ಮೈಸೂರು | ಗಾಂಧೀ ದೇಶಪ್ರೇಮ ಮೈಗೂಡಿಸಿಕೊಳ್ಳಿ : ಡಾ ಕವಿತಾ ರೈ

Date:

‘ಗಾಂಧೀ, ವಿವೇಕಾನಂದರನ್ನು ಎಲ್ಲಾ ಕಾಲಕ್ಕೂ ನೆನೆಯಬೇಕು. ಗಾಂಧೀಜಿಯವರ ಜೀವನ ಶೈಲಿ ಹಾಗೂ ಅವರಲ್ಲಿದ್ದ ದೇಶ ಪ್ರೇಮವನ್ನು ಮೈಗೂಡಿಸಿಕೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ಮುಕ್ತ ವಿವಿಯ ಕನ್ನಡ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷೆ ಡಾ. ಕವಿತಾ ರೈ ಕಿವಿಮಾತು ಹೇಳಿದರು.

- Advertisement -

ವಿಜಯನಗರದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಅದಮ್ಯ ರಂಗಶಾಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಾಂಧಿ ಸದ್ಭಾವನಾ, ಸ್ವಾಮಿ ವಿವೇಕಾನಂದ ಸಮಾಜ ಸೇವಾ, ಅದಮ್ಯ ಚಿಗುರು ಪ್ರತಿಭಾ ಚೇತನ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಮಕ್ಕಳ ಸಾಂಸ್ಕೃತಿಕ ಉತ್ಸವ ಶನಿವಾರ ಜರುಗಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

“ಗಾಂಧೀಜಿಯವರ ಎತ್ತರಕ್ಕೆ ತಲುಪಲು ಯಾರಿಂದಲೂ ಸಾಧ್ಯವಾಗುವುದಿಲ್ಲ. ಗಗನ ಅದೃಶ್ಯ ವ್ಯಕ್ತಿಯನ್ನು ತಲುಪಲು ಸಾಧ್ಯವಿಲ್ಲ. ಗಾಂಧೀಜಿಯವರು ರಾಜಕೀಯ, ಸಾಮಾಜಿಕ, ಆರ್ಥಿಕವಾಗಿ ಎಲ್ಲಾ ಕ್ಷೇತ್ರಗಳ ಕುರಿತು ಮಾತನಾಡಿದ್ದಾರೆ. ಅವರು ಮಾತನಾಡಿದರೆ ದೇಶ ಎದ್ದು ಬರುತ್ತಿದ್ದ ಕಾಲ ಇತ್ತು. ದೇಶವನ್ನು ವಿಭಜಿಸಿದರೆ, ಒಂದು ದೇಹವನ್ನು ಎರಡು ಭಾಗ ಮಾಡಿದಂತೆ. ಅದನ್ನು ಮಾಡಬೇಡಿ ಎಂದು ಮಹಾತ್ಮ ಗಾಂಧೀಜಿ ಅಂದು ಹೇಳಿದ್ದರು. ಯೂಟ್ಯೂಬ್ ಯುಗದಲ್ಲಿ ಸತ್ಯವನ್ನು ತಿರುಚಲು ಆಗುವುದಿಲ್ಲ. ರಾಜಕಾರಣಿಗಳು ತಿರುಚಿ ಮಾತನಾಡಬಾರದು, ಜನರಿಗೆ ಸತ್ಯವನ್ನು ಸಾರಬೇಕು” ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ, ಮಹಾರಾಜ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಪ್ರೊ. ಷಹಸೀನಾ ಬೇಗಂ, ಚನ್ನಪಟ್ಟಣದ ಪೊಲೀಸ್ ತರಬೇತಿ ಶಾಲೆಯ ಪೊಲೀಸ್ ಉಪಾಧೀಕ್ಷಕ ಸಿ. ಕಿರಣ್ ಕುಮಾರ್, ಹುಣಸೂರಿನ ಶಾಸ್ತ್ರೀ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಎಲ್. ರವಿಶಂಕರ್‌ ಅವರಿಗೆ ಗಾಂಧಿ ಸದ್ಭಾವನಾ ಪ್ರಶಸ್ತಿ ಯನ್ನು ವಿಶ್ರಾಂತ ಕುಲಪತಿ ಡಾ. ಪದ್ಮಾಶೇಖರ್ ಪ್ರದಾನ ಮಾಡಿದರು.

