ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಆರ್ಥಿಕತೆ ಬೆಳವಣಿಗೆ: ಸಿಎಂ ಸಿದ್ದರಾಮಯ್ಯ

Date:

  • ʼಇವ ನಮ್ಮವʼ ಎನ್ನುವ ಆಶಯ ಸಮಾಜದಲ್ಲಿ ಈಡೇರಿಲ್ಲ
  • ಅಂಬಾನಿ-ಅದಾನಿ ಜೇಬಿನಲ್ಲಿ ಹಣ ಇದ್ದರೆ ದೇಶಕ್ಕೆ ಲಾಭವಿಲ್ಲ

ಬರೀ ಅಂಬಾನಿ-ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರಿಗೆ, ಮಧ್ಯಮವರ್ಗದವರ ಉದ್ಧಾರ ಸಾಧ್ಯವಿಲ್ಲ. ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ ಆರ್ಥಿಕತೆ ಬೆಳವಣಿಗೆ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ದಿ.ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಿದ್ದಲಿಂಗಯ್ಯ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

“ದುಡಿಯುವವರ, ಶ್ರಮಿಕರ ಜೇಬಿನಲ್ಲಿ ಹಣ ಇದ್ದರೆ ಅವರು ದೇಶದ ಆರ್ಥಿಕತೆಯ ಬೆಳವಣಿಗೆಗೆ ಕಾರಣರಾಗುತ್ತಾರೆ. ಕೇವಲ ಅಂಬಾನಿ ಅದಾನಿ ಜೇಬು ತುಂಬಿಸುವವರ ಕೈಗೆ ಅಧಿಕಾರ ಕೊಟ್ಟು ಇಡಿ ದೇಶ ಪರಿತಪಿಸುವಂತಾಗಿದೆ. ಈ ಕಾರಣಕ್ಕೆ ನಮ್ಮ ಸರ್ಕಾರ ತಿಮ್ಮ-ಬೋರ-ಕಾಳನ ಶ್ರಮಿಕ ವರ್ಗದ ಜೇಬಿಗೆ ಹಣ ಹಾಕುವ ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ ಕಾರ್ಯಕ್ರಮಗಳನ್ನು ಜಾರಿ ಮಾಡಿ ಜನರ ಜೇಬಿಗೆ ಹಣ ಹಾಕುವ ಕೆಲಸಕ್ಕೆ ಮುಂದಾಗಿದ್ದೇವೆ. ಇದರಿಂದ ನಮ್ಮ ಆರ್ಥಿಕತೆ ಚೈತನ್ಯ ಪಡೆದುಕೊಳ್ಳುತ್ತಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸಂವಿಧಾನದ ವಿರೋಧಿಗಳ ಕೈಗೆ ಅಧಿಕಾರ ಕೊಟ್ಟು ಸಮಾನತೆ ಬರಬೇಕು ಎಂದರೆ ಹೇಗೆ ಸಾಧ್ಯ? ಅಂಬಾನಿ-ಅದಾನಿಯವರ ಜೇಬು ತುಂಬಿಸುವವರ ಕೈಗೆ ಕೇಂದ್ರದಲ್ಲಿ ಅಧಿಕಾರ ಕೊಟ್ಟು ಬಡವರ, ಮಧ್ಯಮ ವರ್ಗದವರ ಉದ್ಧಾರ ಆಗಬೇಕು ಎಂದರೆ ಹೇಗೆ ಸಾಧ್ಯ” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾವೇರಿ ವಿವಾದ, ಬರಗಾಲದಲ್ಲಾದರೂ ರಾಜ್ಯದ ಜನರ ಹಿತ ಕಾಯುವರೇ ಬಿಜೆಪಿ ಸಂಸದರು?

“ಸಿದ್ದಲಿಂಗಯ್ಯ ಅವರ ಆಶಯಗಳನ್ನು ಬದುಕಿನಲ್ಲಿ ಇಟ್ಟುಕೊಂಡವರಿಗೆ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಈ ಬೆದರಿಕೆ ಪತ್ರ ಬರೆಯುವವರನ್ನು ಬೆಂಬಲಿಸುವವರ ಕೈಗೆ ಅಧಿಕಾರ ಕೊಟ್ಟು ಯಾರಿಗೆ ಬಂತು, ಎಲ್ಲಿಗೆ ಬಂತು 47ರ ಸ್ವಾತಂತ್ರ್ಯ ಎಂದು ಪ್ರಶ್ನಿಸಿದರೆ ಹೇಗೆ?” ಎಂದರು.

