ಪೋಕ್ಸೋ ಕಾಯ್ದೆ : ಕಟ್ಟುನಿಟ್ಟಿನ ಜಾರಿಗೆ ಸರ್ಕಾರಕ್ಕೆ ಹೈಕೋರ್ಟ್‌ ತಾಕೀತು

Date:

ಅಪ್ರಾಪ್ತ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳ ವಿರುದ್ಧ ದೂರು ದಾಖಲಿಸಲು ಅವಕಾಶ ನೀಡುವ ‘ಪೋಕ್ಸೋ ಕಾಯ್ದೆ’ ಸೆಕ್ಷನ್ 19ನ್ನು ಕಟ್ಟುನಿಟ್ಟಿನ ಜಾರಿಗೆ ತರಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ ನೀಡಿದೆ.

ಚಿಕ್ಕಮಗಳೂರಿನಲ್ಲಿ ಅಪ್ತಾಪ್ತ ಬಾಲಕಿಗೆ ಗರ್ಭಪಾತ ಮಾಡಿಸಿದ ವೈದ್ಯ ಡಾ.ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಹೈಕೋರ್ಟ್‌ ಪ್ರಕರಣದ ವಿಚಾರಣೆ ನಡೆಸುತ್ತಿದೆ. ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಪಡಿಸುವಂತೆ ವೈದ್ಯ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ವಜಾಗೊಳಿಸಿದ್ದಾರೆ.

“ಅಪ್ತಾಪ್ತೆಗೆ ಗರ್ಭಪಾತ ಮಾಡಿಸಿದ ಪ್ರಕರಣದಲ್ಲಿ ಸಂತ್ರಸ್ತೆ ಅಪ್ರಾಪ್ತೆ ಎಂಬುದು ತಿಳಿದಿರಲಿಲ್ಲ. ಆಕೆ ಆಸ್ಪತ್ರೆಗೆ ಬಂದಾಗ ಸೀರೆ ತೊಟ್ಟಿದ್ದರಿಂದ ವಯಸ್ಕಳೆಂದು ಭಾವಿಸಿ ಚಿಕಿತ್ಸೆ ನೀಡಿದ್ದೆ. ಹೀಗಾಗಿ, ತಮ್ಮ ವಿರುದ್ಧ ಪ್ರಕರಣವನ್ನು ವಜಾಗೊಳಿಸಬೇಕು” ಎಂದು ಅರ್ಜಿದಾರ ವೈದ್ಯ ಮನವಿ ಮಾಡಿದ್ದರು.

ಅರ್ಜಿದಾರರ ವಾದವನ್ನು ಆಲಿಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ, “ಅರ್ಜಿದಾರ ವೈದ್ಯರಿಗೆ 35 ವರ್ಷಗಳ ವೃತ್ತಿ ಅನುಭವವಿದೆ. ಅಲ್ಲದೆ, ಅವರು ಸ್ತ್ರೀರೋಗ ತಜ್ಞರು. ಅಂತಹವರು ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚು ಜಾಗ್ರತೆ ವಹಿಸಬೇಕು. ಅಂತಹ ಪ್ರಕರಣಗಳು ಬಂದಾಗ ಮೊದಲ ಪೊಲೀಸರಿಗೆ ಮಾಹಿತಿ ನೀಡಬೇಕು. ಈ ಪ್ರಕರಣದಲ್ಲಿ ವೈದ್ಯರ ನಿರ್ಲಕ್ಷ್ಯ ಗಂಭೀರವಾದದ್ದು, ಪ್ರಕರಣದ ವಿಚಾರಣೆಯನ್ನು ಮುಂದುವರೆಸಬೇಕು” ಎಂದು ಹೇಳಿದ್ದು, ಅರ್ಜಿಯನ್ನು ವಜಾಗೊಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ರೋಹಿಣಿ V/S ರೂಪಾ | ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾಯಮೂರ್ತಿ

“ಪೋಕ್ಸೋ ಕಾಯ್ದೆಯ ಸೆಕ್ಷನ್ 19ರ ಅನ್ವಯ ಅಪ್ರಾಪ್ತರ ಮೇಲಾಗುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ಕುರಿತು ವೈದ್ಯರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಬೇಕು. 19ನೇ ವಿಧಿಯ ಜಾರಿಯಲ್ಲಿ ವೈದ್ಯರ ಪಾತ್ರ ಪ್ರಮುಖವಾಗಿದೆ. ಕಲಂ 19ನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಅಗತ್ಯ ಕ್ರಮಗಳನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳಬೇಕು” ಎಂದು ಹೈಕೋರ್ಟ್‌ ನಿರ್ದೇಶಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೀತಾಫಲ ಹಣ್ಣಿಗೆ ಭಾರೀ ಬೇಡಿಕೆ; ಬೇಕಿದೆ ಮಾರುಕಟ್ಟೆ ಸೌಲಭ್ಯ

ಸೀತಾಫಲ ಹಣ್ಣು ತಿನ್ನಲು ತುಂಬಾ ರುಚಿಕರ ಹಾಗೂ ಅಷ್ಟೇ ಸ್ವಾದಿಷ್ಟ, ರೋಗ...

ಕಾವೇರಿ ವಿವಾದ | ತಮಿಳು ನಟ ಸಿದ್ಧಾರ್ಥ್‌ ಕ್ಷಮೆ ಕೇಳಿದ ನಟ ಶಿವರಾಜ್‌ಕುಮಾರ್

ತಮಿಳು ನಟ ಸಿದ್ಧಾರ್ಥ್‌ ಅವರ ಸುದ್ದಿಗೋಷ್ಠಿಗೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ...

ಕರ್ನಾಟಕ ಬಂದ್ | ದಾವಣಗೆರೆ: ತಮಿಳುನಾಡಿ ನೀರು ಹರಿಸದಂತೆ ಒತ್ತಾಯಿಸಿ ಕರವೇ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವ ರಾಜ್ಯ ಸರ್ಕಾರ ಮತ್ತು ಕಾವೇರಿ ನಿರ್ವಹಣಾ...

ಹಾವೇರಿ | ಕಾವೇರಿ ನೀರು ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯ ಪ್ರವೇಶಿಸಿ ನ್ಯಾಯ ಒದಗಿಸಲಿ

ರಾಜ್ಯ ಸರ್ಕಾರ ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವಂತೆ ಒತ್ತಾಯ ವಿವಿಧ ಸಂಘಟನೆಗಳ...