ಬೆಂಗಳೂರಿನ ಕಸವನ್ನು ತಂದು ರಾಮನಗರ ಜಿಲ್ಲೆಯಲ್ಲಿ ವಿಲೇವಾರಿ ಮಾಡಲು ಮುಂದಾದರೆ, ಕಸದ ಲಾರಿಗಳಿಗೆ ಬೆಂಕಿ ಹಚ್ಚಿ ಸುಟ್ಟು ಹಾಕುತ್ತೇವೆ ಎಂದು ಜೆಡಿಎಸ್ ಕಾರ್ಯಕರ್ತರು ಹಾಗೂ ಸ್ಥಳೀಯರು ಎಚ್ಚರಿಕೆ ನೀಡಿದರು.
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಬೆಂಗಳೂರಿನ ಕಸ ವಿಲೇವಾರಿ ವಿರೋಧಿಸಿ ಹಾಗೂ ರಾಮನಗರದ ಕಸವನ್ನು ತಾಲೂಕಿನ ಹರಿಸಂದ್ರದಲ್ಲಿ ವಿಲೇವಾರಿಗೆ ಜಾಗ ನಿಗದಿಪಡಿಸಿರುವುದನ್ನು ವಿರೋಧಿಸಿ, ಸೋಮವಾರ ಹರಿಸಂದ್ರ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
“ಅಭಿವೃದ್ಧಿ ಹೆಸರಿನಲ್ಲಿ ಬೆಂಗಳೂರಿನ ಕಸವನ್ನು ತಂದು ರಾಮನಗರದಲ್ಲಿ ಸುರಿದು ನಮ್ಮ ಬದುಕು ನಾಶ ಮಾಡಲು ಮುಂದಾಗಿದ್ದಾರೆ” ಎಂದು ಆರೋಪಿಸಿದ ಪ್ರತಿಭಟನಾಕಾರರು, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಂಸದ ಡಿ ಕೆ ಸುರೇಶ್, ಶಾಸಕ ಇಕ್ಬಾಲ್ ಹುಸೇನ್ ವಿರುದ್ಧ ಧಿಕ್ಕಾರ ಕೂಗಿದರು.
ಈ ಸುದ್ದಿ ಓದಿದ್ದೀರಾ? ಮೇಕೆದಾಟು ಯೋಜನೆ ಶೀಘ್ರದಲ್ಲೇ ಅನುಷ್ಠಾನಗೊಳಿಸಿ: ಮೋಹನ್ ದಾಸರಿ
“ಅಭಿವೃದ್ಧಿಗೆ ಕನಕಪುರ, ಕಸ ಸುರಿಯಲು ರಾಮನಗರ ಬೇಕೆ? ಡಿ ಕೆ ಶಿವಕುಮಾರ್ ಅವರು ರಾಮನಗರವನ್ನು ಕಸದ ತಿಪ್ಪೆ ಮಾಡುತ್ತಿದ್ದಾರೆ. ಜಿಲ್ಲೆಯ ಜನತೆ ಮೂರು ಶಾಸಕರನ್ನು ಗೆಲ್ಲಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಇವರು ಜಿಲ್ಲೆಗೆ ಮಾಡಿರುವ ಅಭಿವೃದ್ಧಿ ಕೆಲಸವೇನು?” ಎಂದು ಜೆಡಿಎಸ್ ಕಾರ್ಯಕರ್ತರು ಕಿಡಿಕಾರಿದರು.