ಬೀದರ್‌ | ಜನಸಾಮಾನ್ಯರ ಆರ್ಥಿಕ ಹೊರೆ ತಗ್ಗಿಸಲು ಗ್ಯಾರಂಟಿ ಯೋಜನೆ ಜಾರಿ: ಸಚಿವ ಈಶ್ವರ ಖಂಡ್ರೆ

Date:

Advertisements

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ಕೊಟ್ಟ ಮಾತು ಉಳಿಸಿಕೊಂಡಿದೆ. ಜೊತೆಗೆ ಪಂಚ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಅಗತ್ಯ ಕ್ರಮವಹಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಔರಾದ ಪಟ್ಟಣದ ಗುರುಪದಪ್ಪಾ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ತಾಲೂಕಿನ ಸಾರ್ವಜನಿಕರ ಕುಂದು ಕೊರತೆಗಳ ಜನಸ್ಪಂದನ ಸಭೆ ಮತ್ತು ಗ್ಯಾರಂಟಿ ಯೋಜನೆಗಳ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದರು.

“ಹಿಂದಿನ ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಬೇಸತ್ತು ಹೋದ ಜನತೆ ಜನಪರ ಆಡಳಿತ ಬಯಸಿದರು. ಜನರ ನಿರೀಕ್ಷೆಯಂತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಏಳು ತಿಂಗಳಾಗಿದೆ. ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಯಂತೆ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಹಾಗೂ ಯುವನಿಧಿ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ತಲುಪಿಸಿದ್ದೇವೆ” ಎಂದರು.

Advertisements

“ಕಾಂಗ್ರೇಸ್‌ನವರು ಗ್ಯಾರಂಟಿ ಕೊಡುತ್ತೇವೆಂದು ಸುಳ್ಳು ಹೇಳುತ್ತಿದ್ದಾರೆ, ಎಲ್ಲಾ ಉಚಿತ ನೀಡಲು ಸಾಧ್ಯವಿಲ್ಲ, ಇದರಿಂದ ರಾಜ್ಯ ದಿವಾಳಿ ಆಗುತ್ತದೆ ಎಂದು ವಿರೋಧ ಪಕ್ಷದವರು ಆರೋಪಿಸಿದರು. ಆದರೆ ನಾವು ಎಲ್ಲಾ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದ್ದೇವೆ” ಎಂದು ಹೇಳಿದರು.

ಕೇಂದ್ರ ಸರ್ಕಾರದ ತಪ್ಪು ನೀತಿಯಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. 2014 ರಿಂದ ತೈಲ ಬೆಲೆ , ಸಿಲಿಂಡರ್ ಬೆಲೆ ಗಗನಕ್ಕೇರುತ್ತಿದೆ. ಅಡುಗೆ ಮನೆ ಹೋದರೆ ಕಣ್ಣೀರು ಬರುತ್ತದೆ. ಹಿಂದಿನ ರಾಜ್ಯ ಬಿಜೆಪಿ ಸರ್ಕಾರ ಸುಮಾರು 650 ಭರವಸೆ ನೀಡಿತ್ತು. ಆದರೆ ಶೇ.90% ಭರವಸೆಗಳು ಸಹ ಈಡೇರಿಸಲಿಲ್ಲ. ಆದರೆ ಜನ ಸಾಮಾನ್ಯರ ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಕೊಟ್ಟ ಮಾತಿನಂತೆ ಎಲ್ಲ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದೇವೆ” ಎಂದರು.

ಕೆಕೆಆರ್‌ಡಿಬಿಯಿಂದ ಜಿಲ್ಲೆಗೆ 400 ಕೋಟಿ, ಔರಾದ ತಾಲೂಕಿಗೆ 100 ಕೋಟಿ ರೂ. ಅನುದಾನ :

“ಬೀದರ್ ಜಿಲ್ಲೆಯಲ್ಲಿ 3.50 ಲಕ್ಷ ಮಹಿಳೆಯರು‌ ಗೃಹಲಕ್ಷ್ಮಿ ಯೋಜನೆ ಲಾಭ ಪಡೆಯುತ್ತಿದ್ದಾರೆ. ತಿಂಗಳಿಗೆ 70 ಕೋಟಿ. ವರ್ಷಕ್ಕೆ 800 ಕೋಟಿ ರೂ ಫಲಾನುಭವಿಗಳ ಖಾತೆಗೆ ಜಮೆಯಾಗುತ್ತಿದೆ ಮತ್ತು ಗೃಹಜ್ಯೋತಿ ಯೋಜನೆ ಅಡಿಯಲ್ಲಿ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುತ್ತಿದ್ದು, ಇದರಿಂದ ಫಲಾನುಭವಿಗಳಿಗೆ ವರ್ಷಕ್ಕೆ 10 ರಿಂದ 15 ಸಾವಿರ ರೂ. ಉಳಿತಾಯವಾಗಲಿದೆ” ಎಂದು ಹೇಳಿದರು.

“ಅನ್ನಭಾಗ್ಯ ಯೋಜನೆ ಯಾರು ರಾಜ್ಯದಲ್ಲಿ ಹಸಿವಿನಿಂದ ಉಳಿಯಬಾರದು ಎಂದು ಇದನ್ನು ಜಾರಿಗೆ ತಂದಿದ್ದು ರಾಜ್ಯದಲ್ಲಿ 4 ಕೋಟಿಗಿಂತ ಹೆಚ್ಚಿನ ಜನರು ಇದರ ಲಾಭ ಪಡೆಯುತ್ತಿದ್ದು, ತಿಂಗಳಿಗೆ 650 ಕೋಟಿ ರೂ. ವರ್ಷಕ್ಕೆ 7 ಸಾವಿರ ಕೋಟಿ ರೂ. ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ” ಎಂದರು.

“ಶಕ್ತಿ ಯೋಜನೆ ಮಹಿಳೆಯರ ಸಬಲೀಕರಣಕ್ಕಾಗಿ ಇದನ್ನು ಜಾರಿಗೆ ತಂದಿದ್ದು ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ರಾಜ್ಯದಾದ್ಯಂತ ಯಾವುದೇ ದೇವಸ್ಥಾನ, ಕಾರ್ಯಕ್ರಮ ಮತ್ತು ತವರು ಮನೆಗಳಿಗೆ ಹೋಗಲು ಮಹಿಳೆಯರಿಗೆ ಅನುಕೂಲವಾಗಿದೆ. ಜಿಲ್ಲೆಯಲ್ಲಿ 1.7 ಲಕ್ಷ ಮಹಿಳೆಯರು ಪ್ರತಿದಿನ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಔರಾದ ತಾಲೂಕಿನಲ್ಲಿ ಒಟ್ಟು 28 ಲಕ್ಷ ಮಹಿಳೆಯರು ಪ್ರಯಾಣ ಮಾಡಿತ್ತಿದ್ದು, ತಿಂಗಳಿಗೆ 20 ಸಾವಿರ ಮಹಿಳೆಯರು ಪ್ರಯಾಣ ಮಾಡುತ್ತಿದ್ದಾರೆ” ಎಂದು ಮಾಹಿತಿ ನೀಡಿದರು.
“ಯುವನಿಧಿ ಯೋಜನೆ ಜಾರಿಗೆ ಮಾಡಿರುವುದು ಯುವಕರು ನಮ್ಮ ಸಂಪತ್ತು ಹಾಗಾಗಿ ಪದವಿ ಹಾಗೂ ಡಿಪ್ಲೋಮಾ ಮುಗಿಸಿ 6 ತಿಂಗಳವರೆಗೆ ಉದ್ಯೋಗ ಸಿಗದವರಿಗೆ 2 ವರ್ಷಗಳವರೆಗೆ ಪದವಿಧರರಿಗೆ 3 ಸಾವಿರ ರೂ. ಹಾಗೂ ಡಿಪ್ಲೊಮಾ ಮುಗಿಸಿದವರಿಗೆ 1500 ರೂ. ನಿರುದ್ಯೋಗ ಭತ್ಯ ನೀಡಲಾಗುತ್ತಿದ್ದು, ಈಗಾಗಲೇ ಬೀದರ ಜಿಲ್ಲೆಯಲ್ಲಿ 5 ಸಾವಿರ ಯುವಕರು ತಮ್ಮ ಹೆಸರುಗಳನ್ನು ನೊಂದಣಿ ಮಾಡಿಕೊಂಡಿದ್ದಾರೆ” ಎಂದರು.
“ಈ ಕಾರ್ಯಕ್ರಮ ರಾಜ್ಯದಲ್ಲಿ ಜಾರಿಗೆ ಬರುವ ಮುಂಚೆ ನಾನು ಬೀದರ ಜಿಲ್ಲೆಯಲ್ಲಿ ಜನಸ್ಪಂದನ ಕಾರ್ಯಕ್ರಮ ಮಾಡಿದ್ದೆ. ಮುಂದೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಇದರಿಂದ ಜನರ ಸಮಸ್ಯೆಗಳಾದ ಕುಡಿಯುವ ನೀರು, ರಸ್ತೆ, ಚರಂಡಿ,. ವೃದ್ದಾಪ್ಯ ವೇತನ, ಮನಸ್ವಿನಿ, ಮೈತ್ರಿ ಸೇರಿದಂತೆ ಹಲವಾರು ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಸ್ಥಳದಲ್ಲಿಯೇ ಪರಿಹಾರ ನೀಡಲು ಅನುಕೂಲವಾಗುತ್ತದೆ” ಎಂದರು.
eshwar khandre aurad 2
ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

“ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಬೀದರ ಜಿಲ್ಲೆಗೆ 400 ಕೋಟಿ ರೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆಯಾಗಿದ್ದು, ಅದರಲ್ಲಿ ಹೆಚ್ಚಿನ ಅನುದಾನ 100 ಕೋಟಿ ರೂ ಔರಾದ ತಾಲೂಕಿಗೆ ಬಂದಿದೆ. ಗಡಿ ತಾಲೂಕು ಔರಾದನಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ” ಎಂದು ಹೇಳಿದರು.

“ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಆದರೆ ಕೆಲವು ಶಕ್ತಿಗಳಿಂದ ದ್ವೇಷ ರಾಜಕಾರಣ ನಡೆಯುತ್ತಿದೆ. ಎಲ್ಲಾ ಧರ್ಮೀಯರನ್ನು ಜೊತೆಗೂಡಿ ರಾಜಕೀಯ ನಡೆಸಿದರೆ ರಾಮ ರಾಜ್ಯ ನಿರ್ಮಾಣ ಸಾಧ್ಯ.
ಇಲ್ಲಿ ಎಲ್ಲಾ ಧರ್ಮ, ಜಾತಿ, ಜನಾಂಗದವರು ವಾಸಿಸುತ್ತಿದ್ದು. ನಾವು ಯಾರನ್ನು ದ್ವೇಷಿಸದೆ ಎಲ್ಲರೂ ಪರಸ್ಪರ ಸಹೋದರತೆಯಿಂದ ಬಾಳಬೇಕಾಗಿದೆ. ನಮ್ಮ ಮಹಾನ್ ಪುರುಷರು ಇದನ್ನೆ ಹೇಳಿದ್ದು. ಎಲ್ಲರ ಒಳಿತನ್ನೆ ಅವರು ಬಯಸಿದ್ದರು, ಅದನ್ನು ನಾವು ಪಾಲಿಸಿಕೊಂಡು ಹೋಗಬೇಕಿದೆ” ಎಂದರು.

ಇದೇ ಸಂದರ್ಭದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆದ ಫಲಾನುಭವಿಗಳಿಗೆ ಸಚಿವರು ಹಕ್ಕು ಪತ್ರಗಳನ್ನು ವಿತರಿಸಿ. ಸಾರ್ವಜನಿಕರ ಅಹವಾಲುಗಳಾದ ಮನೆ ಮಂಜೂರಾತಿ. ವಿವಿಧ ಗ್ರಾಮಗಳಿಗೆ ಸ್ಮಶಾನ ಭೂಮಿ, ವಿಧವೆಯರಿಗೆ ಮಾಶಾಸನ, ಉದ್ಯೋಗಿನಿ ಯೋಜನೆ ಅಡಿಯಲ್ಲಿ ಸಾಲ ಮಂಜೂರಾತಿ. ಬಸ್, ಕುಡಿಯುವ ನೀರು, ಚರಂಡಿ, ಸ್ಮಶಾನ ಭೂಮಿ ಸಮಸ್ಯೆ ಸೇರಿದಂತೆ ಇತರೆ ಹಲವಾರು ಅಹವಾಲುಗಳನ್ನು ಸಾರ್ವಜನಿಕರಿಂದ ಸ್ವೀಕರಿಸಿದ ಸಚಿವರು ಅವುಗಳಿಗೆ ಪರಿಹಾರ ನೀಡುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ದಿಲೀಪ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ.ಎಂ. ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಔರಾದ ತಹಶಿಲ್ದಾರ ನಾಗಯ್ಯ ಹಿರೇಮಠ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆದ ಫಲಾನುಭವಿಗಳು.ವಿವಿಧ ಅಹವಾಲುಗಳೊಂದಿಗೆ ಆಗಮಿಸಿದ ಸಾರ್ವಜನಿಕರು ಸೇರಿದಂತೆ ಹಲವಾರು ಜನರು ಉಪಸ್ಥಿತರಿದ್ದರು.
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X