ಬೆಂ. ಗ್ರಾಮಾಂತರ | ಆಹಾರ ಗುಣಮಟ್ಟದಲ್ಲಿ ಸಮಸ್ಯೆಯಿದ್ದರೆ ದೂರು ಸಲ್ಲಿಸಿ: ಜಿಲ್ಲಾಧಿಕಾರಿ

Date:

Advertisements

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಆಹಾರ ಉದ್ದಿಮೆಗಳಿಗೆ ಕಾಲ ಕಾಲಕ್ಕೆ ಭೇಟಿ ನೀಡಿ ಆಹಾರದ ಸುರಕ್ಷತೆ ಮತ್ತು ಗುಣಮಟ್ಟವನ್ನು ಪರಿಶೀಲಿಸಿ ಎಂದು ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಸೂಚಿಸಿದರು.

ದೇವನಹಳ್ಳಿಯಲ್ಲಿ ಜಿಲ್ಲಾಡಳಿತ ಭವನದಲ್ಲಿ ಬುಧವಾರ ನಡೆದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಸೇವನೆಯು ಬಹಳ ಪ್ರಮುಖ ಪಾತ್ರವಹಿಸುತ್ತದೆ. ಸಾರ್ವಜನಿಕರಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಅರಿವು ಮೂಡಿಸಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಇರುವ ಎಲ್ಲಾ ವಿದ್ಯಾರ್ಥಿನಿಲಯಗಳಿಗೆ, ಶಾಲೆಗಳಿಗೆ, ದೇವಸ್ಥಾನಗಳಿಗೆ ಭೇಟಿ ನೀಡಿ ಅಲ್ಲಿ ತಯಾರಿಸುವ ಆಹಾರದ ಬಗ್ಗೆ ಪರಿಶೀಲನೆ ಮಾಡಬೇಕು. ಜಿಲ್ಲೆಯಲ್ಲಿರುವ ಎಲ್ಲಾ ಆಹಾರ ಉದ್ದಿಮೆದಾರರು ಆಹಾರ ನೋಂದಣಿ ಅಥವ ಆಹಾರ ಪರವಾನಿಗೆ ಪಡೆಯುವುದು ಕಡ್ಡಾಯ , ಪರವಾನಗಿ ಪಡೆಯದೇ ನಡೆಸುವ ಆಹಾರ ಉದ್ದಿಮೆಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

Advertisements

ಆಹಾರ ಉದ್ದಿಮೆ ಸ್ಥಳಗಳಲ್ಲಿ ಸ್ವಚ್ಛತೆ ಬಗ್ಗೆ ಪರಿಶೀಲನೆ ಮಾಡಿ, ಸಾರ್ವಜನಿಕ ಸ್ಥಳಗಳಲ್ಲಿ ಸೇವಿಸುವ ಆಹಾರದ ಬಗ್ಗೆ ಗಮನ ಹರಿಸಿ, ನಿಯಮಿತವಾಗಿ ಸಂಶಯಾಸ್ಪದ ಆಹಾರ ಮಾದರಿಗಳನ್ನು ಸಂಗ್ರಹಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಆಹಾರ ಸೇವನೆಯಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರವಹಿಸಿ, ಸಾರ್ವಜನಿಕರಿಗೆ ಅರಿವು ಮೂಡಿಸಿ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಂಕಿತಾಧಿಕಾರಿ ಡಾ.ಧರ್ಮೇಂದ್ರ ಮಾತನಾಡಿ, ಜಿಲ್ಲೆಯಲ್ಲಿ 5548 ನೋಂದಣಿ ಹಾಗೂ 1505 ಪರವಾನಿಗೆ ಪಡೆದ ಆಹಾರ ಉದ್ದಿಮೆಗಳಿವೆ ಎಂದು ಸಭೆಗೆ ಮಾಹಿತಿ ನೀಡಿದರು.

ದೂರು ನೀಡಿ : ಜಿಲ್ಲೆಯ ವ್ಯಾಪ್ತಿಯಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಯಾವುದಾದರು ಸಮಸ್ಯೆಗಳು ಕಂಡುಬಂದಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಂಕಿತಾಧಿಕಾರಿ ಡಾ.ಧರ್ಮೇಂದ್ರ ಮೊಬೈಲ್ ಸಂಖ್ಯೆ 9901961771, ಹೋಸಕೋಟೆ ತಾಲ್ಲೂಕು ಆಹಾರ ಸುರಕ್ಷತೆ ಅಧಿಕಾರಿ ಗೋವಿಂದರಾಜು ಮೊಬೈಲ್ ಸಂಖ್ಯೆ 9845511663, ದೊಡ್ಡಬಳ್ಳಾಪುರ ತಾಲ್ಲೂಕು ಆಹಾರ ಸುರಕ್ಷತ ಅಧಿಕಾರಿ ನಾಗೇಶ್ ಮೊಬೈಲ್ ಸಂಖ್ಯೆ 9731837210, ದೇವನಹಳ್ಳಿ ತಾಲ್ಲೂಕು ಆಹಾರ ಸುರಕ್ಷತ ಅಧಿಕಾರಿ ಪ್ರವೀಣ್ ಮೊಬೈಲ್ ಸಂಖ್ಯೆ 8884393910, ನೆಲಮಂಗಲ ತಾಲ್ಲೂಕು ಆಹಾರ ಸುರಕ್ಷತ ಅಧಿಕಾರಿ ರವಿಕುಮಾರ್ ಮೊಬೈಲ್ ಸಂಖ್ಯೆ 9845580486 ಇವರನ್ನು ಸಂಪರ್ಕಿಸಿ ದೂರು ನೀಡಬಹುದಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್, ಆಹಾರ ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಪ್ರವೀಣ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನೀಲ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮುದ್ದಣ್ಣ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಆಹಾರ ಸುರಕ್ಷತ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X