ರಾಜ್ಯದಲ್ಲಿ ಆನ್‌ಲೈನ್‌ ಗೇಮ್‌ ನಿಷೇಧ ಕಾಯ್ದೆ ಜಾರಿಗೊಳಿಸಿ : ಶಾಸಕ ಶೈಲೇಂದ್ರ ಬೆಲ್ದಾಳೆ

Date:

ಹಣ ಪಣಕ್ಕಿಟ್ಟು ಆಟವಾಡುವ ಎಲ್ಲ ತರಹದ ಆನ್‌ಲೈನ್‌ ಗೇಮ್‌ಗಳ ನಿಷೇಧಕ್ಕೆ ಕೇಂದ್ರ ಸರ್ಕಾರ ಕಠಿಣ ಕಾಯ್ದೆ ರೂಪಿಸಿದ್ದು, ಅಕ್ಟೋಬರ್ 1ರಿಂದ ಜಾರಿಗೆ ಬರಲಿದೆ. ರಾಜ್ಯದಲ್ಲೂ ಈ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೆ ತರಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ರಾಜ್ಯ ಕಾರ್ಯದರ್ಶಿ, ಬೀದರ್ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಒತ್ತಾಯಿಸಿದ್ದಾರೆ.

- Advertisement -

ʼರಮ್ಮಿ ಜೂಜಾಟ ಸೇರಿದಂತೆ ಆನ್‌ಲೈನ್ ಆಟಗಳನ್ನು ನಿಷೇಧಿಸುವ ಆನ್‌ಲೈನ್ ಗೇಮಿಂಗ್ ನಿಯಂತ್ರಣ ಮಸೂದೆ-2025 ಈಗಾಗಲೇ ಅಂಗೀಕಾರಗೊಂಡಿದ್ದು,  ರಾಷ್ಟ್ರಪತಿಗಳ ಅಂಕಿತವೂ ಬಿದ್ದಿದೆ. ಅ.1ರಿಂದ ಹೊಸ ಕಾಯ್ದೆಯಡಿ ಕಠಿಣ ನಿಯಮ ಜಾರಿಗೊಳ್ಳಲಿವೆ. ಈ ಕಾಯ್ದೆ ಜಾರಿ ಮುಖಾಂತರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕವಾಗಿ ಐತಿಹಾಸಿಕ ದಿಟ್ಟ ಹೆಜ್ಜೆ ಇರಿಸಿದೆʼ ಎಂದು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ʼಆನ್‌ಲೈನ್ ಆ್ಯಪ್ ಗೇಮಿಂಗ್ ನಿಷೇಧ ಕಾಯ್ದೆಯು ಯುವಸಮೂಹ ಈ ಚಟಕ್ಕೆ ದಾಸರಾಗುವುದನ್ನು ತಡೆಗಟ್ಟಲಿದೆ. ಹಣಕಾಸು ವಂಚನೆ, ಅಕ್ರಮ ಹಣ ವರ್ಗಾವಣೆಗೆ ಬ್ರೇಕ್ ಹಾಕಲಿದೆ. ನಿಯಮ ಉಲ್ಲಂಘಿಸಿದವರಿಗೆ ಕಠಿಣ ಜೈಲು ಶಿಕ್ಷೆ ಹಾಗೂ 1 ಕೋಟಿ ರೂಪಾಯಿವರೆಗೆ ದಂಡ  ವಿಧಿಸುವ ಅವಕಾಶ ಕಲ್ಪಿಸಿರುವುದು ಸ್ತುತ್ಯಾರ್ಹವಾಗಿದೆ. ಈ ನಿಷೇಧ ಕಾಯ್ದೆ ಜಾರಿಯಿಂದಾಗಿ ಅನೇಕ ಕುಟುಂಬಗಳ ಆರ್ಥಿಕ ಸ್ಥಿರತೆ ಕಾಪಾಡಲಿದೆ. ವಿಶೇಷವಾಗಿ ಬಡ ಹಾಗೂ ಮಧ್ಯಮ ವರ್ಗದವರಿಗೆ ಈ ಕಾಯ್ದೆ ವರದಾನ ಎನಿಸಿದೆʼ ಎಂದು ಅಭಿಪ್ರಾಯಪಟ್ಟಿದ್ದಾರೆ.

ʼಆನ್‌ಲೈನ್ ಗೇಮಿಂಗ್ ನಲ್ಲಿ ಹಣ ಕಳೆದುಕೊಂಡು ಅಸಂಖ್ಯಾತ ಕುಟುಂಬ ಬೀದಿಗೆ ಬಿದ್ದಿವೆ. ಅನೇಕರು ಆತ್ಮಹತ್ಯೆಯ ಹಾದಿ ತುಳಿದಿದ್ದಾರೆ. ಯುವ ಪೀಳಿಗೆಯ ಭವಿಷ್ಯ ಹಾಳು ಮಾಡುವ ಆನ್‌ಲೈನ್ ಗೇಮಿಂಗ್ ಗಳು ಸಮಾಜದಲ್ಲಿ ಗಂಭೀರ ಸಮಸ್ಯೆ ಸೃಷ್ಟಿಸುತ್ತಿವೆʼ ಎಂದರು.

ಇದನ್ನೂ ಓದಿ : ಪ್ರತ್ಯೇಕ ಧರ್ಮದ ಪ್ರಯತ್ನ ಮುಂದುವರಿಯಲಿದೆ, ವೀರಶೈವ-ಲಿಂಗಾಯತವೇ ನಮ್ಮ ನಿಲುವು: ಈಶ್ವರ ಖಂಡ್ರೆ

ʼಸಾಮಾಜಿಕ ವ್ಯವಸ್ಥೆ ಜೊತೆಗೆ ಶಿಕ್ಷಣ, ಉದ್ಯೋಗ, ಕುಟುಂಬ ಜೀವನಗಳ ಮೇಲೂ ದುಷ್ಪರಿಣಾಮ ಬೀರುವ ಆನ್‌ಲೈನ್ ಗೇಮಿಂಗ್ ವ್ಯಸನದಿಂದ ಸಮಾಜ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಈ  ಕಾಯ್ದೆಯ ಕಠಿಣ ಅನುಷ್ಠಾನಕ್ಕೆ  ರಾಜ್ಯ ಸರ್ಕಾರ ತಕ್ಷಣವೇ ಮುಂದಾಗಬೇಕು. ಇಲ್ಲದಿದ್ದರೆ ಪಕ್ಷ ಜನಹಿತದಿಂದ ಹೋರಾಟ ನಡೆಸುವುದು ಅನಿವಾರ್ಯʼ ಎಂದು ಶಾಸಕ ಬೆಲ್ದಾಳೆ ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...