ಸುಧಾರಿಸಿದ ದ್ವಿತೀಯ ಪಿಯುಸಿ ಫಲಿತಾಂಶ : 24 ರಿಂದ 18ನೇ ಸ್ಥಾನಕ್ಕೇರಿದ ತುಮಕೂರು

Date:

ತುಮಕೂರು  ಜಿಲ್ಲೆಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸುಧಾರಣೆ ಕಂಡು ಬಂದಿದ್ದು, ಕಳೆದ ವರ್ಷ 24ನೇ ಸ್ಥಾನದಲ್ಲಿದ್ದ ಜಿಲ್ಲೆಯ ಫಲಿತಾಂಶ ಈ ವರ್ಷ 18ನೇ ಸ್ಥಾನಕ್ಕೇರಿದೆ ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ. ಬಾಲಗುರುಮೂರ್ತಿ ತಿಳಿಸಿದ್ದಾರೆ. 

- Advertisement -

ಜಿಲ್ಲೆಯಲ್ಲಿ ಪ್ರಾಂಶುಪಾಲರು, ಉಪನ್ಯಾಸಕರ ಶ್ರಮ ಹಾಗು ಇಲಾಖೆಯ ಕಾರ್ಯವೈಖರಿಯಿಂದ ಈ ವರ್ಷ ಉತ್ತಮ ಫಲಿತಾಂಶ ಬರಲು ಸಾಧ್ಯವಾಯಿತು. ಇಂಗ್ಲಿಷ್ ಭಾಷೆಯ ಕ್ಲಿಷ್ಟತೆಯನ್ನು ಹೋಗಲಾಡಿಸುವ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಈ ಶೈಕ್ಷಣಿಕ ವರ್ಷದ ಫೆಬ್ರವರಿ ತಿಂಗಳಲ್ಲಿ ಸುಮಾರು 6 ಶನಿವಾರಗಳಂದು ವಿದ್ಯಾರ್ಥಿಗಳಿಗಾಗಿ ಉಪನ್ಯಾಸಕರಿಂದ ನೋಡಲ್ ಕೇಂದ್ರಗಳಲ್ಲಿ ವಿಶೇಷ ತರಗತಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
1001276684

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಒಟ್ಟಾರೆ ಕಲಾ ವಿಭಾಗದಲ್ಲಿ 4318 ವಿದ್ಯಾರ್ಥಿಗಳಿಗೆ 2476, ವಿಜ್ಞಾನ ವಿಭಾಗದಲ್ಲಿ 10051 ವಿದ್ಯಾರ್ಥಿಗಳಿಗೆ 7784 ಹಾಗು ವಾಣಿಜ್ಯ ವಿಭಾಗದಲ್ಲಿ 8587 ವಿದ್ಯಾರ್ಥಿಗಳಿಗೆ 6274 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ 22,956 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು ಅದರಲ್ಲಿ 16,534 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದವರು ಕಲಾ ವಿಭಾಗದಲ್ಲಿ ತುಮಕೂರು ಎಂಪ್ರೆಸ್ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅದಿತಿ ಎಚ್. 584 ಅಂಕಗಳನ್ನು ಗಳಿಸುವ ಮೂಲಕ ಪ್ರಥಮ ಸ್ಥಾನ, ತಿಪಟೂರು ಬಸವೇಶ್ವರ ಪದವಿ ಪೂರ್ವ ಕಾಲೇಜಿನ ಗಣೇಶ್ 580 ಅಂಕಗಳು ದ್ವಿತೀಯ ಸ್ಥಾನ ಹಾಗೂ ಚೇತನ್ ಬಿ.ಆರ್. 579 ಅಂಕ ಪಡೆಯುವ ಮೂಲಕ ತೃತೀಯ ಸ್ಥಾನ ಗಳಿಸಿದ್ದಾರೆ.  

 ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದಿರುವ ವಿದ್ಯಾನಿಧಿ ಪದವಿ ಪೂರ್ವ ಕಾಲೇಜಿನ ಶ್ರೀಲಕ್ಷ್ಮೀ ಆರ್. 596 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇದೇ ಕಾಲೇಜಿನ ಎಸ್.ಎನ್. ಲಕ್ಷ್ಮೀ 593 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ, ವಿದ್ಯಾವಾಹಿನಿ ಪದವಿ ಪೂರ್ವ ಕಾಲೇಜಿನ ಎಚ್. ಎನ್. ಭುವನ್ ಹಾಗು ಜಮುನಾ ಎಸ್.ಜೆ. 592 ಅಂಕಗಳನ್ನು ಪಡೆದು ತೃತೀಯ ಸ್ಥಾನ ಹಂಚಿಕೊಂಡಿದ್ದಾರೆ.

1001276706

ವಿಜ್ಞಾನ ವಿಭಾಗದಲ್ಲಿ ಚಿಕ್ಕನಾಯಕನಹಳ್ಳಿ ವಿದ್ಯಾ ವಾರಿಧಿ ಪದವಿ ಪೂರ್ವ ಕಾಲೇಜಿನ ಆದಿತ್ಯ ಎಚ್.ಎಸ್. 594 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದು, ಶಾರದಂಬ ಪದವಿ ಪೂರ್ವ ಕಾಲೇಜಿನ ಕೀರ್ತನಾ ಎಂ.ಎನ್. ಹಾಗು ವಿಧ್ಯಾನಿಧಿ ಕಾಲೇಜಿನ ಶಿವಾನಿ ಎಸ್ ರೈ 593 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಗಳಿಸಿದ್ದಾರೆ. ತಿಪಟೂರಿನ ಎಸ್.ಎಸ್. ಪದವಿ ಪೂರ್ವ ಕಾಲೇಜಿನ ಹರ್‌ಪ್ರೀತ್ ಎ. ಹಾಗು ವಿಧ್ಯಾನಿಧಿ ಕಾಲೇಜಿನ ನಿತೀಶ್ ಕೆ.ಪಿ. 591 ಅಂಕಗಳನ್ನು ಪಡೆದು ತೃತೀಯ ಸ್ಥಾನ ಹಂಚಿಕೊAಡಿದ್ದಾರೆ ಎಂದು ತಿಳಿಸಿದ್ದಾರೆ. 

ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ಬರಲು ಜಿಲ್ಲಾ ಉಪನಿರ್ದೇಶಕರ ಶಿಸ್ತುಬದ್ಧ ಆಡಳಿತವೇ ಕಾರಣ ಎಂದು ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಪ್ರಭಾಕರ್ ರೆಡ್ಡಿ ತಿಳಿಸಿದ್ದಾರೆ. 

ಉಪನಿರ್ದೇಶಕರ ಕಾರ್ಯಶೀಲತೆ, ದಕ್ಷ ಆಡಳಿತ ಮತ್ತು ಶಿಸ್ತುಬದ್ಧ ಶೈಕ್ಷಣಿಕ ಚಟುವಟಿಕೆ ಹಾಗು ಜಿಲ್ಲೆಯ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಶ್ರಮದಿಂದ ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ಬರಲು ಸಾಧ್ಯವಾಯಿತು ಎಂದು ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಎನ್. ಮಹಾಲಿಂಗೇಶ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...