ಸೌಜನ್ಯ ಪ್ರಕರಣ | ತಿಮರೋಡಿ ಅಪ್ಪನಿಗೆ ಹುಟ್ಟಿದ್ರೆ ಆಣೆ ಪ್ರಮಾಣಕ್ಕೆ ಬರಲಿ; ಧೀರಜ್ ಜೈನ್ ಸವಾಲು

Date:

ಸೌಜನ್ಯ ಪ್ರಕರಣದಲ್ಲಿ ಸಿಬಿಐ ಕೋರ್ಟ್ ತೀರ್ಪು ಕೊಟ್ಟಿದೆ. ಹೀಗಿದ್ದರೂ ಮಹೇಶ್ ಶೆಟ್ಟಿ ಮಾಧ್ಯಮಗಳ ಎದುರು ಬಂದು ನಮ್ಮ ವಿರುದ್ಧ ಆರೋಪ ಮಾಡ್ತಿದ್ದಾನೆ. ಹೀಗಾಗಿ ನಾವು ಮತ್ತೆ ಅವರನ್ನು ಆಣೆ ಪ್ರಮಾಣಕ್ಕೆ ಕರೀತಾ ಇದ್ದೇವೆ. ತಿಮರೋಡಿ ಅವನ ಅಪ್ಪನಿಗೆ ಹುಟ್ಟಿದ್ರೆ ಆಣೆ ಪ್ರಮಾಣಕ್ಕೆ ಬರಲಿ ಎಂದು ಧೀರಜ್ ಜೈನ್ ಸವಾಲು ಹಾಕಿದ್ದಾರೆ.

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಹೊತ್ತಿದ್ದ ಧರ್ಮಸ್ಥಳದ ಧೀರಜ್ ಜೈನ್, ಉದಯ್ ಜೈನ್ ಮತ್ತು ಮಲ್ಲಿಕ್ ಜೈನ್ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಹೇಳಿಕೆ ನೀಡಿದ್ದಾರೆ. ಈ ವೇಳೆ ಕಾಂಗ್ರೆಸ್ ನ ಮಾಜಿ ಸಚಿವ ಅಭಯ ಚಂದ್ರ ಜೈನ್ ಕೂಡಾ ಇದ್ದರು.

ಪ್ರಕರಣದ ಆರೋಪ ಹೊತ್ತಿದ್ದ ಧೀರಜ್ ಜೈನ್ ಮಾತನಾಡಿ, “ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಇತರರು ನಮ್ಮ ವಿರುದ್ದ ಆರೋಪ ಮಾಡಿದ್ದರು. ಹಣ ಮಾಡುವ ಏಕೈಕ ಉದ್ದೇಶದಿಂದ ತಿಮರೋಡಿ ಆರೋಪ ಮಾಡಿದ್ದಾರೆ. ನಾವು ತನಿಖೆಗೆ ಹಾಜರಾದರೂ ಸುಖಾಸುಮ್ಮನೆ ಆರೋಪ ಮಾಡಲಾಗಿತ್ತು. ಹೀಗಾಗಿ ನಾವು ಕಾನತ್ತೂರು ದೈವದ ಮೊರೆ ಹೋಗಿ ಆಣೆಗೆ ಕರೆದಿದ್ದೆವು, ಆದರೆ ಅದನ್ನು ತಪ್ಪಿಸಿದ್ದರು” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“2014ರಲ್ಲಿ ಜುಲೈ ಮತ್ತು ಅಗಸ್ಟ್ ನಲ್ಲಿ ಸಿಬಿಐ ನಮ್ಮನ್ನು ಎರಡೆರೆಡು ಬಾರಿ ಬೆಳ್ತಂಗಡಿ ಐಬಿಯಲ್ಲಿ ತನಿಖೆ ಮಾಡಿತ್ತು. ಚೆನ್ನೈ, ಬೆಂಗಳೂರಿಗೂ ಕರೆಸಿ ನಮ್ಮ ತನಿಖೆ ಮಾಡಿದ್ದಾರೆ. ನಮ್ಮ ರಕ್ತ ಪರೀಕ್ಷೆ, ಡಿಎನ್ ಎ ಪರೀಕ್ಷೆ, ಮಂಪರು ಪರೀಕ್ಷೆ (ಬ್ರೈನ್ ಮ್ಯಾಪಿಂಗ್) ಕೂಡ ಸಿಬಿಐ ಮಾಡಿದೆ” ಎಂದು ತಿಳಿಸಿದ್ದಾರೆ.

