ಭ್ರಷ್ಟಾಚಾರ ಸಾಬೀತು ಮಾಡಿದರೆ ನನ್ನ ಆಸ್ತಿಯನ್ನೇ ಅವರಿಗೆ ಕೊಡುತ್ತೇನೆ: ಸಚಿವರಿಗೆ ಸಂಸದ ಸಿದ್ದೇಶ್ವರ ಸವಾಲು

Date:

ನಮ್ಮ ಕುಟುಂಬದಲ್ಲಿ ಯಾರೂ ಭ್ರಷ್ಟಾಚಾರ ಮಾಡಿಲ್ಲ, ಲಂಚ ಪಡೆದಿಲ್ಲ. ನಾನೂ ಯಾರಿಂದಲೂ ಲಂಚ ತೆಗೆದುಕೊಂಡಿಲ್ಲ. ನಾನು ಭ್ರಷ್ಟಾಚಾರ ಮಾಡಿದ್ದೇನೆಂದು ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ ಸಾಬೀತು ಮಾಡಿದರೆ, ನನ್ನ ಇಡೀ ಆಸ್ತಿಯನ್ನು ಅವರಿಗೆ ಬರೆದು ಕೊಡುತ್ತೇನೆ ಎಂದು ದಾವಣಗೆರೆಯ ಬಿಜೆಪಿ ಸಂಸದ ಜಿ.ಎಂ ಸಿದ್ದೇಶ್ವರ ಹೇಳಿದ್ದಾರೆ.

- Advertisement -

ದಾವಣಗೆರೆಯಲ್ಲಿ ಮಾತನಾಡಿದ ಅವರು, “ನಮ್ಮ ಆಸ್ತಿ ಬಗ್ಗೆ ಸಚಿವ ಮಲ್ಲಿಕಾರ್ಜುನ ಮಾತನಾಡಿದ್ದಾರೆ. ನಾವೇನು ಕಳ್ಳತನ ಮಾಡಿ, ಭ್ರಷ್ಟಾಚಾರ ಮಾಡಿ ಆಸ್ತಿ ಸಂಪಾದಿಸಿಲ್ಲ. ನಮ್ಮ ಮನೆಯಲ್ಲಿ ಆರು ಮಂದಿ ದುಡಿಯುತ್ತೇವೆ. 1993ಕ್ಕೂ ಇಂದಿಗೂ ನಮ್ಮ ಆಸ್ತಿ ಹೆಚ್ಚಳವಾಗಿದೆ. ನಮ್ಮ ಅಪ್ಪನ ಕಾಲದಿಂದಲೂ ನಾವು ಶ್ರೀಮಂತರು. ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕೂ ನಾವು ಸಾಲ ಕೊಟ್ಟಿದ್ದೆವು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

“1997ರಲ್ಲಿಯೇ ನಮ್ಮ ಆದಾಯ 6 ಕೋಟಿ ರೂ. ಇದೆಯೆಂದು ಘೋಷಿಸಿದ್ದೆ. ಆ ವರ್ಷ 1.85 ಕೋಟಿ ರೂ. ತೆರಿಗೆ ಕಟ್ಟಿದ್ದೆ. ನಾನು ಅಕ್ರಮ ನಡೆಸಿದ್ದೇನೆ ಎನ್ನುವವರು ತನಿಖೆ ನಡೆಸಲು, ನನ್ನದೇನೂ ಅಭ್ಯಂತರವಿಲ್ಲ. ಬಿಜೆಪಿ ಸರ್ಕಾರದಲ್ಲಿ ಮಾತ್ರವಲ್ಲ, ಮಲ್ಲಿಕಾರ್ಜುನ ಅವರು ಸಚಿವರಾಗಿದ್ದ ಅವಧಿಯಿಂದ ಈಚೆಗೆ ನಡೆದಿರುವ ಕಾಮಗಾರಿಗಳ ಬಗ್ಗೆಯೂ ತನಿಖೆಯಾಗಲಿ. ನಾನು ಭ್ರಷ್ಟಾಚಾರ ಮಾಡಿದ್ದೇನೆಂದು ಸಾಬೀತು ಮಾಡಿದರೆ, ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...