ಡಿಜಿಟಲ್ ಯೋಜನೆಗಳ ಅನುಷ್ಠಾನ: ಬಿಎಂಟಿಸಿ ಹೆಗಲಿಗೆ ಎಎಸ್‌ಟಿಆರ್‌ಟಿಯುವಿನಿಂದ ‘ಎಕ್ಸಲೆನ್ಸ್ ಪ್ರಶಸ್ತಿ’

Date:

ಡಿಜಿಟಲ್ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿದ ಹಿನ್ನೆಲೆಯಲ್ಲಿ ಬಿಎಂಟಿಸಿ ಹೆಗಲಿಗೆ ಎಸ್‌ಟಿಆರ್‌ಟಿಯುವಿನಿಂದ ‘ಎಕ್ಸಲೆನ್ಸ್ ಪ್ರಶಸ್ತಿ’ ಲಭಿಸಿದೆ.

- Advertisement -

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಆಸೋಸಿಯೇಷನ್ ಆಫ್ ಸ್ಟೇಟ್ ರೋಡ್ ಟ್ರಾನ್ಸ್ಪೋರ್ಟ್ ಅಂಡರ್ಟೇಕಿಂಗ್ಸ್ (ASRTU) ಮೂಲಕ ಪ್ರದಾನಿಸಲಾದ ಪ್ರಖ್ಯಾತ ರಾಷ್ಟ್ರೀಯ ಪಬ್ಲಿಕ್ ಬಸ್ ಟ್ರಾನ್ಸ್ಪೋರ್ಟ್ ಎಕ್ಸಲೆನ್ಸ್ ಪ್ರಶಸ್ತಿಯನ್ನು ಡಿಜಿಟಲ್ ಪ್ರಾಕ್ಟಿಸಸ್ ಅಡಿಯಲ್ಲಿ ಹೊಸ ಉಪಕ್ರಮಗಳ ವಿಭಾಗದಲ್ಲಿ ಗೆದ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಬೆಂ.ಮ.ಸಾ.ಸಂಸ್ಥೆಯ ಮೆಟ್ರೋ ಫೀಡರ್ ಕ್ಯೂ ಆರ್ ಕೋಡ್ ಸೇವೆಗಳನ್ನು ಗುರುತಿಸಿ ಈ ಪ್ರಶಸ್ತಿ ಲಭಿಸಿದೆ. ಪ್ರಯಾಣಿಕರ ಅನುಕೂಲಕ್ಕೆ ಕ್ಯೂ ಆರ್ ಕೋಡ್ ಸೇವೆಯನ್ನು ತೊಡಗಿಸಿಕೊಂಡು, ಸಾರ್ವಜನಿಕ ಸಾರಿಗೆಯನ್ನು ಆಧುನಿಕಗೊಳಿಸಲು ಮತ್ತು ಡಿಜಿಟಲ್ ಪರಿಹಾರಗಳ ಮೂಲಕ ಸೇವಾ ಸರಬರಾಜು ಮಾಡುವ ಬದ್ಧತೆಯನ್ನು ಗುರುತಿಸಿ ಈ ಪ್ರಶಸ್ತಿ ಲಭಿಸಿದೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ವತಿಯಿಂದ ನವದೆಹಲಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಿವೃತ್ತ ಐಪಿಎಸ್, ಅಧಿಕಾರಿ ಡಾ.ಕಿರಣ್ ಬೇಡಿ ಪ್ರಶಸ್ತಿ ಪ್ರದಾನ ಮಾಡಿದರು. ಬೆಂಮಸಾಸಂಸ್ಥೆಯ ಗಣಕ ಶಾಖೆಯ ಸಹಾಯಕ ಸಂಚಾರ ಅಧೀಕ್ಷಕರಾದ ಶ್ರೀಮತಿ ಯಶೋಧ.ಬಿ.ಎಸ್ ನಿಗಮದ ಪರವಾಗಿ ಪ್ರಶಸ್ತಿಗಳನ್ನು ಸ್ವೀಕರಿಸಿದರು.

ಇದೇ ವೇಳೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬೆಂಮಸಾಸಂಸ್ಥೆಯ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಮತಿ ಸವಿತಾ, (ಬಿಲ್ಲೆ ಸಂಖ್ಯೆ 8617), ಶ್ರೀಮತಿ ಸಿ.ಎನ್.ಕುಸುಮ(ಬಿಲ್ಲೆ ಸಂಖ್ಯೆ 8625) ಮತ್ತು ಶ್ರೀಮತಿ ಮಂಜುಳಾ, (ಬಿಲ್ಲೆ ಸಂಖ್ಯೆ 9232) ಇವರುಗಳಿಗೆ ಸಂಸ್ಥೆಯಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗ ಮತ್ತು ಎಎಸ್ಆರ್‌ಟಿಯು ನಿರ್ವಾಹಕ ನಿರ್ದೇಶಕ ಸೂರ್ಯಕಿರಣ್ ಉಪಸ್ಥಿತರಿದ್ದರು.

WhatsApp Image 2025 03 10 at 11.16.31 AM 1

ದೇಶದ 62 ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ (ASRTU) ಅಡಿಯಲ್ಲಿ ಸದಸ್ಯತ್ವವನ್ನು ಹೊಂದಿವೆ. ಒಕ್ಕೂಟವು 13-08-1965 ರಂದು ಅಸ್ತಿತ್ವಕ್ಕೆ ಬಂದಿತ್ತು. ಇದು ಭಾರತ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ನಿರ್ದೇಶನದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.

ಬೆಂ.ಮ.ಸಾ.ಸಂಸ್ಥೆಯ ಮೆಟ್ರೋ ಫೀಡರ್ QR ಕೋಡ್ ಸೇವೆಗಳು ಪ್ರಯಾಣಿಕರಿಗೆ ಮೆಟ್ರೋ ನಿಲ್ದಾಣಗಳಿಗೆ ಸಂಪರ್ಕ ಕಲ್ಪಿಸುವ ಬಸ್ ಸೇವೆಗಳನ್ನು ಉಪಯೋಗಿಸಲು ಅವಕಾಶ ನೀಡುತ್ತವೆ, ಇದು ಅವರ ಪ್ರಯಾಣವನ್ನು ಸರಳಗೊಳಿಸುತ್ತದೆ. ಟಿಕೆಟ್ ಪ್ರಕ್ರಿಯೆಯಲ್ಲಿ QR ಕೋಡ್‌ಗಳನ್ನು ಸಂಯೋಜನೆ ಮಾಡುವ ಮೂಲಕ, ಸಂಸ್ಥೆಯು ಪ್ರಯಾಣಿಕರಿಗೆ ತಮ್ಮ ಪ್ರಯಾಣಗಳನ್ನು ಡಿಜಿಟಲ್ ಆಗಿ ಪಾವತಿಸುವಲ್ಲಿ ಹೆಚ್ಚು ಅನುಕೂಲ ನೀಡಿದೆ. ಈ ನಾವೀನ್ಯತೆಯು ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಮತ್ತು ಪ್ರಯಾಣಿಕರಿಗೆ ತಡೆರಹಿತ, ಪರಿಣಾಮಕಾರಿ ಅನುಭವವನ್ನು ಒದಗಿಸಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವ್ಯಾಪಕ ಪ್ರಯತ್ನಗಳ ಭಾಗವಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...