ಪಕ್ಷದ ವಿರುದ್ಧ ಬಹಿರಂಗ ಹೇಳಿಕೆ ಮುಂದುವರಿದರೆ ಸೂಕ್ತ ಕ್ರಮ: ಬಿ ಎಸ್‌ ಯಡಿಯೂರಪ್ಪ

Date:

  • ಬಿಜೆಪಿ ರಾಜ್ಯ ಕಚೇರಿಯಲ್ಲಿ ಪ್ರಮುಖ ನಾಯಕರ ಸಭೆ
  • ಮುರುಗೇಶ ನಿರಾಣಿ, ರೇಣುಕಾಚಾರ್ಯ ಸಭೆಗೆ ಗೈರು

ಬಿಜೆಪಿಯಲ್ಲಿ ನಾಯಕರ ಬಹಿರಂಗ ಹೇಳಿಕೆಗೆ ಸಂಬಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಕಚೇರಿಯಲ್ಲಿ ಶುಕ್ರವಾರ ಪ್ರಮುಖ ನಾಯಕರ ಸಭೆ ನಡೆಯಿತು.

- Advertisement -

ಆದರೆ, ಸಭೆಗೆ ಹಾಜರು ಇರಬೇಕಾದ ಕೆಲವು ನಾಯಕರು ಗೈರಾಗಿದ್ದರು. ಅದರಲ್ಲಿ ಮುರುಗೇಶ ನಿರಾಣಿ, ಈಶ್ವರ್ ಸಿಂಗ್ ಠಾಕೂರ್, ರಮೇಶ್ ಜಿಗಜಿಣಗಿ ಹಾಗೂ ರೇಣುಕಾಚಾರ್ಯ ಇಂದಿನ ಸಭೆಗೆ ಬಂದಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್‌ ಯಡಿಯೂರಪ್ಪ, ಬಸವರಾಜ ಬೊಮ್ಮಯಿ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ನಳಿನ್ ಕುಮಾರ್ ಕಟೀಲ್ ಜೊತೆ ವೇದಿಕೆ ಹಂಚಿಕೊಂಡು ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ‌ ಶಾಸಕ‌ರಾದ ಗೋವಿಂದ ಕಾರಜೋಳ, ಎ ಎಸ್ ಪಾಟೀಲ್ ‌ನಡಹಳ್ಳಿ, ವೀರಣ್ಣ ಚರಂತಿಮಠ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು.

ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿ ಎಸ್‌ ಯಡಿಯೂರಪ್ಪ, “ಪಕ್ಷಕ್ಕೆ ಮುಜುಗರ ಆಗುವ ಹೇಳಿಕೆಗಳನ್ನು ಯಾರೂ ಕೊಡಬಾರದು. ಯಾರು ಆ ರೀತಿ ಮಾತನಾಡಿದ್ದಾರೋ ಅವರ ಜೊತೆ ಚರ್ಚಿಸಿ ಮುಂದೆ ಇಂಥ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸುತ್ತೇವೆ. ಇದು ಮುಂದುವರಿದರೆ ಸೂಕ್ತ ಕ್ರಮವನ್ನು ಕೈಗೊಳ್ಳುವ ತೀರ್ಮಾನ ಮಾಡಿದ್ದೇವೆ” ಎಂದು ತಿಳಿಸಿದರು.

“ಬಿಜೆಪಿ ಚುನಾಯಿತ ಪ್ರತಿನಿಧಿಗಳು ಸದನದ ಒಳಗೂ ಹೋರಾಟ ಮಾಡಲಿದ್ದಾರೆ. ಕಾಂಗ್ರೆಸ್ ಪಕ್ಷವು ಮನೆಮನೆಗೆ ಹೋಗಿ ಸಿದ್ದರಾಮಯ್ಯ, ಶಿವಕುಮಾರ್ ಅವರು ಸಹಿ ಮಾಡಿ ಕೊಟ್ಟ ಗ್ಯಾರಂಟಿ ಕಾರ್ಡಿನ ಅಂಶಗಳನ್ನು ಚಾಚೂತಪ್ಪದೆ ಅನುಷ್ಠಾನಕ್ಕೆ ತರಲು ಅವರು ಆಗ್ರಹಿಸಿದರು. ಈ ಕುರಿತು ಪಕ್ಷದ ಮುಖಂಡರ ಸಭೆಯಲ್ಲಿ ಚರ್ಚಿಸಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜನತಂತ್ರವೆಂಬುದು ಭಾರತದ ವಂಶವಾಹಿಯಲ್ಲಿದೆಯೇ ಮೋದಿಯವರೇ, ಹೌದೇ?

ಗೈರಾದವರು ವಿವರಣೆ ಕೊಡ್ತೀವಿ ಅಂದಿದ್ದಾರೆ

ಇದೇ ವೇಳೆ ವಿಧಾನ ಪರಿಷತ್‌ ಸದಸ್ಯ ರವಿಕುಮಾರ್‌ ಮಾತನಾಡಿ, “ಸಭೆಯಲ್ಲಿ ಪಕ್ಷ ಬಲವರ್ಧನೆಗೆ ನಾವು ಇದ್ದೇವೆ. ಹೀಗಾಗಿ ಸಭೆ ಕರೆಯಿರಿ ಎಂದು ರಾಜ್ಯಾಧ್ಯಕ್ಷರು, ಮಾಜಿ ಸಿಎಂ ಯಡಿಯೂರಪ್ಪ ಸೂಚಿಸಿದ್ದರು. ಪ್ರಭು ಚವ್ಹಾಣ್, ಮುರುಗೇಶ ನಿರಾಣಿ, ಈಶ್ವರ್ ಸಿಂಗ್ ಠಾಕೂರ್, ರಮೇಶ್ ಜಿಗಜಿಣಗಿ, ರೇಣುಕಾಚಾರ್ಯ ಇಂದಿನ ಸಭೆ ಮುಂದೆ ಬಂದಿಲ್ಲ. ಈ ವಾರದಲ್ಲಿ ಬಂದು ವಿವರಣೆ ಕೊಡ್ತೀವಿ ಎಂದು ಹೇಳಿದ್ದಾರೆ” ಎಂದು ತಿಳಿಸಿದರು.

“ಚುನಾವಣೆಯಲ್ಲಿ ಬಿಜೆಪಿ ಯಾಕೆ ಸೋತಿದೆ ಎಂದು ಕೆಲವರು ಬಹಿರಂಗ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗಳಿಂದ ಪಕ್ಷಕ್ಕೆ ಮುಜುಗರ ಉಂಟಾಗಿದೆ, ಪಕ್ಷದ ವಿರುದ್ಧ ಹೇಳಿಕೆ ನೀಡಿರುವ ಆಡಿಯೋ ವಿಡಿಯೋ ಮುಂದಿಟ್ಟುಕೊಂಡು ಸಭೆ ಮಾಡಲಾಗಿದೆ. ಪಕ್ಷದ ವಿರುದ್ಧ ಹೇಳಿಕೆ ನೀಡಿದವರನ್ನು ಸಭೆಗೆ ಕರೆಯಲಾಗಿತ್ತು. 11 ಜನ ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಾರೆ. ಸಭೆಗೆ 11 ಜನರಿಗೂ ಕರೆದಿದ್ವಿ ಅದರಲ್ಲಿ 5 ಜನ ಸಭೆಗೆ ಬಂದಿಲ್ಲ” ಎಂದರು.

ಸೋಲಿನಿಂದ ವಿಚಿಲಿತರಾಗಿ ಮಾತನಾಡಿದ್ದಾರೆ

“ಪಕ್ಷದ ಸೋಲಿನ ಬಗ್ಗೆ ಬಹಿರಂಗ ಹೇಳಿಕೆ ನೀಡುತ್ತಿರುವ ಕೆಲವು ನಾಯಕರನ್ನು ಒಟ್ಟಿಗೆ ಕರೆದು ಮಾತನಾಡಲಾಗುತ್ತಿದೆ. ಕೆಲವು ನಾಯಕರು ಸೋಲಿನಿಂದ ವಿಚಲಿತರಾಗಿದ್ದಾರೆ. ಅದಕ್ಕೆ ಹೀಗೆ ಮಾತನಾಡುತ್ತಿದ್ದಾರೆ. ಏನೇ ಹೇಳಿಕೆ ಇದ್ದರೂ ಅವರೆಲ್ಲರೂ ಪಕ್ಷದ ವೇದಿಕೆಯಲ್ಲಿ ಹೇಳಬೇಕು ಹೊರತು ಹೀಗೆ ಮಾಧ್ಯಮಗಳ ಮುಂದೆ ಬಂದು ಹೇಳುವುದು ಸರಿಯಲ್ಲ. ಸಾವಿರಾರು ಜನ ಬಿಜೆಪಿ ಕಾರ್ಯಕರ್ತರ ಮನಸ್ಸಿಗೆ ನೋವಾಗಿದೆ. ಈ ಬಗ್ಗೆ ಪಕ್ಷ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ” ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...