“ಮೊಬೈಲ್ ಲೊಕೇಶನ್ ಟ್ರೇಸ್, ಸುಳ್ಳು ಪತ್ತೆಯ ಪಾಲಿಗ್ರಾಫ್ ಟೆಸ್ಟ್ ಜೊತೆ ಅನೇಕ ವೈಜ್ಞಾನಿಕ ಪರೀಕ್ಷೆ ಮಾಡಲಾಗಿದೆ. 2015ರ ಫೆ. 23ರಂದು ನಮ್ಮ ಮನವಿ ಮೇರೆಗೆ ಸಿಬಿಐ ಬೆಂಗಳೂರಿನ ಕೋರ್ಟ್ ಗೆ ಬ್ರೈನ್ ಮ್ಯಾಪಿಂಗ್ ಗೆ ಅರ್ಜಿ ಹಾಕಿತ್ತು. ಕೋರ್ಟ್ ಅನೇಕ ಬಾರಿ ಇದರ ಅಡ್ಡ ಪರಿಣಾಮಗಳ ಬಗ್ಗೆ ಹೇಳಿತ್ತು. ಆದರೆ ನಮ್ಮ‌ ಮನವಿ ಮೇರೆಗೆ ಕೋರ್ಟ್ ಮಂಪರು ಪರೀಕ್ಷೆ ಮತ್ತು ಬ್ರೈನ್ ಮ್ಯಾಪಿಂಗ್ ಗೆ ಅನುಮತಿ ನೀಡಿತ್ತು. ಕೊನೆಗೆ ಎಲ್ಲ ತನಿಖೆ ಬಳಿಕ ಸಿಬಿಐ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿತ್ತು. ಆದರೆ ಆ ಆರೋಪ ಪಟ್ಟಿಯಲ್ಲಿ ಎಲ್ಲೂ ನಮ್ಮನ್ನ ಅಪರಾಧಿ ಮಾಡಿಲ್ಲ” ಎಂದಿದ್ದಾರೆ.

“ಆದರೆ, ಮತ್ತೆ ಸೌಜನ್ಯ ತಂದೆ ನಮ್ಮನ್ನು ಸಹ ಆರೋಪಿ ಮಾಡಲು ಅರ್ಜಿ ಹಾಕಿದ್ರು. ಆದರೆ ನಮ್ಮ ಅನುಪಸ್ಥಿತಿಯಲ್ಲಿ ಕೋರ್ಟ್ ನಮಗೆ ಸಮನ್ಸ್ ನೀಡಿತ್ತು. ನಾವು ಇದನ್ನು ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡಿದಾಗ ನ್ಯಾಯಾಲಯ ಸಿಬಿಐ ಆರೋಪ ಪಟ್ಟಿ ಉಲ್ಲೇಖಿಸಿತ್ತು. ನಮ್ಮ ವಿರುದ್ದ ಯಾವುದೇ ಸಾಕ್ಷ್ಯ, ಆರೋಪ ಇಲ್ಲದ ಕಾರಣ ಸಹ ಆರೋಪಿ ಮಾಡಲು ಸಾಧ್ಯವಿಲ್ಲ ಎಂದು ಕೋರ್ಟ್, ತಂದೆಯ ಮನವಿ ರದ್ದು ಮಾಡಿತ್ತು” ಎಂದು ವಿವರಿಸಿದ್ದಾರೆ.

“ಕಾನತ್ತೂರು ನಾಲ್ವರ್ ದೈವಗಳ ಎದುರು ಬಂದು ಆಣೆ ಮಾಡಲಿ. ಆರೋಪಿ ಸಂತೋಷ್ ನನ್ನ ನಾವು ಕಳ್ಳತನದ ಸಂಶಯದ ಮೇಲೆ ಪೊಲೀಸರಿಗೆ ಹಿಡಿದು ಕೊಟ್ಟೆವು. ಅವನು ಓಡಿದಾಗ ಕಳ್ಳ ಅಂತ ನಾವು ಹಿಡಿದು ಕೊಟ್ಟೆವು, ಆದರೆ ಸೌಜನ್ಯ ಕೇಸಲ್ಲಿ ಪೊಲೀಸರು ಅವನನ್ನ ಅರೆಸ್ಟ್ ಮಾಡಿದ್ದಾರೆ. ನಾವು ಅವನೇ ಸೌಜನ್ಯ ಆರೋಪಿ ಅಂತ ಹೇಳಿಲ್ಲ, ಅದು ನಮಗೆ ಸಂಬಂಧಿಸಿದ್ದಲ್ಲ” ಎಂದು ಧೀರಜ್ ಜೈನ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಾರದ ಮಳೆ – ಬತ್ತಿದ ಕೆರೆ: ಜಾನುವಾರುಗಳಿಗಾಗಿ ಕೆರೆಗೆ ನೀರು ಹರಿಸುತ್ತಿರುವ ರೈತ

‘ಹಣ ಮಾಡಲು ವೀರೇಂದ್ರ ಹೆಗ್ಗಡೆ ಬಗ್ಗೆ ಮಾತಾಡ್ತಿದ್ದಾನೆ’

ಮಾಜಿ ಸಚಿವ ಅಭಯ ಚಂದ್ರ ಜೈನ್ ಮಾತನಾಡಿ, “ಮಹೇಶ್‌ ತಿಮರೋಡಿ ಇದೀಗ ಮತ್ತೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ವಿರುದ್ದ ಮಾತನಾಡ್ತಿದಾನೆ. ಅವನು ಹಣ ಮಾಡುವ ಉದ್ದೇಶದಿಂದ ಇದನ್ನು ಮಾಡ್ತಿದಾನೆ. ಅವನು ಒಬ್ಬ ರೌಡಿಶೀಟರ್, ಬೆಳ್ತಂಗಡಿ ತಾಲೂಕಿನ ಕೆಟ್ಟ ವ್ಯಕ್ತಿ, ಅವನ ಈ ಹೇಳಿಕೆಗಳ ವಿರುದ್ಧ ನಾವು ಪ್ರತಿಭಟಿಸ್ತೇವೆ. ಅವನಿಗೆ ತಲೆ ಸರಿ ಇಲ್ಲ, ನಮ್ಮ ಹೆಗ್ಗಡೆಯವರ ಬಗ್ಗೆ ಮಾತನಾಡ್ತಾನೆ. ಅವನ ವಿರುದ್ದ ಕಾನೂನಾತ್ಮಕ ಹೋರಾಟ ನಾವು ಮಾಡ್ತೇವೆ. ಸಮಾಜದ ವ್ಯಕ್ತಿ ವಿರುದ್ದ ಅವನು ಅಪನಂಬಿಕೆ ಮೂಡಿಸ್ತಿದ್ದಾನೆ. ತಿಮರೋಡಿ ಎಷ್ಟೇ ದೊಡ್ಡ ರೌಡಿಯಾದ್ರೂ ನಾವು ನೋಡಿಕೊಳ್ತೇವೆ. ತಿಮರೋಡಿ ನೈಜ ಆರೋಪಿಗಳ ಪತ್ತೆಗೆ ಐಜಿ ಕಚೇರಿ ಎದುರು ಹೋರಾಟ ಮಾಡಲಿ. ಯಾರೋ ದೊಡ್ಡ ವ್ಯಕ್ತಿ ವಿರುದ್ದ ಮಾತನಾಡುವುದಲ್ಲ” ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.

“ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯ ಮಾವ ವಿಠಲ ಮತ್ತು‌ ಮಹೇಶ್ ಶೆಟ್ಟಿಯನ್ನು ತನಿಖೆ‌ ನಡೆಸಬೇಕು” ಎಂದು ಧೀರಜ್ ಜೈನ್, ಉದಯ್ ಜೈನ್ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...

ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ

ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ...

ಕೋಲಾರ | ಇವಿಎಂ ಮೆಷಿನ್ ಸಾಗಿಸುತ್ತಿದ್ದ ವಾಹನದ ಟೈರ್ ಬ್ಲಾಸ್ಟ್: ಪೊಲೀಸ್ ಬಂದೋಬಸ್ತ್

ಮುಳಬಾಗಿಲಿನಿಂದ ಕೋಲಾರದ ಸ್ಟ್ರಾಂಗ್‌ ರೂಮ್‌ಗೆ ಇವಿಎಂ ಮೆಷಿನ್‌ಗಳನ್ನು ಸಾಗಾಟ ಮಾಡುತ್ತಿದ್ದ ಕ್ಯಾಂಟರ್...