ಕಲಬುರಗಿ | ಅಕ್ರಮ ಆರೋಪ: ಜಿಲ್ಲಾ ಕಾರ್ಮಿಕ ಅಧಿಕಾರಿ ಸೇರಿ ಇಬ್ಬರು ಅಮಾನತು

Date:

Advertisements

ಕಾರ್ಮಿಕ ಇಲಾಖೆಯಲ್ಲಿ ಅಕ್ರಮ ಎಸಗಿರುವ ಆರೋಪದಲ್ಲಿ ಕಲಬುರಗಿ ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಸೇರಿ ಇಬ್ಬರನ್ನು ಅಮಾನತು ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ತಿಳಿಸಿದ್ದಾರೆ.

ಕಲಬುರಗಿ ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಕಲಬುರಗಿ ಕಾರ್ಮಿಕ ಇಲಾಖೆಯ ಜಿಲ್ಲಾ ಕಾರ್ಮಿಕ ಅಧಿಕಾರಿಗಿದ್ದ ರಮೇಶ್ ಸುಂಬಡ ಮತ್ತು ಚಿತ್ತಾಪುರ ತಾಲ್ಲೂಕಿನ ಡಿಓ ಶರಣು ಬೆಲ್ಲಾದ್ ಎಂಬ ಇಬ್ಬರು ಕಾರ್ಮಿಕ ಅಧಿಕಾರಿಗಳ ವಿರುದ್ಧ ಇಲಾಖೆಯ ವಿವಿಧ ಯೋಜನೆಗಳಲ್ಲಿ ಆಕ್ರಮ ನಡೆಸಿರುವ ಆರೋಪವಿದೆ. ಈ ಬಗ್ಗೆ ಆಂತರಿಕ ಅಧಿಕಾರಿಗಳ ಪ್ರಾಥಮಿಕ ತನಿಖೆಯಿಂದ ದೃಢಪಟ್ಟಿರುವುದರಿಂದ ಅಧಿಕಾರಿಗಳಿಗೆ ಅಮಾನತು ಮಾಡಲಾಗಿದೆ” ಎಂದು ಹೇಳಿದರು.

“ಕಾರ್ಮಿಕ ಇಲಾಖೆಯಲ್ಲಿ ಸ್ವಚ್ಛ ಆಡಳಿತ ಅಗತ್ಯವಿದ್ದು, 45 ಲಕ್ಷ ಬೋಕಸ್ ಕಾರ್ಮಿಕ ಕಾರ್ಡ್ ಪತ್ತೆ ಹಚ್ಚಲಾಗಿದೆ. ಇಷ್ಟೊಂದು ಕಾರ್ಡ್ ರದ್ದು ಮಾಡಲು ಕಾಲಾವಕಾಶ ಬೇಕು. ಇದಕ್ಕೆ ಎಲ್ಲಾ ಟ್ರೇಡ್ ಯೂನಿಯನ್ ಗಳು ಇಲಾಖೆಗೆ ಸಹಕಾರ ನೀಡಬೇಕೆಂದು” ಎಂದು ಮನವಿ ಮಾಡಿದರು.

Advertisements

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ನದಿಗೆ ಉರುಳಿದ ಲಾರಿ; ಚಾಲಕ ಸಾವು

“ಕೋವಿಡ್ -19 ನಿರ್ವಹಣೆ, ಟೂಲ್ ಕಿಟ್ ವಿತರಣೆ, ಇಲಾಖೆಯಿಂದ ನೀಡಲಾಗುವ ವಿದ್ಯಾರ್ಥಿ ವೇತನಕ್ಕೆ ಅನುಮೋದನೆ ಸೇರಿ ಮದುವೆ ಮತ್ತು ಮರಣದ ಹಣ ಮಂಜೂರಾತಿ ಸೇರಿದಂತೆ ಕಾರ್ಮಿಕ ಕಾರ್ಡ್ ವಿತರಣೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಕಲಬುರಗಿ ಜಿಲ್ಲಾ ಕಾರ್ಮಿಕ ಇಲಾಖೆಯ ವಿರುದ್ಧ ಕಾರ್ಮಿಕರ ಸಂಘಟನೆಗಳು ಹಲವು ಬಾರಿ ಹೋರಾಟ ನಡೆಸಿ ತನಿಖೆಗೆ ಒತ್ತಾಯಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X