‘ಬೆಂಗಳೂರು ಕಂಬಳ’ ಆಯೋಜಕರಿಗೆ 50 ಸಾವಿರ ದಂಡ ವಿಧಿಸಿದ ಬಿಬಿಎಂಪಿ!

Date:

ಇತಿಹಾಸದಲ್ಲೇ ಮೊದಲ ಬಾರಿಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೊದಲ ಬಾರಿ ಕಂಬಳ ಆಯೋಜನೆ ಮಾಡಿದ್ದು, ಈ ನಡುವೆ ಬೃಹತ್ ಬೆಂಗಳೂರು ಮಹಾಮನಗರ ಪಾಲಿಕೆ ಆಯೋಜಕರಿಗೆ ಶಾಕ್ ನೀಡಿದೆ.

- Advertisement -

ಇತಿಹಾಸ ಪ್ರಸಿದ್ಧ ಕರಾವಳಿ ಕಂಬಳ ಉತ್ಸವಕ್ಕೆ ಶುಭ ಕೋರಿ ಅರಮನೆ ಮೈದಾನದ ಮುಂದೆ ಹಾಗೂ ಬಳ್ಳಾರಿ ರಸ್ತೆಯ ಪಕ್ಕದಲ್ಲಿ ಅನಧಿಕೃತ ಫ್ಲೆಕ್ಸ್ ಹಾಕಲಾಗಿತ್ತು. ಈ ಸಂಬಂಧ ಬಿಬಿಎಂಪಿಯು ಸದಾಶಿವನಗರ ಠಾಣೆಗೆ ದೂರು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಈ ಹಿನ್ನೆಲೆಯಲ್ಲಿ ಸದ್ಯ ಅರಮನೆ ಮೈದಾನದ ಸುತ್ತಮುತ್ತ ಹಾಕಿರುವ ಬ್ಯಾನರ್ ತೆರವುಗೊಳಿಸಲಾಗಿದೆ. ಅಲ್ಲದೆ ಬಿಬಿಎಂಪಿಯು ಆಯೋಜಕರಿಗೆ 50 ಸಾವಿರ ದಂಡ ವಿಧಿಸಿರುವುದಾಗಿ ವರದಿಯಾಗಿದೆ.

ಇದನ್ನು ಓದಿದ್ದೀರಾ? ಪೊಲೀಸ್ ಠಾಣೆಗಳು ರಿಯಲ್ ಎಸ್ಟೇಟ್ ‘ಸೆಟಲ್‌ಮೆಂಟ್’ ಕೇಂದ್ರಗಳಾಗಿವೆ: ಹೈಕೋರ್ಟ್ ಅಸಮಾಧಾನ

ಬೆಂಗಳೂರು ನಗರದಲ್ಲಿ ಅನಧಿಕೃತವಾಗಿ ಹಾಕಲಾಗುತ್ತಿರುವ ಫ್ಲೆಕ್ಸ್, ಬ್ಯಾನರ್, ಬಂಟಿಂಗ್​​ಗಳ ತಡೆಗೆ ಈ ಹಿಂದೆ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿತ್ತು. ಅನಧಿಕೃತ ಜಾಹೀರಾತು ಹಾವಳಿ ತಡೆಯಲು ಪಂಚವಾರ್ಷಿಕ ಯೋಜನೆ ಬೇಕೆ? ಫ್ಲೆಕ್ಸ್ ತೆರವಿಗೆ ಶುಭ ಮುಹೂರ್ತಕ್ಕಾಗಿ ಕಾಯುತ್ತಿದ್ದೀರಾ? ಎಂದು ಖಡಕ್ಕಾಗಿ ಪ್ರಶ್ನಿಸಿದ ನಂತರ ಬಿಬಿಎಂಪಿ ಎಚ್ಚರಗೊಂಡಿದೆ.

ಹೈಕೋರ್ಟ್‌ನ ಎಚ್ಚರಿಕೆಯ ಬಳಿಕ ಬೆಂಗಳೂರಿನಲ್ಲಿ ಯಾವುದೇ ಫ್ಲೆಕ್ಸ್, ಬ್ಯಾನರ್ ಹಾಕದಂತೆ ಬಿಬಿಎಂಪಿ ಎಚ್ಚರ ವಹಿಸುತ್ತಿದೆ. ಒಂದು ವೇಳೆ ಅನಧಿಕೃತ ಫ್ಲೆಕ್ಸ್ ಹಾಕಿದವರಿಗೆ 50 ಸಾವಿರ ದಂಡ ವಿಧಿಸುತ್ತಿದೆ. ಈ ಹಿಂದೆ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್‌ ಕಚೇರಿ ಬಳಿ ಕೆಪಿಸಿಸಿ ಹಾಕಿದ್ದ ಫ್ಲೆಕ್ಸ್‌ಗಳಿಗೂ ಬಿಬಿಎಂಪಿ 50 ಸಾವಿರ ದಂಡ ವಿಧಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಸಹಾಯಧನ ಪಾವತಿಸಲು ಕ್ರಮ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಸರ್ಕಾರದಿಂದ ನೀಡಲಾಗುವ ಸಹಾಯಧನದ ಹಣವನ್ನು ಪಾವತಿಸುವ ಕುರಿತು...

ಬೆಂಗಳೂರು ವಾಹನ ಸವಾರರ ಗಮನಕ್ಕೆ: ನಿಯಮ ಪಾಲಿಸದಿದ್ದರೆ ಡ್ರೈವಿಂಗ್‌ ಲೈಸೆನ್ಸ್‌ ರದ್ದು!

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಟ್ರಾಫಿಕ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಪೊಲೀಸ್...