ಸ್ವಾಮಿ ವಿವೇಕಾನಂದ ಸಮಾಜಸೇವಾ ಪ್ರಶಸ್ತಿಯನ್ನು ಹಿರಿಯ ವರದಿಗಾರ ಅವಿನಾಶ್ ಜೈನಹಳ್ಳಿ, ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಎನ್. ಸಂತೋಷ್ ಕುಮಾರ್, ಸಾಹಿತಿಗಳಾದ ಡಾ.ನೀ.ಗೂ. ರಮೇಶ್ ಮತ್ತು ತಿಪಟೂರಿನ ಎಸ್. ಗಂಗಾಧರ ಕದ್ರಿ, ಪುಸ್ತಕ ಸಂಗ್ರಾಹಕ ಡಾ.ಎಚ್.ಬಿ. ಬೆಟ್ಟ ಸ್ವಾಮಿ, ನಂಜನಗೂಡಿನ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್.ಎನ್. ಚಂದ್ರ ಶೇಖರ ಬಾಬು, ತಿಪಟೂರಿನ ಟೈಮ್ಸ್ ಪಿಯು ಕಾಲೇಜಿನ ಆಡಳಿತಾಧಿಕಾರಿ ಕೆ.ಎಲ್. ಅನೂಪ್, ಎಚ್.ಡಿ. ಕೋಟೆ ಯ ಸೇಂಟ್ ಮೇರಿಸ್ ಪಿಯು ಕಾಲೇಜಿನ ಪ್ರಾಂಶುಪಾಲ ಸಂತೋಷ್ ಕುಮಾರ್, ಕೆ.ಆ‌ರ್. ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಎಂ. ಕೃಷ್ಣ ಬನ್ನಹಳ್ಳಿ, ಮಳವಳ್ಳಿಯ ಶಾಂತಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಸಿ. ಅನಿತಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ವಿಡಿಯೋ ವೀಕ್ಷಿಸಿ: https://youtu.be/yue3D6jXHgI?si=0hfXbtYRTM1bGbLC

ಜಿಲ್ಲೆಯ ವಿವಿಧ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅದಮ್ಯ ಚಿಗುರು ಪ್ರತಿಭಾ ಚೇತನ ಪ್ರಶಸ್ತಿಯನ್ನು ಎಡಿಸಿ ಡಾ.ಪಿ. ಶಿವರಾಜು ಹಾಗೂ ಚಾಮರಾಜನಗರ ಜಿಲ್ಲೆಯ ಲೋಕಾಯುಕ್ತ ಉಪಾಧೀಕ್ಷಕ ಜಿ.ಎಸ್. ಗಜೇಂದ್ರ ಪ್ರಸಾದ್ ಪ್ರದಾನ ಮಾಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಬೋಧಗಯಾ ಉಳಿವಿಗಾಗಿ ಬುದ್ಧನ ಮಾರ್ಗದಲ್ಲಿ ಹೋರಾಡುವುದು ಸೂಕ್ತ: ಮನೋರಖ್ಖಿತ ಭಂತೇಜಿ

ಕಾರ್ಯಕ್ರಮದಲ್ಲಿ ಕರ್ನಾಟಕ ಮಾಹಿತಿ ಆಯೋಗದ ಮಾಜಿ ಆಯುಕ್ತ ಕೆ.ಎಂ. ಚಂದ್ರೇಗೌಡ, ಅದಮ್ಯ ರಂಗಶಾಲೆ ಸಂಸ್ಥಾಪಕ ಕಾರ್ಯದರ್ಶಿ ಚಂದ್ರು ಮಂಡ್ಯ, ಗೌರವ ಕಾರ್ಯದರ್ಶಿ ಟಿ. ಸತೀಶ್ ಜವರೇಗೌಡ, ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಕೆ.ಬಿ. ಲಿಂಗರಾಜು, ಲೇಖಕ ಮಿರ್ಲೆ ಚಂದ್ರಶೇಖರ, ಉದ್ಯಮಿ ಎನ್.ಎಲ್. ಗಿರೀಶ್ ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ...