ತಮಿಳುನಾಡಿಗೆ ತಕ್ಷಣ ಕಾವೇರಿ ನೀರು ಬಿಟ್ಟಿರುವುದು ಅಕ್ಷಮ್ಯ ಅಪರಾಧ: ಬೊಮ್ಮಾಯಿ ಟೀಕೆ

Date:

  • ‘ಸರ್ಕಾರ ಸಿಡಬ್ಲುಎಂಎದಲ್ಲಿ ಪ್ರತಿಭಟಿಸಿಲ್ಲ’
  • ರಾಜ್ಯದ ರೈತರ ಹಿತ ಕಾಯಬೇಕು: ಆಗ್ರಹ

ತಮಿಳುನಾಡು ಕುರುವೈ ಬೆಳೆಗೆ ಎರಡು ಪಟ್ಟು ನೀರು ಬಳಕೆ ಮಾಡಿದೆ. ನಾಲ್ಕು ಪಟ್ಟು ಕುರುವೈ ಬೆಳೆ ಕ್ಷೇತ್ರ ವಿಸ್ತರಣೆ ಮಾಡಿದೆ. ಕರ್ನಾಟಕ ಸರ್ಕಾರ ಇದನ್ನು ಸಿಡಬ್ಲುಎಂಎದಲ್ಲಿ ಪ್ರತಿಭಟಿಸದೇ ಮತ್ತು ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಹಾಕಿದ ತಕ್ಷಣ ನೀರು ಬಿಟ್ಡಿರುವುದು ಅಕ್ಷಮ್ಯ ಅಪರಾಧ ಎಂದು ಮಾಜಿ ಸಿಎಂ ಬಸವಾರಜ ಬೊಮ್ಮಾಯಿ ಹೇಳಿದ್ದಾರೆ.

- Advertisement -

ಈ ಕುರಿತು ಅವರು ಪತ್ರಿಕಾ ಪ್ರಕಟಣೆ ಹೊರಡಿಸಿ, “ರಾಜ್ಯದ ರೈತರಿಗೆ ಈ ಮೊದಲು ನೀರು ಬಿಡದೇ ನಮ್ಮ ರಾಜ್ಯದ ರೈತರ ಪಾಲನ್ನು ಡ್ಯಾಂನಲ್ಲಿ ಸ್ಟೋರೇಜ್ ಮಾಡಿ, ರಾಜ್ಯದ ರೈತರಿಗೆ ನೀರು ಕೊಡುವ ತೀರ್ಮಾನ ವಿಳಂಬ ಮಾಡಿ ಈಗ ನಮ್ಮ ರೈತರ ಪಾಲಿನ ನೀರನ್ನು ತಮಿಳುನಾಡಿಗೆ ಹರಿಸುವ ಸ್ಥಿತಿ ನೀವು ತಂದೊಡ್ಡಿದ್ದೀರಿ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾವೇರಿ ನೀರನ್ನು ಬಿಡಲು ಸಾಧ್ಯವಿಲ್ಲ ಎಂಬ ಹೇಳಿಕೆ ಕೊಟ್ಟ ಮರುದಿನವೇ ಡಿಸಿಎಂ ನೇತೃತ್ವದ ನೀರಾವರಿ ಇಲಾಖೆ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ. ರಾಜ್ಯದಲ್ಲಿ ಕಾವೇರಿ ನೀರು ನಿರ್ವಹಣೆಯಲ್ಲಿ ಒಮ್ಮತ ಇಲ್ಲ ಹಾಗೂ ನಮ್ಮ ರಾಜ್ಯದ ನೀರಿನ ಪಾಲನ್ನು ರಕ್ಷಣೆ ಮಾಡುವಂತ ಛಲವೂ ಕಾಣಿಸುತ್ತಿಲ್ಲ” ಎಂದಿದ್ದಾರೆ.

“ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ, ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ಈ ವಿಚಾರದಲ್ಲಿ ರಾಜ್ಯದ ರೈತರ ಹಿತ ಕಾಯಬೇಕು” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...