ಎಮ್ಮೆದೊಡ್ಡಿ ಅರಣ್ಯ ಭೂಮಿ ಖಾಸಗಿಯವರಿಗೆ ಅಕ್ರಮ ಮಾರಾಟ, ತಹಶೀಲ್ದಾರ್ ಬಂಧನ

Date:

  • ತಹಶೀಲ್ದಾರ್ ಜೆ ಉಮೇಶ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ
  • ಕಾನೂನುಬಾಹಿರವಾಗಿ 18 ಜನರಿಗೆ ಭೂಮಿ ಮಂಜೂರು

ಚಿಕ್ಕಮಗಳೂರು ಜಿಲ್ಲೆ, ಕಡೂರು ತಾಲೂಕಿನ ಬೀರೂರು ಹೋಬಳಿಯ ಎಮ್ಮೆದೊಡ್ಡಿ ಕಾವಲು ಗ್ರಾಮದ ಸರ್ವೇ ನಂ.70, 71 ಹಾಗೂ ಇತರೆ ಸರ್ವೇ ನಂಬರ್ ಗೆ ಸೇರಿದ ಅರಣ್ಯ ಭೂಮಿಯನ್ನು ಖಾಸಗಿಯವರಿಗೆ ಅಕ್ರಮವಾಗಿ ಮಾರಾಟ ಮಾಡಿದ್ದ ತಹಶೀಲ್ದಾರ್ ಜೆ ಉಮೇಶ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ಈ ಕುರಿತು ಶುಕ್ರವಾರ ಪತ್ರಿಕಾ ಪ್ರಕಟಣೆ ಹೊರಡಿಸಿ ಮಾಹಿತಿ ಹಂಚಿಕೊಂಡಿರುವ ಅವರು, “ಭ್ರಷ್ಟ ಅಧಿಕಾರಿಯನ್ನು ಬಂಧಿಸಲಾಗಿದೆ. ಅಲ್ಲದೆ ಅಕ್ರಮದಲ್ಲಿ ಪಾಲ್ಗೊಂಡ ಇತರೆ ಅಧಿಕಾರಿಗಳ ವಿರುದ್ಧವೂ ಕಠಿಣ ಕ್ರಮಕ್ಕೆ ಸೂಚಿಸಲಾಗಿದೆ” ಎಂದಿದ್ದಾರೆ.

ಪ್ರಸ್ತುತ ಕಾರವಾರದ ಸೀ ಬರ್ಡ್ ನೌಕಾನೆಲೆಯಲ್ಲಿ ಭೂ ಸ್ವಾಧೀನಾಧಿಕಾರಿಯಾಗಿರುವ, ಕಡೂರಿನಲ್ಲಿ ಈ ಹಿಂದೆ ತಹಶೀಲ್ದಾರ್ ಆಗಿದ್ದ ಜೆ.ಉಮೇಶ್ ಎಂಬ ಅಧಿಕಾರಿ ಬೀರೂರು ಹೋಬಳಿಯ ಎಮ್ಮೆದೊಡ್ಡಿ ಗ್ರಾಮದ ಸ.ನಂ.77ರ ಪ್ರದೇಶವು ಸೆಕ್ಷನ್ 4ರಡಿ ಪ್ರಾಥಮಿಕ ಅಧಿಸೂಚನೆಯಾಗಿ ತದ ನಂತರ ’ಹುಲಿ ಸಂರಕ್ಷಿತ’ ಪ್ರದೇಶ ಎಂದು ಘೋಷಿತವಾಗಿದ್ದರೂ ಅರಣ್ಯ ಇಲಾಖೆಯ ಅಭಿಪ್ರಾಯ ಕೂಡ ಪಡೆಯದೆ ಕಾನೂನುಬಾಹಿರವಾಗಿ 18 ಜನರಿಗೆ ಆ ಭೂಮಿಯನ್ನು ಮಂಜೂರು ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

‘ಹುಲಿ ಸಂರಕ್ಷಿತ’ ಪ್ರದೇಶ ಎಂಬ ವಿಷಯ ಗೊತ್ತಿದ್ದರೂ ಸಹ ವಾಸ್ತವಾಂಶ ಮರೆಮಾಚಿ ಸ್ಥಳ ಪರಿಶೀಲನೆ ಮಾಡಿದ ರಾಜಸ್ವ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು ಕಡತದ ಮನವಿ ಪತ್ರಕ್ಕೆ ಮಂಜೂರಾತಿಗೆ ಶಿಫಾರಸು ಮಾಡಿದ್ದರು. ತಹಶೀಲ್ದಾರ್ ಜಿ.ಉಮೇಶ್ ಸಾಗುವಳಿ ಚೀಟಿಗೆ ಸಹಿ ಮಾಡಿ ಭೂಮಿ ತಂತ್ರಾಂಶದಲ್ಲಿ ಅನುಮೋದನೆ ನೀಡಿದ್ದರು. ನಂತರ ಶಿರಸ್ತೇದಾರರು, ರಾಜಸ್ವ ನಿರೀಕ್ಷಕರು ಅನುಮೋದಿಸಿ ಖಾತೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? 100ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸುತ್ತೇವೆ: ಕೃಷಿ ಸಚಿವ ಚಲುವರಾಯಸ್ವಾಮಿ

ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ವರದಿ ಸಲ್ಲಿಸಿದ್ದು, ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಖಾಸಗಿ ವ್ಯಕ್ತಿಗಳಿಗೆ ಹಕ್ಕು ದಾಖಲಿಸಿರುವ ಕುರಿತು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಬಗರ್ ಹುಕುಂ ಸಮಿತಿಯಲ್ಲಿ ನಮೂನೆ 50/53 ವಜಾಗೊಂಡಿದ್ದರೂ ಸಹ ಪುನಃ ನಕಲಿ ಸಾಗುವಳಿ ಚೀಟಿಯನ್ನು ಕಾನೂನುಬಾಹಿರವಾಗಿ ಸೃಷ್ಟಿಸಿ ಮಂಜೂರು ಮಾಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

“ಚಿಕ್ಕಮಗಳೂರು ಜಿಲ್ಲಾಧಿಕಾರಿ ಅವರ ವರದಿಯನ್ನು ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣದ ನ್ಯಾಯಯುತ ತನಿಖೆಗೆ ನಡೆಸಿ, ತಪ್ಪಿಸ್ಥರಿಗೆ ಶಿಕ್ಷೆ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಈಗಾಗಲೇ 13 ಜನರ ತಹಶೀಲ್ದಾರರ ತಂಡ ಚಿಕ್ಕಮಗಳೂರಿನಲ್ಲಿ ಬೀಡುಬಿಟ್ಟಿದ್ದು, ಖಾಸಗಿಯವರಿಗೆ ಅಕ್ರಮವಾಗಿ ಮಾರಾಟ ಮಾಡಲಾಗಿರುವ ಅರಣ್ಯ ಭೂಮಿಯ ತನಿಖೆ ನಡೆಸುತ್ತಿದ್ದಾರೆ. ತನಿಖೆಯ ವೇಳೆ ಇಂತಹ ಮತ್ತೂ 22 ಪ್ರಕರಣಗಳು ಪತ್ತೆಯಾಗಿದೆ” ಎಂದು ಸಚಿವರು ತಿಳಿಸಿದ್ದಾರೆ.

“ಕಂದಾಯ ಇಲಾಖೆಯನ್ನು ಭ್ರಷ್ಟಾಚಾರ ಮುಕ್ತಗೊಳಿಸಿ ಜನಸ್ನೇಹಿ ಆಡಳಿತ ನೀಡುವ ಸರ್ಕಾರದ ಭರವಸೆಗೆ ನಾವು ಬದ್ಧರಾಗಿದ್ದೇವೆ. ಇಲಾಖೆಯಲ್ಲಿ ಯಾವುದೇ ಹಂತದಲ್ಲಿ ಯಾವುದೇ ವ್ಯಕ್ತಿಯ ಭ್ರಷ್ಟಾಚಾರವನ್ನು ಸಹಿಸಲು ಸಾಧ್ಯವಿಲ್ಲ. ಈಗಾಗಲೇ ಕಂದಾಯ ಇಲಾಖೆಯಲ್ಲಿ ಅಕ್ರಮ ಎಸಗಿದ್ದ 66 ಜನ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವ ಮೂಲಕ ಮಾದರಿ ಹೆಜ್ಜೆ ಇಡಲಾಗಿದೆ. ಅಲ್ಲದೆ ವಿಚಾರಣೆಯ ಹಂತದಲ್ಲಿರುವ ಇತರ ಭ್ರಷ್ಟ ಅಧಿಕಾರಿಗಳ ಪಟ್ಟಿಯನ್ನು ನೀಡುವಂತೆಯೂ ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ” ಎಂದಿದ್ದಾರೆ.

