ಜೆಡಿಎಸ್-ಬಿಜೆಪಿ ಹೊಂದಾಣಿಕೆ ಮಾಡಿಕೊಂಡರೆ, ನನ್ನ ನಿರ್ಧಾರ ತಿಳಿಸುವೆ: ನಾರಾಯಣಗೌಡ

Date:

ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರು ದಿನಕ್ಕೊಂದು ರೀತಿಯಲ್ಲಿ ಮಾತನಾಡುತ್ತಾರೆ. ಅವರ ಮಾತು ನಂಬಲು ಸಾಧ್ಯವಿಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಹೊಂದಾಣಿಕೆ ಮಾಡಿಕೊಂಡರೆ, ನನ್ನ ಮುಂದಿನ ನಿರ್ಧಾರ ಏನೆಂದು ನಂತರದಲ್ಲಿ ತಿಳಿಸುವ ಎಂದು ಮಾಜಿ ಸಚಿವ ನಾರಾಯಣಗೌಡ ತಿಳಿಸಿದ್ದಾರೆ.

- Advertisement -

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕುಮಾರಸ್ವಾಮಿ ಅವರು ಈ ಹಿಂದೆ ಕಾಂಗ್ರೆಸ್‌ ಪರವಾಗಿ ಮಾತನಾಡುತ್ತಿದ್ರು. ಈಗ ಬಿಜೆಪಿ ಪರ ಮಾತನಾಡುತ್ತಿದ್ದಾರೆ. ಅವರು ದಿನ್ಕೊಂದು ರೀತಿಯಲ್ಲಿ ಮಾತನಾಡುತ್ತಾರೆ. ಅವರನ್ನು ನಂಬಲು ಸಾಧ್ಯವಿಲ್ಲ. ಹೊಂದಾಣಿಕೆ ಬಗ್ಗೆ ಪಕ್ಷದ ವರಿಷ್ಠರು ಏನೂ ಹೇಳಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ಒಂದು ವೇಳೆ ಜೆಡಿಎಸ್‌ ಜೊತೆ ಬಿಜೆಪಿ ಹೊಂದಾಣಿಕೆ ಮಾಡಿಕೊಂಡರೆ, ನಾನು ಮುಂದೇನು ಮಾಡಬೇಕೆಂದು ನಿರ್ಧಾರ ಮಾಡಬೇಕಾಗುತ್ತದೆ. ಸಮಯ ಬಂದಾಗ ನಿರ್ಧಾರ ತಿಳಿಸುತ್ತೇನೆ” ಎಂದು ಹೇಳಿದ್ದಾರೆ.

ರಾಜ್ಯ ಬಜೆಟ್ ಅಧಿವೇಶನ ಆರಂಭವಾದಾಗಿನಿಂದ ಕುಮಾರಸ್ವಾಮಿ ಅವರು ಬಿಜೆಪಿ ನಾಯಕರೊಂದಿಗೆ ಹೆಚ್ಚು ಒಡನಾಟದಲ್ಲಿದ್ದಾರೆ. ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯಲು ಕಾಂಗ್ರೆಸ್‌ ಸರ್ಕಾರ ಮುಂದಾದಾಗ, ವಿಧಾನ ಪರಿಷತ್‌ನಲ್ಲಿ ಬಿಜೆಪಿಗೆ ಬೆಂಬಲ ನೀಡಿದ ಜೆಡಿಎಸ್‌, ಕಾಯ್ದೆಯನ್ನು ಹಿಂಪಡೆಯದಂತೆ ತಡೆದಿದೆ. ಅಲ್ಲದೆ, ಶುಕ್ರವಾರ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಅವರೊಂದಿಗೆ ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿದ್ದು, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ಅವರನ್ನೇ ಅಧಿಕೃತ ವಿಪಕ್ಷ ನಾಯಕರನ್ನಾಗಿ ಬಿಜೆಪಿ ನೇಮಿಸಬಹುದು ಎಂಬ ಮಾತುಗಳೂ ಕೇಳಿಬರುತ್ತಿವೆ. ಇದೆಲ್ಲವೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಸಾಧ್ಯತೆಯನ್ನು ಸೂಚಿಸುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...