“ಸಿದ್ದಲಿಂಗಯ್ಯನವರ ಕವನಗಳು ಸಮಾಜದ ವಸ್ತು ಸ್ಥಿತಿಗೆ ಕನ್ನಡಿ ಹಿಡಿದಿವೆ. ಅಸಮಾನತೆ, ತಾರತಮ್ಯದ ವಿರುದ್ಧ ಸಮಾಜವನ್ನು ಎಚ್ಚರಿಸುವ ಧ್ವನಿ ಸಿದ್ದಲಿಂಗಯ್ಯ ಅವರ ಕವನಗಳಲ್ಲಿವೆ. ದೇಶಕ್ಕೆ ಬಂದಿರುವ ರಾಜಕೀಯ ಸ್ವಾತಂತ್ರ್ಯ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ಜಾರಿ ಆಗದಿದ್ದರೆ ಸ್ವಾತಂತ್ರ್ಯಕ್ಕೆ ಅರ್ಥ ಇಲ್ಲ ಎಂದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದರು” ಎಂದು ಹೇಳಿದರು.

ಮಾಜಿ ಸಚಿವ ಹೆಚ್.ಆಂಜನೇಯ ಅಧ್ಯಕ್ಷತೆ ವಹಿಸಿದ್ದರು. ಸಚಿವ ಹೆಚ್.ಸಿ.ಮಹದೇವಪ್ಪ, ಹಿರಿಯ ಸಾಹಿತಿಗಳಾದ ಕೆ.ಮರುಳಸಿದ್ದಪ್ಪ, ಎಸ್.ಜಿ.ಸಿದ್ದರಾಮಯ್ಯ, ಅಗ್ರಹಾರ ಕೃಷ್ಣಮೂರ್ತಿ ಹಾಗೂ ಪ್ರಜಾವಾಣಿ ಪತ್ರಿಕೆ ಸಂಪಾದಕರಾದ ರವೀಂದ್ರ ಭಟ್, ಶಿಕ್ಷಣ ತಜ್ಞ ನಿರಂಜನಾರಾಧ್ಯ, ಇಂದಿರಾ ಕೃಷ್ಣಪ್ಪ, ಪ್ರೊ.ಜಾಫೆಟ್, ಡಾ.ಮಾನಸ ಸಿದ್ದಲಿಂಗಯ್ಯ ಸೇರಿ ಹಲವರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್ ಪಕ್ಷ ಬೆಂಬಲಿಸಲು ಪಿಟಿಸಿಎಲ್ ಹೋರಾಟ ಸಮಿತಿ ನಿರ್ಧಾರ

ಬೆಂಗಳೂರು: ದಲಿತರು, ಸಂವಿಧಾನ ವಿರೋಧಿ, ಸಾಂವಿಧಾನಿಕ ಸಂಸ್ಥೆಗಳ ಮೇಲೆ ಪ್ರಭಾವ ಬೀರಿ...

‌ಶಿವಮೊಗ್ಗ | ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನಪರ ಯೋಜನೆ ಜಾರಿ: ಗೀತಾ ಶಿವರಾಜ್‌ಕುಮಾರ್

ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನಿಗೆ ವಾರ್ಷಿಕ...

ಹಾಸನ ಪೆನ್‌ಡ್ರೈವ್‌ | ಬ್ಲಾಕ್‌ಮೇಲ್‌ಗಾಗಿ ವಿಡಿಯೋ ಮಾಡಿಕೊಂಡಿದ್ರಾ?; ನ್ಯಾಯಾಂಗ ತನಿಖೆಗೆ ಆಗ್ರಹ

ಹಾಸನ ಪೆನ್‌ಡ್ರೈವ್ ವಿಚಾರದಲ್ಲಿ ಸುಮೊಟೊ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಂಗ ತನಿಖೆ ನಡೆಸಬೇಕು....

ಶಿವಮೊಗ್ಗ | ಮುಂದಿನ ದಿನದಲ್ಲಿ ಕ್ಷೇತ್ರದ ರಕ್ಷಣೆ ನನ್ನದು: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ರಾಜಕಾರಣಿಗಳ ಬಳಿ ಅಧಿಕಾರವಿದ್ದು, ಪರಿಹರಿಸಬಹುದಾದ ಸಮಸ್ಯೆಗಳು ಸಾಕಷ್ಟಿವೆ. ಆದರೂ,...