“ಎಮ್ಮೆದೊಡ್ಡಿ ಕಾವಲು ಗ್ರಾಮದ ಸ.ನಂ.70, 71, 12, 13, 14, 77, 84 ಮತ್ತು 1 ರಿಂದ 63ರವರೆಗಿನ 21 ಸಾವಿರ ಎಕರೆ ಜಾಗವನ್ನು Notification No:A.F.3892-Ft-137-41-2, Dt:04.02.1942 ರಂತೆ ಮೈಸೂರು ಗೇಮ್ ಅಂಡ್ ಫಿಷ್ ಪ್ರಿಸರ್ವೇಶನ್ ಕಾಯ್ದೆ Il of 1901 ರ ಕಲಂ-4(ಬಿ) ಅಡಿಯಲ್ಲಿ ಸರ್ಕಾರಿ ಆದೇಶದಂತೆ ಮೈಸೂರು ಒಡೆಯರ್ ಕಾಲದಲ್ಲೇ “ಎಮ್ಮೆದೊಡ್ಡಿ ಹುಲಿ ಸಂರಕ್ಷಿತ ಪ್ರದೇಶ”ವೆಂದು ಅಧಿಸೂಚಿಸಲ್ಪಟ್ಟಿದೆ.

ಸದರಿ ಪ್ರದೇಶ ಪ್ರಸ್ತುತ ಕರ್ನಾಟಕ ಅರಣ್ಯ ಕಾಯ್ದೆ-1963ರ ಕಲಂ-4ರಡಿಯೂ ಅಧಿಸೂಚಿತ ಪ್ರದೇಶವಾಗಿದೆ. ಹೀಗಾಗಿ ಈ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಯಾವುದೇ ಅಭಿಪ್ರಾಯ ಪಡೆಯದೆ ಸಮೂನೆ-50/53 ರಡಿಯಲ್ಲಿ ಸಾಗುವಳಿ ಚೀಟಿ, ಆರ್.ಟಿ.ಸಿ.ಗಳನ್ನು ನೀಡಲು ಕಾನೂನಿನ ಅಡಿಯಲ್ಲಿ ಅವಕಾಶ ಇರುವುದಿಲ್ಲ. ಒಂದು ವೇಳೆ ಹಾಗೆ ನೀಡಿದರೆ ಅರಣ್ಯ ಸಂರಕ್ಷಣಾ ಕಾಯ್ದೆ-1980ರ ಕಲಂ-2 ಮತ್ತು ಅರಣ್ಯ ಕಾಯ್ದೆ ಹಾಗೂ ಕಾನೂನಿನ್ವಯ ಉಲ್ಲಂಘನೆಯಾಗಿರುತ್ತದೆ. ಅಲ್ಲದೆ ಸರ್ವೋಚ್ಚ ನ್ಯಾಯಾಲಯದ ಆದೇಶಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ: ಓರ್ವ ಮೃತ್ಯು; ಮತ್ತೋರ್ವ ಗಂಭೀರ

ನಿರ್ಲಕ್ಷ್ಯದಿಂದ ಬೈಕ್ ಚಲಾಯಿಸಿದ ಪರಿಣಾಮ ಸವಾರನೋರ್ವ ಮೃತಪಟ್ಟು, ಸಹ ಸವಾರ ಗಂಭೀರ...

ಗುಬ್ಬಿ | ಮೀಡಿಯಾ ಬ್ಯಾಕ್ ಆಫೀಸ್ ಕಂಪೆನಿಯ ಎಸ್.ರಘು ಅವರಿಗೆ ‘ಉದ್ಯೋಗದಾತ’ ಬಿರುದು ಪ್ರದಾನ

ಗ್ರಾಮೀಣ ಭಾಗದ ಕನಿಷ್ಠ ವಿದ್ಯಾಭ್ಯಾಸದ ಯುವಕ ಯುವತಿಯರಿಗೆ ಕಂಪ್ಯೂಟರ್ ತರಬೇತಿ...

ಹಾವೇರಿ | ಕನ್ನಡದ ಅಭಿವೃದ್ಧಿಗೆ ಶಿಕ್ಷಣ, ಉದ್ಯೋಗ ಬೇಕೇ ಹೊರತು ರಾಜಕಾರಣಿಗಳ ಭಾಷಣಗಳಲ್ಲ: ಬಸವರಾಜ ಪೂಜಾರ

ನಮ್ಮ ರಾಜ್ಯದ ಮಾತೃ ಭಾಷೆ ಕನ್ನಡ ಉಳಿವಿಗಾಗಿ, ಅಭಿವೃದ್ಧಿಗಾಗಿ ಕನ್ನಡಿಗರಿಗೆ ಶಿಕ್ಷಣ...

ಸಾಗರ | ಆಟೋ-ಕಾರು ಮುಖಾಮುಖಿ ಡಿಕ್ಕಿ: ಇಬ್ಬರು ಮೃತ್ಯು

ಶಿವಮೊಗ್ಗ ಜಿಲ್ಲೆಯ ಸಾಗರ ಸಮೀಪದಲ್ಲಿ ಆಟೋ ಹಾಗೂ ಕಾರಿನ ನಡುವೆ ಭೀಕರ...