ದೇವರಾಜ ಅರಸು ನಾಡು ಕಂಡ ಮುತ್ಸದ್ದಿ ರಾಜಕಾರಣಿ: ಸಿಎಂ ಸಿದ್ದರಾಮಯ್ಯ ಬಣ್ಣನೆ

Date:

  • ರಾಜಕೀಯ ವ್ಯವಸ್ಥೆಯಲ್ಲಿ ಸಾಮಾಜಿಕ ನ್ಯಾಯ ತರಲು ಅರಸು ಶ್ರಮಿಸಿದರು
  • ಅರಸು ಸ್ಮರಣಾರ್ಥ ಮಾಲಿನ್ಯ ತಡೆಗಟ್ಟುವ ವಿಶೇಷ ಗಿಡ ನೆಟ್ಟ ಸಿದ್ದರಾಮಯ್ಯ

ದೇವರಾಜ ಅರಸು ಅವರು ನಾಡು ಕಂಡ ಮುತ್ಸದ್ದಿ ರಾಜಕಾರಣಿ. ಸರ್ಕಾರ ಗೌರವಯುತವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರ ಸ್ಮರಣೆ ಮಾಡಿದೆ. ಅವರು ಮುಖ್ಯಮಂತ್ರಿಯಾಗಿ ಹಾಗೂ ಅವರ ಜೀವಿತ ಕಾಲದಲ್ಲಿ ಮಾಡಿದ ಕೆಲಸ ನಮಗೆ ಸ್ಪೂರ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು.

ದೇವರಾಜ ಅರಸು ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ಮಾಲಿನ್ಯ ತಡೆಗಟ್ಟುವ ವಿಶೇಷ ಮಡಗಾಸ್ಕರ್ ದೇಶದ ಗಿಡ ನೆಟ್ಟು ಮಾತನಾಡಿದ ಅವರು, “ಅನೇಕ ಸಾಮಾಜಿಕ, ಕ್ರಾಂತಿಕಾರಿ ತೀರ್ಮಾನಗಳನ್ನು ಕೈಗೊಂಡಿದ್ದರು. ಭೂ ಸುಧಾರಣಾ ಕಾಯ್ದೆ, ಜೀತಪದ್ಧತಿ ಮುಕ್ತಿ, ಮಲಹೊರುವ ಪದ್ಧತಿಯನ್ನು ನಿಲ್ಲಿಸಿದ್ದು, ರೈತರ ಸಾಲ ವಿಮೋಚನಾ ಕಾಯ್ದೆ, ಹಾವನೂರು ಆಯೋಗ ರಚಿಸಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ, ಧ್ವನಿಯಿಲ್ಲದ ಜನರ ದನಿಯಾದರು. ಸಾಮಾಜಿಕ ನ್ಯಾಯದ ಹರಿಕಾರ” ಎಂದು ತಿಳಿಸಿದರು.

“ಸದಾ ಹಸಿರಾಗಿರುವ, ಸುಮಾರು 40 ಅಡಿ ಎತ್ತರ ಬೆಳೆಯುವ, ಮಾಲಿನ್ಯ ತಡೆಗಟ್ಟುವ ವಿಶೇಷ ಗಿಡವನ್ನು ಅರಸು ಅವರ ನೆನಪಿಗೆ ವಿಧಾನಸೌಧ ಆವರಣದಲ್ಲಿ ನೆಡಲಾಗಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಸ್ಮರಣೆ | ಎಲ್ಲಾ ಕಾಲಕ್ಕೂ ಸಲ್ಲುವ ಅರಸು ಚಿಂತನೆ

ರಾಜಕೀಯ ವ್ಯವಸ್ಥೆಯಲ್ಲಿ ಸಾಮಾಜಿಕ ನ್ಯಾಯ

ಅನೇಕ ಜನರನ್ನು ಶಾಸಕರನ್ನಾಗಿಸಿ ಅವರಿಗೆ ಪ್ರಾತಿನಿಧ್ಯ ನೀಡುವ ಕೆಲಸ ಮಾಡಿದರು. ರಾಜಕೀಯ ವ್ಯವಸ್ಥೆಯಲ್ಲಿಯೂ ಸಾಮಾಜಿಕ ನ್ಯಾಯ ತರಲು ಶ್ರಮಿಸಿದರು. ಅಧಿಕಾರ ಎಲ್ಲರಿಗೂ ದೊರೆಯಬೇಕೆಂಬ ನಂಬಿಕೆ ಉಳ್ಳವರಾಗಿದ್ದರು. ಉಳುವವನೆ ಭೂಮಿ ಒಡೆಯ ಎಂಬ ಕ್ರಾಂತಿಕಾರಿ ತೀರ್ಮಾನಗಳನ್ನು ಮಾಡಿದವರು. ಅವರ ಕೆಲಸಗಳನ್ನು ಮುಂದುವರೆಸಿಕೊಂಡು ಹೋಗುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ ಎಂದರು.

“ದೇವರಾಜ ಅರಸು ಅವರು ಕಾಂಗ್ರೆಸ್ ಪಕ್ಷದಿಂದ 1972 ರಿಂದ 80 ರವರೆಗೆ ಮುಖ್ಯಮಂತ್ರಿಯಾಗಿ ಮಾಡಿದ ಕೆಲಸಗಳು ಜನರ ಮನಸ್ಸಿನಲ್ಲಿ ಸದಾ ಉಳಿದಿವೆ” ಎಂದು ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಟ್ ಕಾಯಿನ್ ಹಗರಣ​ | ಸೈಬರ್ ಕ್ರೈಂ ಠಾಣೆ ಇನ್ಸ್​ಪೆಕ್ಟರ್ ಚಂದ್ರಾಧರ್​ ಬಂಧನ

ಬಿಟ್‌ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಇನ್ಸ್‌ಪೆಕ್ಟರ್ ಚಂದ್ರಾಧರ್ ಎಂಬುವವರನ್ನು ಸಿಐಡಿ ಪೊಲೀಸರು...

ಹಿಂದುತ್ವ | ಭಾರತೀಯ ಸಮಾಜವನ್ನು ಒಳಗಿನಿಂದಲೇ ವಂಚಿಸುವ ‘ಗೋಮುಖ ವ್ಯಾಘ್ರ’

ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ ಭಾರತದ ಅತಿದೊಡ್ಡ ರಾಜಕೀಯ ಶಕ್ತಿಯಾಗಿದೆ. ಆದರೆ,...

ಸಂತ್ರಸ್ತೆ ಅಪಹರಣ ಪ್ರಕರಣ | ಮೇ 31ಕ್ಕೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ತೀರ್ಪು

ಕೆ ಆರ್‌ ನಗರ ಮಹಿಳೆ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ...