ಕೇಂದ್ರದ ಯೋಜನೆ ರಾಜ್ಯದ ಜನರಿಗೆ ತಲುಪಿಸುವಲ್ಲಿ ರಾಜಕಾರಣ ಮಾಡಿದರೆ ರಾಜ್ಯಕ್ಕೆ ನಷ್ಟ: ಬೊಮ್ಮಾಯಿ

Date:

  • ‘ಕೇಂದ್ರ ಸರ್ಕಾರಕ್ಕೆ 9 ವರ್ಷ, ನರೇಂದ್ರ ಮೋದಿ ಆಡಳಿತ ಮುಂದುವರೆಯಲಿʼ
  • ‘ಐದು ಗ್ಯಾರಂಟಿಗಳ ಜಾರಿ ವಿಚಾರದಲ್ಲಿ ಜನರಿಗೆ ಕಾಂಗ್ರೆಸ್ ದೋಖಾ ಮಾಡಿದೆ’

ಕೇಂದ್ರದ ಯೋಜನೆಗಳನ್ನು ರಾಜ್ಯದ ಜನರಿಗೆ ತಲುಪಿಸುವಲ್ಲಿ ರಾಜಕಾರಣ ಮಾಡಿದರೆ ರಾಜ್ಯಕ್ಕೆ ನಷ್ಟವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಕೇಂದ್ರ ಸರ್ಕಾರ ಒಂಬತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.

“ನರೇಂದ್ರ‌ ಮೋದಿ ನೇತೃತ್ವದ ಸರ್ಕಾರ 9 ವರ್ಷ ಪೂರ್ಣಗೊಳಿಸಿದೆ. ಒಂಭತ್ತು ವರ್ಷದಲ್ಲಿ ಸಾಕಷ್ಟು ಬದಲಾಗಿದೆ. ಪ್ರತಿಯೊಬ್ಬ ನಾಗರಿಕನ ಬದುಕಿನಲ್ಲಿ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಉನ್ನತೀಕರಣ ಆಗಿದೆ” ಎಂದರು.

“ಯುಪಿಎ ಅವಧಿಯಲ್ಲಿ ಭಯೋತ್ಪಾದಕ ಚಟುವಟಿಕೆ ಹೆಚ್ಚಾಗಿತ್ತು. ರಾಷ್ಟ್ರದ ಸುರಕ್ಷತೆ ಮತ್ತು ಏಕತೆ ಅಖಂಡತೆಯನ್ನು ಕಾಪಾಡುವ ಕೆಲಸ ಮಾಡಿದರು. ಆರ್ಟಿಕಲ್ 370 ರದ್ದು ಮಾಡುವ ಮೂಲಕ ದೇಶದ ಏಕತೆ ಕಾಪಾಡಿದರು. ಪ್ರಧಾನಿಯಾದ ಮೇಲೆ ಮೋದಿಯವರು ಎಲ್ಲ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿ.ಎಸ್.ಟಿ ಜಾರಿಗೆ ತಂದರು. ಇದರಿಂದ ದೇಶ ಹಾಗೂ ರಾಜ್ಯಗಳ ಆರ್ಥಿಕ ಪ್ರಗತಿ ಹೆಚ್ಚಾಯಿತು. ಮೊದಲ ಐದು ರಾಜ್ಯಗಳಿಗೆ 14% ಗ್ಯಾರಂಟಿ ಫಂಡ್ ಬರುವಂತೆ ಮಾಡಿದರು” ಎಂದರು.

“ಪ್ರಧಾನಮಂತ್ರಿ ನರೇಂದ್ರ ಮೋದಿ ನೀತಿ ಆಯೋಗ ಜಾರಿಗೆ ತಂದು, ರಾಜ್ಯಗಳಿಗೆ 40 ರಷ್ಟು ಫಂಡ್ ಡೆವ್ಯಲೂಸನ್ ಮಾಡಿದರು. ಶಿಕ್ಷಣ ಪದ್ದತಿಯಲ್ಲಿ ಆಮೂಲಾಗ್ರ ಬದಲಾವಣೆ ತರಲು ಎನ್ ಇಪಿ ಜಾರಿಗೆ ತಂದಿದ್ದಾರೆ. ಕರ್ನಾಟಕ ಎನ್ ಇಪಿ ಜಾರಿಗೆ ತಂದಿರುವ ಮೊದಲ ರಾಜ್ಯವಾಗಿದೆ. ಮೂಲ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ನೂತನ ಸಚಿವರಿಗೆ ಕೊಠಡಿ ಹಂಚಿಕೆ: ಇಲ್ಲಿದೆ ಪೂರ್ಣ ಮಾಹಿತಿ

“ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ಸುಮಾರು 54 ಲಕ್ಷ ರೈತರಿಗೆ ಸುಮಾರು 16,000 ಕೋಟಿ ರೂ. ನೇರವಾಗಿ ರೈತರಿಗೆ ತಲುಪಿದೆ. ಮುದ್ರಾ ಯೋಜನೆ ಅಡಿಯಲ್ಲಿ 60 ಲಕ್ಷ ಉದ್ಯಮಿಗಳಿಗೆ ಅನುಕೂಲವಾಗಿದೆ‌. ರೈತರಿಗೆ ಅತ್ಯಂತ ಪ್ರಮುಖವಾಗಿ ಎಮ್ ಎಸ್ ಪಿ ನೀಡುವ ಮೂಲಕ ರೈತರ ನೆರವಿಗೆ ನಿಂತಿದ್ದಾರೆ” ಎಂದು ಹೇಳಿದರು.

ಗ್ಯಾರಂಟಿ ಅನುಷ್ಠಾನದಲ್ಲಿ ಜನತೆಗೆ ದೋಖಾ

ಚುನಾವಣೆ ಸಂದರ್ಭದಲ್ಲಿ ಜನತೆಗೆ ನೀಡಿದ್ದ ಐದು ಗ್ಯಾರಂಟಿಗಳ ಜಾರಿ ವಿಚಾರದಲ್ಲಿ ಜನರಿಗೆ ಕಾಂಗ್ರೆಸ್ ದೋಖಾ ಮಾಡಿದೆ. ಕಾಂಗ್ರೆಸ್ ನವರು ಚುನಾವಣೆ ಸಂದರ್ಭದಲ್ಲಿ ಎಲ್ಲರಿಗೂ ಉಚಿತ, ನಮಗೂ ಫ್ರೀ ನಿಮಗೂ ಫ್ರೀ ಅಂತ ಜನರಿಗೆ ಭರವಸೆ ನೀಡಿ, ಈಗ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿರುವುದು ನೋಡಿದರೆ ಜನರಿಗೆ ಕಾಂಗ್ರೆಸ್ ದೋಖಾ ಮಾಡಿದೆ” ಎಂದು ಹರಿಹಾಯ್ದರು.

“ತಾತ್ವಿಕ ಆದೇಶದಲ್ಲಿಯೂ ಎಲ್ಲರಿಗೂ ಉಚಿತ ಎಂದು ಹೇಳಿದ್ದರು. ಈಗ ಬೇರೆ ಬೇರೆ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ನವರು ಹೇಳುವುದೊಂದು ಮಾಡುವುದೊಂದು. ಅವರ ಬಣ್ಣ ಬಯಲಾಗುತ್ತದೆ” ಎಂದು ಇದೇ ವೇಳೆ ವಾಗ್ದಾಳಿ ನಡೆಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಚಿಕ್ಕನರಗುಂದದಲ್ಲಿ ಕಾಲುಬಾಯಿ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ನರಗುಂದ ತಾಲ್ಲೂಕಿನ ಚಿಕ್ಕನರಗುಂದ ಗ್ರಾಮದಲ್ಲಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಯೋಜನೆಯ...

ದಕ್ಷಿಣ ಕನ್ನಡ | ಶಿಳ್ಳೇಕ್ಯಾತ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಹುನ್ನಾರ; ಸಂತ್ರಸ್ತರ ಭೀತಿ

ದೋಣಿಗಳ ಮೂಲಕ ಮೀನು ಹಿಡಿದು ಬದುಕು ಸಾಗಿಸುತ್ತಿರುವ ಕಟುಂಬಗಳನ್ನು ಒಕ್ಕಲೆಬ್ಬಿಸುವ ಹುನ್ನಾರ...

ನಮ್ಮ ಬಳಿ ನೀರಿಲ್ಲ, ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಡಿ ಕೆ ಶಿವಕುಮಾರ್

5 ಸಾವಿರ ಕ್ಯೂಸೆಕ್ ನೀರು ಬಿಡಲೂ ಆಗದ ಸ್ಥಿತಿಯಲ್ಲಿ ನಾವಿದ್ದೇವೆ ಬಿಳಿಗುಂಡ್ಲು ಜಲಾಶಯದಲ್ಲಿ...

ಚುನಾವಣೆ | ರಾಜಸ್ಥಾನದಲ್ಲಿ ರಾಜೇ ಕಡೆಗಣನೆ; ಬಿಜೆಪಿಗೆ ಸಿಎಂ ಮುಖ ಯಾರು?

ರಾಜಸ್ಥಾನದಲ್ಲಿ ಈ ವರ್ಷದ ಕಡೆಯ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಒಂದು ವೇಳೆ,...