವಿ ಮಾಡುತ್ತೇನೆ. ಒಂದು ವೇಳೆ ಅಹಿತಕರ ಘಟನೆಗಳು ನಡೆದರೆ ಪೊಲೀಸರು ಕಾನೂನು ಕ್ರಮಕೈಗೊಳ್ಳುತ್ತಾರೆ” ಎಂದು ಎಚ್ಚರಿಸಿದರು.

“ಕೆಆರ್‌ಎಸ್‌, ಮಂಡ್ಯ ಜಿಲ್ಲೆ ಮತ್ತು ಪ್ರತಿಭಟನೆ ನಡೆಯುವ ಕಡೆಗಳಲ್ಲಿ ಬಂದೋಬಸ್ತ್‌ ವ್ಯವಸ್ಥೆ ಮಾಡಿದ್ದೇವೆ. ಕಾನೂನು ಬಾಹಿರ ಚಟುವಟಿಕೆಗಳು ನಡೆಯುವುದಿಲ್ಲ ಎಂಬ ನಂಬಿಕೆ ಇದೆ. ಒಂದು ವೇಳೆ ಶಾಂತಿಗೆ ಭಂಗ ತಂದರೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಕಾವೇರಿ | ಸರ್ಕಾರ ಉಡಾಫೆ ಮುಂದುವರೆಸಿದರೆ ಜನ ದಂಗೆ ಏಳುತ್ತಾರೆ : ಬೊಮ್ಮಾಯಿ ಎಚ್ಚರಿಕೆ

ಮಂಡ್ಯ ಬಂದ್‌ಗೆ ಬಿಜೆಪಿ ಬೆಂಬಲ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿ, “ಪ್ರತಿಭಟನೆ ಮಾಡಲು ನಮ್ಮ ತಕರಾರು ಇಲ್ಲ. ಆದರೆ ರಾಜಕೀಯ ಮಾಡಬಾರದು. ಬಿಜೆಪಿ ಜವಾಬ್ದಾರಿಯಿಂದ ವರ್ತಿಸುತ್ತದೆ ಎಂದು ಭಾವಿಸುತ್ತೇನೆ. ನೀರಿನ ವಿಚಾರದಲ್ಲಿ ರಾಜಕೀಯ ಮಾಡುವುದರಲ್ಲಿ ಅರ್ಥವಿಲ್ಲ” ಎಂದು ಹೇಳಿದರು.

“ಬಿಜೆಪಿಯವರು ಬೇರೆ ವಿಚಾರಗಳಲ್ಲಿ ರಾಜಕೀಯ ಮಾಡಲಿ ನಮ್ಮದೇನು ಅಭ್ಯಂತರವಿಲ್ಲ. ನೀರು ಬಿಡುವ ಮೊದಲು ಮತ್ತು ನಂತರ ಒಟ್ಟು ಎರಡು ಬಾರಿ ಸರ್ವ ಪಕ್ಷಗಳ ಸಭೆಯನ್ನು ಕರೆದಿದ್ದೆವು. ಸರ್ಕಾರ ಜತೆ ಇರುತ್ತೇವೆ ಎಂದು ವಿರೋಧಪಕ್ಷಗಳು ಭರವಸೆ ನೀಡಿವೆ. ಆ ಪ್ರಕಾರ ನಡೆದುಕೊಳ್ಳಬೇಕು” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತಗಟ್ಟೆಯ ಮತದಾನದ ಅಂಕಿಅಂಶ ನೀಡುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಲು ಸುಪ್ರೀಂ ನಕಾರ

ಪ್ರತಿ ಮತಗಟ್ಟೆಯ ಮತದಾನದ ಅಂಕಿಅಂಶಗಳನ್ನು ಒದಗಿಸುವ ಫಾರ್ಮ್‌ 17ಸಿ ಪ್ರತಿಗಳನ್ನು ತನ್ನ...

ವಿಜಯಪುರ | ರೈತರ ಸಮಸ್ಯೆಗಳ ಪರಿಹಾರಕ್ಕೆ ರೈತಸಂಘ ಆಗ್ರಹ

ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು...

ಮೇ ಸಾಹಿತ್ಯ ಮೇಳ | ಹುಚ್ಚಮ್ಮ ಚೌಧರಿ ಕುಣಿಕೇರಿಗೆ ‘ಲಕ್ಷ್ಮಿಬಾಯಿ ಕಟ್ಟಿಮನಿ ಸಮಾಜಮುಖಿ ಮಹಿಳೆ ಪ್ರಶಸ್ತಿ’

ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ರಾಜ್ಯದ ಸಾಹಿತ್ಯ-ಸಾಂಸ್ಕೃತಿಕ ಚಳುವಳಿಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ...

ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್ ರದ್ದುಗೊಳಿಸಲು ಪ್ರಕ್ರಿಯೆ ಆರಂಭ: ಸಚಿವ ಪರಮೇಶ್ವರ್‌

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವ ಕುರಿತು ನಾವು...