ಗ್ಯಾರಂಟಿ ಯೋಜನೆ ಅನುಷ್ಠಾನ; ಮುಖ್ಯಮಂತ್ರಿಗೆ ಪರಮಾಧಿಕಾರ ನೀಡಿದ ಸಚಿವರು

Date:

ಚುನಾವಣೆಗೆ ಮುನ್ನ ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮೇ 31) ವಿಧಾನಸೌಧದಲ್ಲಿ ಸಚಿವರೊಂದಿಗೆ ಸಭೆ ನಡೆಸಿದರು.

ಒಂದೂವರೆ ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆ ಜಾರಿಗೆ ಮುಖ್ಯಮಂತ್ರಿ ಪರಮಾಧಿಕಾರ ನೀಡಲಾಗಿದೆ.

ಜೂನ್‌ 1ರಂದು ನಡೆಯಬೇಕಿದ್ದ ಸಚಿವ ಸಂಪುಟ ಸಭೆಯನ್ನು ಜೂನ್‌ 2ಕ್ಕೆ ಮುಂದೂಡಲಾಗಿದ್ದು, ಗ್ಯಾರಂಟಿ ಯೋಜನೆ ಜಾರಿ ಸಂಬಂಧ ಗುರುವಾರ ಕೂಡ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಗೃಹಜ್ಯೋತಿ, ಗೃಹ ಲಕ್ಷ್ಮಿ, ಅನ್ನಭಾಗ್ಯ, ಯುವ ನಿಧಿ ಹಾಗೂ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಸೌಲಭ್ಯ ನೀಡುವ ಯೋಜನೆಗಳನ್ನು ಚುನಾವಣೆಗೆ ಮುನ್ನ ಕಾಂಗ್ರೆಸ್‌ ಘೋಷಿಸಿತ್ತು.

ಶುಕ್ರವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಐದು ಗ್ಯಾರಂಟಿ ಜಾರಿ ಖಚಿತ ಎಂದು ಸಿಎಂ ಸಿದ್ದರಾಮಯ್ಯ ಸಭೆ ಬಳಿಕ ಮಾಧ್ಯಮದವರಗೆ ಪುನರುಚ್ಚರಿಸಿದ್ದಾರೆ.

ಸಭೆ ಮುಗಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ, “ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಜೂನ್ 2 ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು” ಎಂದು ತಿಳಿಸಿದರು.

“ಐದು ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳು ಸಚಿವರಿಗೆ ಗ್ಯಾರಂಟಿ ಯೋಜನೆಗಳ ಆರ್ಥಿಕ ಪರಿಣಾಮ ಸೇರಿದಂತೆ ವಿವರಗಳ ಪ್ರಾತ್ಯಕ್ಷಿಕೆಯನ್ನು ಸಲ್ಲಿಸಿದ್ದಾರೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಮಹಿಳೆಯರ ಸ್ವಾವಲಂಬನೆಗಾಗಿ ಕಸೂತಿ ಕಾರ್ಯಗಾರ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ವೈಷ್ಣವಿ ಸಭಾಂಗಣ್ಣ ದಿ.18 ಮಾರ್ಚ್ 2024ರಂದು...

ಗದಗ | ಸರ್ಕಾರಿ ಜಾಗ ಒತ್ತುವರಿ ಪ್ರಶ್ನಿಸಿದ್ದಕ್ಕೆ ಜಾತಿ ನಿಂದನೆ

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಬಸವರಾಜ ಮುಳ್ಳಾಳ ಮತ್ತು ನಾಗಮ್ಮ ಹಾಲಿನವರ...

ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ | ದೇವೇಗೌಡರ ಆಶೀರ್ವಾದ ಆನೆ ಬಲ ತಂದಿದೆ: ಬಿ ವೈ ವಿಜಯೇಂದ್ರ

ಬಿಜೆಪಿ ಮತ್ತು ಜೆಡಿಎಸ್ ನಡುವಿನ ಸಮ್ಮಿಲನದಿಂದ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ...

ತುಮಕೂರಿನಲ್ಲಿ ಕೊಲೆಗೀಡಾಗಿದ್ದ ಬೆಳ್ತಂಗಡಿಯ ಮೂವರ ಅಂತ್ಯಕ್ರಿಯೆ

ತುಮಕೂರಿನಲ್ಲಿ ಇತ್ತೀಚೆಗೆ ಬೆಳ್ತಂಗಡಿಯ ಮೂವರನ್ನು ಕೊಲೆಗೈದು ಕಾರು ಸಹಿತ ಬೆಂಕಿ ಹಚ್ಚಿ...