ಕೃಷ್ಣಾ, ತುಂಗಭದ್ರಾ ನದಿಗಳಲ್ಲಿ ಅಕ್ರಮ ಮರಳುಗಾರಿಕೆ; ಕ್ರಮಕ್ಕೆ ಆಗ್ರಹ

Date:

Advertisements

ರಾಯಚೂರು ಮತ್ತು ಯಾದಗಿರಿ ಹಲವಾರು ಗ್ರಾಮಗಳಲ್ಲಿ ಕೃಷ್ಣಾ ಮತ್ತು ತುಂಗಭದ್ರಾ ನದಿಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ. ಬೃಹತ್ ಯಂತ್ರಗಳನ್ನು ಬಳಸಿ ಗಣಿಗಾರಿಕೆ ನಡೆಸಲಾಗುತ್ತಿದೆ. ಅಧಿಕಾರಿಗಳು ಎಚ್ಚೆತ್ತು, ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಯಬೇಕೆಂದು ನೈಜ ಹೋರಾಟಗಾರರ ವೇದಿಕೆ ಆಗ್ರಹಿಸಿದೆ.

ರಾಯಚೂರು ಮತ್ತು ಯಾದಗಿರಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹಕ್ಕೊತ್ತಾಯ ಪತ್ರ ಬರೆದಿರುವ ವೇದಿಕೆಯ ಮುಖಂಡರು, “ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಚಿಕಲಪರ್ವಿ ಮತ್ತು ಯಾಳವಾರ ಗ್ರಾಮದಲ್ಲಿ ತುಂಗಭದ್ರಾ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದೆ. ದೇವದುರ್ಗ ತಾಲೂಕಿನ  ಕರ್ಕಹಳ್ಳಿ, ಬೆಣಕಲ್‌, ಗೋಪಳಪುರ್‌ ಹಾಗೂ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಟೂಣೂರು, ಗೌಡೂರು, ಕೋಳೂರಿನಲ್ಲಿ ಕೃಷ್ಣಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ” ಎಂದು ತಿಳಿಸಿದೆ.

“ಎರಡೂ ಜಿಲ್ಲೆಗಳ ಹಲವು ಗ್ರಾಮಗಳಲ್ಲಿ ಹಸಿರು ಪೀಠದ ಆಧೇಶವನ್ನು ಉಲ್ಲಂಘಿಸಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಈ ಬಗ್ಗೆ ಹಲವರು ದೂರುಗಳನ್ನು ಕೊಟ್ಟಿರುವುದಾಗಿ ವರದಿಯಾಗಿದೆ. ಆದರೆ, ಅದನ್ನು ತಡೆಯುವ ಕೆಲಸವನ್ನು ಅಧಿಕಾರಿಗಳು ಮಾಡುತ್ತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾರ್ಯಾಂಗಕ್ಕೆ ನಾಗರಿಕರು ಕೊಟ್ಟ ದೂರುಗಳ ಬಗ್ಗೆ ಪರಿಶೀಲಿಸಿ ಕಾನೂನು ಕ್ರಮಗಳನ್ನು ಜರುಗಿಸುವ ಗುರುತರಜವಾಬ್ದಾರಿ ಜಿಲ್ಲಾಧಿಕಾರಿಗಳಿಗೂ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೂ ಇದೆ. ಆದರೆ ಜಿಲ್ಲೆಯ ನಾಗರಿಕರ ಅಹವಾಲುಗಳನ್ನು ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ ಎಂಬ ಆರೋಪಗಳಿವೆ” ಎಂದು ಕಿಡಿಕಾರಿದ್ದಾರೆ.

Advertisements

“ಕೃಷ್ಣಾ, ತುಂಗಭದ್ರಾ ನದಿಗೆ ನುಗ್ಗಿ ಬಹಿರಂಗವಾಗಿ ಭಾರಿ ಗಾತ್ರದ ಯಂತ್ರೋಪಕರಣಗಳಿಂದ ಮರಳುಗಳನ್ನೂ ಅಕ್ರಮವಾಗಿ ಕಡಿದು ಸರಬರಾಜು ಮಾಡಲಾಗುತ್ತಿದೆ. ಆದರೂ, ಮರ, ಮರಳು ಕಳ್ಳರ ವಿರುದ್ಧ ಯಾವುದೇ ಕ್ರಮವನ್ನು ತೆಗೆದುಕೊಳ್ಳದಿರುವುದು ಜಿಲ್ಲಾಡಳಿತದ ವೈಫಲ್ಯವಾಗಿದೆ.  ಉತ್ತರ ಕರ್ನಾಟಕದದ ಜೀವನದಿ ಕೃಷ್ಣೆ, ತುಂಗಭದ್ರಾ ನದಿಗಳು ಆಡಳಿತದ ವೈಫಲ್ಯದಿಂದ ಮುಂದಿನ ದಿನಗಳಲ್ಲಿ ಕಾಣೆಯಾಗಬಹುದು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ನೆಲದ ಕಾನೂನು ಎಲ್ಲರಿಗೂ ಒಂದೇ ಎನ್ನುವ ರೀತಿಯಲ್ಲಿ ಆಡಳಿತ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಜರುಗಿಸಬೇಕು. ಯಾವುದೇ ರೀತಿಯ ಮುನ್ಸೂಚನೆ ನೀಡದೆ ಆಗಾಗ್ಗೆ ನದಿಗಳ ಬಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಅಕ್ರಮವನ್ನು ತಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಹಕ್ಕೊತ್ತಾಯ ಪತ್ರದಲ್ಲಿ ವೇದಿಕೆಯ ಮುಖಂಡ ಹೆಚ್‌ ಎಂ ವೆಂಕಟೇಶ್‌, ಹಂದ್ರಾಳ್‌ ನಾಗಭೂಷಣ್‌, ಕುಣಿಗಲ್‌ ನರಸಿಂಹಮೂರ್ತಿ, ಲೋಕೇಶ್‌ ಬಿಎಸ್‌, ಜಗದೀಶ್‌ ಟಿ ಸಹಿ ಹಾಕಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X